ಜಿಲ್ಲಾ ಯುವ ಪ್ರಶಸ್ತಿ, ಅತ್ಯುತ್ತಮ ಸಂಘ ಪ್ರಶಸ್ತಿ ಪ್ರದಾನ
Team Udayavani, Jan 8, 2018, 3:19 PM IST
ಸವಣೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಜನ ಒಕ್ಕೂಟ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಮೇಳ ಸಂಘಟನ ಸಮಿತಿ ಇದರ ವತಿಯಿಂದ ಕೊಡಮಾಡುವ ಜಿಲ್ಲಾ ಯುವಜನ ಒಕ್ಕೂಟದ ಪ್ರಶಸ್ತಿಯನ್ನು ಸವಣೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಯುವಜನಮೇಳದ ಸಂದರ್ಭ ಪ್ರದಾನ ಮಾಡಲಾಯಿತು. ಯುವಜನ ಚಟುವಟಿಕೆ, ಕಲೆ, ಸಾಮಾಜಿಕ ಬದ್ಧತೆ, ಸಂಘಟನೆ ಮೂಲಕ ಗಣನೀಯ ಸೇವೆ ಸಲ್ಲಿಸುತ್ತಿರುವ ದ.ಕ. ಜಿಲ್ಲೆಯ 5 ಯುವಕ ಮಂಡಲಗಳನ್ನು ಅತ್ಯುತ್ತಮ ಸಂಘ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು.
ಬೆಳ್ಳಾರೆ ಸ್ನೇಹಿತರ ಕಲಾ ಸಂಘ, ನೆಲ್ಯಾಡಿಯ ಗೆಳೆಯರ ಬಳಗ, ಬೆಳ್ತಂಗಡಿ ತಾಲೂಕಿನ ಕಾನರ್ಪ ಚಿರಂಜೀವಿ ಯುವಕ ಮಂಡಲ, ಬಂಟ್ವಾಳ ತಾಲೂಕಿನ ಕುಲಾಳು ಶ್ರೀ ವಾರಾಹಿ ಯುವಕ ಮಂಡಲ, ಮಂಗಳೂರು ತಾಲೂಕಿನ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ನ್ಪೋರ್ಟ್ಸ್ ಕ್ಲಬ್ ತಂಡಗಳಿಗೆ ಪುತ್ತೂರು ಎಪಿಎಂಸಿ ಅಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರ್ ಪ್ರಶಸ್ತಿ ನೀಡಿ ಅಭಿನಂದಿಸಿದರು.
ಸಮ್ಮಾನ ಸಮಾರಂಭದ ಅತಿಥಿಯಾಗಿ ಭಾಗವಹಿಸಿದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಯುವಕರು
ಸಮಾಜದ ಮುಖ್ಯವಾಹಿನಿಯಲ್ಲಿ ಸ್ವಾರ್ಥರಹಿತ, ಸಮರ್ಪಣಭಾವದೊಂದಿಗೆ ತೊಡಗಿಸಿಕೊಂಡು, ಸಮಾಜದ
ಅಭಿವೃದ್ಧಿಗಾಗಿ ಶ್ರಮಿಸಬೇಕು. ಸ್ವಾಮಿ ವಿವೇಕಾನಂದರ ಆದರ್ಶವನ್ನು ಮೈಗೂಡಿಸಿಕೊಂಡು ಯುವಜನಾಂಗ ಮುಂದುವರಿಯಬೇಕೆಂದರು.
ತಾ.ಪಂ. ಸದಸ್ಯೆ ಉಷಾ ಅಂಚನ್ ಮಾತನಾಡಿ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿ ಮುಳ್ಳು ಅವರ ನೇತೃತ್ವದಲ್ಲಿ ಒಕ್ಕೂಟದ ವತಿಯಿಂದ ಉತ್ತಮ ಕಾರ್ಯಗಳಾಗುತ್ತಿವೆ. ಮುಂದಿನ ದಿನಗಳಲ್ಲಿ ನಿಷ್ಕ್ರಿಯಗೊಂಡ ಯುವಕ-ಯುವತಿ ಮಂಡಲಗಳನ್ನು ಮತ್ತೆ ಸಕ್ರಿಯಗೊಳಿಸುವ ನಿಟ್ಟಿನಲ್ಲಿ ಒಕ್ಕೂಟ ಕಾರ್ಯೋನ್ಮುಖವಾಗಬೇಕೆಂದು ಅಭಿಪ್ರಾಯಪಟ್ಟರು.
