ಮೂಲ್ಕಿಯಲ್ಲಿ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟ
Team Udayavani, Dec 15, 2017, 12:17 PM IST
ಮೂಲ್ಕಿ: ಸಂಘಟನೆಗಳ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳು ನಡೆದಾಗ ಯುವಕರ ಶ್ರಮ ಸದ್ಬಳಕೆಯಾಗಲು ಸಾಧ್ಯ ಎಂದು ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುನೀಲ್ ಆಳ್ವ ಹೇಳಿದರು. ಇಲ್ಲಿನ ಗಾಂಧಿ ಮೈದಾನದಲ್ಲಿ ಶಾಂಭವಿ ಯುವ ಸಂಗಮ ಮಟ್ಟು ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ಶಾಂಭವಿ ಟ್ರೋಫಿ -2017 ಅನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಯುವಕರ ಆಸಕ್ತಿಗೆ ಪೂರಕವಾದಂಥ ಉತ್ತಮ ಚಟುವಟಿಕೆಗಳನ್ನು ಸಂಘ ಸಂಸ್ಥೆಗಳು ಸಂಘಟಿಸಿದಾಗ ಮಕ್ಕಳು ದುಶ್ಚಟಗಳಿಂದ ದೂರವಿರುವಂಥ ವಾತಾವರಣ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು. ಮಟ್ಟು ಬಿಲ್ಲವ ಸಂಘದ ಅಧ್ಯಕ್ಷ ಉದಯ ಬಿ. ಅಮೀನ್ ಮಟ್ಟು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಪಂಚಾಯತ್ ಸದಸ್ಯರಾದ ಯೋಗೀಶ್ ಕೋಟ್ಯಾನ್, ಅಶೋಕ್ ಪೂಜಾರ, ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ದಯಾನಂದ ಮಟ್ಟು, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಕೋಟ್ಯಾನ್ ಮಟ್ಟು, ಜಯ ಕುಮಾರ್ ಮಟ್ಟು, ಕಿಶೋರ್ ಪಂಡಿತ್, ಸುಧೀರ್ ಕಕ್ವ, ಶಾಂಭವಿ ಯುವ ಸಂಗಮದ ಅಧ್ಯಕ್ಷ ಅವಿನಾಶ್ ಮೊದಲಾದವರು ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದರು. ಶ್ರೀಶ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.