ಜಿಲ್ಲಾ ನ್ಯಾಯಾಲಯ ರಸ್ತೆ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಲೋಬೋ
Team Udayavani, Jan 15, 2018, 9:58 AM IST
ಮಹಾನಗರ: ಬಹಳಷ್ಟು ವರ್ಷಗಳಿಂದ ಬೇಡಿಕೆಯಿರುವ ಜಿಲ್ಲಾ ನ್ಯಾಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಶಾಸಕ ಜೆ.ಆರ್. ಲೋಬೋ ಹೇಳಿದರು.
ರಸ್ತೆ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಲೋಕೋಪಯೊಗಿ ಇಲಾಖೆಯಿಂದ ಈ ರಸ್ತೆ ಅಭಿವೃದ್ಧಿಗೆ 11 ಕೋ.ರೂ. ಹಣವನ್ನು ಮಂಜೂರು ಮಾಡಿದೆ. ಪ್ರಸಕ್ತ ರಸ್ತೆ ಕಾಮಗಾರಿಯು ಭರದಿಂದ ಸಾಗುತ್ತಲಿದ್ದು, ಫೆಬ್ರವರಿ ಅಂತ್ಯದೊಳಗೆ ಪೂರ್ತಿಗೊಳಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಸುಮಾರು 280 ಮೀಟರ್ ಉದ್ದದ ರಸ್ತೆಯಾಗಿದ್ದು, ಇದರ ಅಗಲ 12 ಮೀಟರ್ ಆಗಿರುತ್ತದೆ. ಫುಟ್ ಪಾತ್, ನೀರು ಹರಿಯುವ ತೋಡು ನಿರ್ಮಿಸಲಾಗುವುದು. ವಿಸ್ತರಣೆ ಕಾಮಗಾರಿ ಪೂರ್ತಿಯಾದ ಕೂಡಲೇ ರಸ್ತೆ ಕಾಂಕ್ರೀಟ್ ಕಾಮಗಾರಿ ಪ್ರಾರಂಭಗೊಳಿಸಲಾಗುವುದು ಎಂದರು.
ಕಾರ್ಪೊರೇಟರ್ ಎ.ಸಿ. ವಿನಯ ರಾಜ್, ಜಿನೇಂದ್ರ, ಕೆ.ಎಸ್.ಆರ್.ಟಿ.ಸಿ. ನಿರ್ದೇಶಕ ಟಿ.ಕೆ. ಸುಧೀರ್, ಕೃತಿನ್ ಕುಮಾರ್, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಶ್ರೀಕಾಂತರಾಜ್, ಸಹಾಯಕ ಕಾರ್ಯಪಾಲಕ ಅಭಿಯಂತರ ರವಿ ಕುಮಾರ್, ಸಹಾಯಕ ಅಭಿಯಂತರ ಶ್ರೀಧರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.