ಜಿಲ್ಲಾ ಗೃಹರಕ್ಷಕ ದಳ ಅತ್ಯಂತ ಕ್ರಿಯಾಶೀಲ: ಜಿಲ್ಲಾಧಿಕಾರಿ
Team Udayavani, Dec 9, 2017, 11:03 AM IST
ಮೇರಿಹಿಲ್: ಜಿಲ್ಲಾ ಗೃಹರಕ್ಷಕ ದಳವು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತರ ಜಿಲ್ಲಾ ಘಟಕಗಳಿಗಿಂತ ಭಿನ್ನವಾಗಿದೆ. ಒಖೀ ಚಂಡಮಾರುತ ಸಹಿತ ಇತರ ಅವಘಡಗಳ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳವು ಜಿಲ್ಲಾಡಳಿತದೊಂದಿಗೆ ಹೊಂದಾಣಿಕೆಯಿಂದ ಸೇವೆ ನೀಡಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಹೇಳಿದರು. ಅವರು ಶುಕ್ರವಾರ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಜರಗಿದ ಅಖಿಲ ಭಾರತ ಗೃಹರಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿದರು.
ತಾವು ಬೇರೆ ಬೇರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಅಲ್ಲಿನ ಗೃಹರಕ್ಷಕ ದಳವನ್ನು ಹತ್ತಿರದಿಂದ ಕಂಡಿದ್ದು, ಇಲ್ಲಿನ ಗೃಹರಕ್ಷಕ ದಳದ ಸೇವೆ ತೃಪ್ತಿ ನೀಡಿದೆ. ಗೃಹರಕ್ಷಕ ದಳದಲ್ಲಿ ಸೇವೆ ನೀಡುತ್ತಿರುವ ಹೋಮ್‌ಗಾರ್ಡ್‌ಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದರು.
ಗೃಹರಕ್ಷಕ ದಳ ಮಾಜಿ ಕಮಾಂಡೆಂಟ್ ಬಿ.ಕೆ. ಶಿವಪ್ರಸಾದ್ ಮಾತನಾಡಿ, ಒಂದು ಅವಘಡ ನಡೆದಾಗ ತತ್‌ಕ್ಷಣ ಅಲ್ಲಿಗೆ ತಲುಪಿ ಸೇವೆ ನೀಡಬೇಕಾಗಿರುವುದರಿಂದ ಗೃಹ ರಕ್ಷಕ ದಳದ ಸೇವೆಗೆ ವಿಶೇಷ ಮೌಲ್ಯವಿದೆ ಎಂದರು.
ಜಿಲ್ಲಾ ಕಮಾಂಡೆಂಟ್ ಡಾ| ಮುರಲಿಮೋಹನ್ ಚೂಂತಾರು ಅವರು ಜಿಲ್ಲೆಯ ಗೃಹರಕ್ಷಕ ದಳದ ಸೇವೆಯನ್ನು ವಿವರಿಸಿದರು. ಈ ಬಾರಿ 250 ಮಂದಿ ಗೃಹರಕ್ಷಕ ಸಿಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಸೆಕೆಂಡ್ ಕಮಾಂಡೆಂಟ್ ಮಹಮ್ಮದ್ ಇಸ್ಮಾಯಿಲ್ ವೇದಿಕೆಯಲ್ಲಿದ್ದರು. ಮುಖ್ಯಮಂತ್ರಿಗಳು ಹಾಗೂ ರಾಷ್ಟ್ರಪತಿ ಪದಕ ಪಡೆದ ಉಪ ಕಮಾಂಡೆಂಟ್ ರಮೇಶ್, ಗೃಹರಕ್ಷಕ ದಳ ಘಟಕದ ಸುರೇಶ್ ಶೇಟ್, ಅಬ್ದುಲ್ ರವೂಫ್ ಅವರನ್ನು ಸಮ್ಮಾನಿಸಲಾಯಿತು. ಕಚೇರಿ ಅಧಿಕಾರಿ ಉಷಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಉಪ ಕಮಾಂಡೆಂಟ್ ರಮೇಶ್ ಸ್ವಾಗತಿಸಿದರು. ಜಯಾನಂದ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.