ಉದಯವಾಣಿ-ಕೆನರಾ “ಚಿಣ್ಣರ ಬಣ್ಣ’ -2019: ನ.3: ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆ
Team Udayavani, Nov 2, 2019, 3:18 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಉದಯವಾಣಿ, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಮತ್ತು ಉಡುಪಿ ಆರ್ಟಿಸ್ಟ್ಸ್ ಫೋರಂಗಳ ಆಶ್ರಯದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ “ಚಿಣ್ಣರ ಬಣ್ಣ’ ಚಿತ್ರಕಲಾ ಸ್ಪರ್ಧೆಯು ನ.3ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರ ತನಕ ಮಂಗಳೂರಿನ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲ್‌ನಲ್ಲಿ ನಡೆಯಲಿದೆ.
ಅವಿಭಜಿತ ದ.ಕ. ಜಿಲ್ಲೆಯ 8 ತಾಲೂಕುಗಳಲ್ಲಿ ನಡೆದ ತಾಲೂಕು ಮಟ್ಟದ “ಚಿಣ್ಣರ ಬಣ್ಣ’ ಸ್ಪರ್ಧೆಗಳಲ್ಲಿ ಸೀನಿಯರ್, ಜೂನಿಯರ್ ಮತ್ತು ಸಬ್ ಜೂನಿಯರ್ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು ಈ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹರಾಗಿದ್ದು, ಈಗಾಗಲೇ ಸ್ಪರ್ಧೆಗೆ ಆಹ್ವಾನ ನೀಡಿದವರು ಮಾತ್ರ ಭಾಗವಹಿಸಬಹುದು. 1ರಿಂದ 7ನೇ ತರಗತಿ ವಿದ್ಯಾರ್ಥಿಗಳು ಯಾವುದೇ ವಿಷಯಗಳಲ್ಲಿ ಚಿತ್ರ ಬರೆಯಬಹುದು. ಆದರೆ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ರಚಿಸಿದ್ದ ಚಿತ್ರಗಳನ್ನು ಮತ್ತೆ ಚಿತ್ರಿಸುವಂತಿಲ್ಲ. 8, 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಚಿತ್ರಕಲೆಯ ವಿಷಯವನ್ನು ಸ್ಥಳದಲ್ಲೇ ನೀಡಲಾಗುವುದು. ಸ್ಪರ್ಧೆಯ ಬಳಿಕ ನಡೆಯುವ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಣೆ ಮಾಡಲಿದ್ದಾರೆ.
ಸ್ಪರ್ಧೆಗೆ ಡ್ರಾಯಿಂಗ್ ಶೀಟ್‌ನ್ನು ಒದಗಿಸಲಾಗುವುದು. ಚಿತ್ರಕಲೆಗೆ ಸಂಬಂಧಪಟ್ಟ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು. ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ಮತ್ತು ಪ್ರೋತ್ಸಾಹಕ ಬಹುಮಾನ ನೀಡಲಾಗುವುದು. ಬಹುಮಾನ ನಗದು, ಫಲಕ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ. ಜಿಲ್ಲಾ ಮಟ್ಟದ ಸ್ಪರ್ಧೆಗಳ ಫಲಿತಾಂಶ ಮತ್ತು ಬಹುಮಾನ ವಿಜೇತರ ಚಿತ್ರಗಳನ್ನು “ಉದಯವಾಣಿ’ ದಿನಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.