ಯುವಕ ಯುವತಿಯರು ಯುವಜನಮೇಳಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಲ್ಲಿ ಸಾಕಷ್ಟು ಅನುಭವಗಳನ್ನು ಪಡೆಯಬಹುದು. ಧೈರ್ಯ, ತಾಳ್ಮೆ, ಸಹನೆ, ಸಂಘಟನೆ ಕುರಿತಾಗಿ ಪ್ರಾಯೋಗಿಕವಾಗಿ ತಿಳಿಯಬಹುದು ಎಂದು ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕ ರಾಕೇಶ್ ರೈ ಕೆಡೆಂಜಿ ಹೇಳಿದರು.
ಪುತ್ತೂರು ಎಪಿಎಂಸಿ ಅಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ, ಪುತ್ತೂರು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ರಾಜೇಶ್ವರಿ ಕೆ., ಸದಸ್ಯೆ ಲಲಿತಾ ಈಶ್ವರ, ಉದ್ಯಮಿ ಮಾಧವ ಗೌಡ ಕಾಮಧೇನು, ಸುಳ್ಯ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಪನ್ನೆ, ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ, ತಾಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಗಳಾದ ಮಾಮಚ್ಚನ್ ಎಂ.ಪುತ್ತೂರು,
ದೇವರಾಜ್ ಮುತ್ಲಾಜೆ ಸುಳ್ಯ, ನವೀನ್ ಬಂಟ್ವಾಳ, ಲಿಲ್ಲಿ ಪಾಯಸ್ ಮಂಗಳೂರು, ಪ್ರಭಾಕರ ನಾರಾವಿ ಬೆಳ್ತಂಗಡಿ,
ಉಪಸ್ಥಿತರಿದ್ದರು.
ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ಸ್ವಾಗತಿಸಿದರು. ನರೇಶ್ ಸಸಿಹಿತ್ಲು ನಿರೂ ಪಿಸಿ, ಸವಣೂರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ವಂದಿಸಿದರು.
ಜಿಲ್ಲಾ ಯುವ ಪ್ರಶಸ್ತಿ
ಅಳಿಕೆ ನವಚೇತನ ಯುವತಿ ಮಂಡಲದ ಅಧ್ಯಕ್ಷೆ ಅಮಿತಾ ಸಂಜೀವ ಮಿತ್ತಳಿಕೆ, ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ನ್ಪೋರ್ಟ್ಸ್ ಕ್ಲಬ್‌ನ ಜತೆ ಕಾರ್ಯದರ್ಶಿ ಸಂಪತ್ ಕುಮಾರ್, ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ದಿನೇಶ್ ಮೆದು, ಬೆಳ್ತಂಗಡಿ ಗುರುಮಿತ್ರ ಸಮೂಹ ಮಂಡಳಿಯ ಅಧ್ಯಕ್ಷ ಸ್ಮಿತೇಶ್ ಎಸ್. ಬಾರ್ಯ, ಗುತ್ತಿಗಾರು ಶಂಖಪಾಲ ಕ್ರೀಡಾ ಕ್ಲಬ್‌ನ ಸ್ಥಾಪಕಾಧ್ಯಕ್ಷ ಶಿವಪ್ರಕಾಶ್ ಕಡಪ್ಪಳ ಅಡ್ಡನಪಾರೆ ಅವರನ್ನು ಜಿಲ್ಲಾ ಯುವ ಪ್ರಶಸ್ತಿ ನೀಡಿ
ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ
Bantwal: ಕಂಬಳದ ತೆರೆಮರೆ ಹೀರೊಗಳ ದಾಖಲೀಕರಣ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Karkala: ಲೈಸೆನ್ಸ್ ಇಲ್ಲದ ವ್ಯಾಪಾರಕ್ಕೆ ಕಡಿವಾಣ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.