ಇಂದು ಜಿಲ್ಲಾಮಟ್ಟದ ಪ.ಪೂ. ಕಾಲೇಜು ಖೋ-ಖೋ
Team Udayavani, Nov 12, 2018, 10:48 AM IST
ಸುಬ್ರಹ್ಮಣ್ಯ : ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇವುಗಳ ಆಶ್ರಯದಲ್ಲಿ ಸೋಮವಾರ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜು ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಲಿದೆ.
ಪಂದ್ಯಾಟವನ್ನು ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಉಪನಿರ್ದೇಶಕ ನಾಗರಾಜಪ್ಪ ಎಂ. ಅವರು ಉದ್ಘಾಟಿಸಲಿದ್ದಾರೆ. ಎಸ್‌ಎಸ್ ಪಿಯು ಕಾಲೇಜಿನ ಸಂಚಾಲಕ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ. ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದಾರೆ ಎಂದು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್ ತಿಳಿಸಿದ್ದಾರೆ.
ಸಮಾರೋಪ
ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕೆ. ಸಾವಿತ್ರಿ ವಹಿಸಲಿದ್ದಾರೆ. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್., ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕೇಶ್ವರ ಡಿ.ಆರ್. ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಎರಡು ವಿಭಾಗದಲ್ಲಿ ಜಿಲ್ಲೆಯಿಂದ ಒಟ್ಟು 16 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದೆ.
ಸಿದ್ಧತೆಯಲ್ಲಿ ಎನ್ನೆಸೆಸ್ ಸೇವೆ
ವಿದ್ಯಾಲಯದಲ್ಲಿ ನಡೆಯುವ ಖೊಖೋ ಪಂದ್ಯಾಟಕ್ಕೆ ಸಿದ್ಧತೆಗಳು ಪೂರ್ಣಗೊಂಡಿದೆ. ಎರಡು ದಿನಗಳಿಂದ ಅವಳಿ ಅಂಕಣಗಳನ್ನು ಸಿದ್ಧಪಡಿಸುವ ಕಾರ್ಯದಲ್ಲಿ ಕಾಲೇಜಿನ ಎನ್ನೆಸೆಸ್ ವಿದ್ಯಾರ್ಥಿಗಳು ಶ್ರಮ ನಿರತರಾಗಿದ್ದರು. ಕ್ರೀಡಾಂಗಣದ ಸುತ್ತ ಸ್ವಚ್ಛತೆ, ಅಂಕಣ ಸಿದ್ಧಪಡಿಸುವುದು ಮೊದಲಾದ ಸುಸಜ್ಜಿತ ವ್ಯವಸ್ಥೆ ಸಿದ್ಧಗೊಂಡಿದೆ. ಯೋಜನಾಧಿಕಾರಿ ಸೋಮಶೇಖರ ನಾಯಕ್ ಮಾರ್ಗದರ್ಶನದಲ್ಲಿ ಎನ್ನೆಸೆಸ್ ವಿದ್ಯಾರ್ಥಿಗಳು ಶ್ರಮದಾನ ನೆರವೇರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.