ಜಿಲ್ಲೆಯ ನಾಲ್ಕು’ಸಾಲು ಮರ ತಿಮ್ಮಕ್ಕ  ಟ್ರೀಪಾರ್ಕ್‌’ ಆಗಸ್ಟ್‌ಗೆಸಿದ್ಧ


Team Udayavani, May 23, 2018, 10:57 AM IST

23-may-5.jpg

ಮಹಾನಗರ: ಕಾಡು ಹಾಗೂ ವನ್ಯ ಮೃಗಗಳ ಸಂರಕ್ಷಣೆ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಲು ‘ಸಾಲು ಮರ ತಿಮ್ಮಕ್ಕ ಟ್ರೀ ಪಾರ್ಕ್‌’ ಎಂಬ ಯೋಜನೆಯಡಿ ದ.ಕ. ಜಿಲ್ಲೆಯಲ್ಲಿ ಒಟ್ಟು 6 ಪಾರ್ಕ್‌ಗಳನ್ನು ನಿರ್ಮಿಸಲು ಈಗಾಗಲೇ ಯೋಜನೆ ರೂಪಿಸಲಾಗಿದ್ದು, ಆ ಪೈಕಿ ಎರಡು ಪಾರ್ಕ್‌ ಗಳು ಈಗಾಗಲೇ ಸಾರ್ವಜನಿಕರ ಬಳಕೆಗೆ ಲಭ್ಯವಾಗಿವೆ. ಇನ್ನುಳಿದ ನಾಲ್ಕು ಟ್ರೀ ಪಾರ್ಕ್‌ ಗಳು ಮುಂದಿನ ಮೂರು ತಿಂಗಳಲ್ಲಿ ಕಾರ್ಯಾರಂಭವಾಗಲಿವೆ.

ಒಟ್ಟು 6 ಪಾರ್ಕ್‌ಗಳಲ್ಲಿ 2 ಪಾರ್ಕ್‌ಗಳ ಸಂಪೂರ್ಣ ಕಾಮಗಾರಿ ಮುಗಿದು ಅವುಗಳು ಈಗಾಗಲೇ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದ್ದು, ಉಳಿದ ನಾಲ್ಕು ಪಾರ್ಕ್‌ಗಳನ್ನಾಗಿ ಪರಿವರ್ತಿಸುವ ಕೆಲಸ ನಡೆಯುತ್ತಿದೆ. ಅರಣ್ಯ ಇಲಾಖೆಯ ಈ ಯೋಜನೆ 2016-17ರಲ್ಲಿ ಜಾರಿಗೆ ಬಂದಿದ್ದು, ಆ ಪ್ರಕಾರ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಇಂತಹ ಒಟ್ಟು 50 ಟ್ರೀ ಪಾರ್ಕ್‌ಗಳನ್ನು ನಿರ್ಮಿಸುವ ಗುರಿ ಹೊಂದಲಾಗಿತ್ತು. ಅದರಂತೆ ನಗರದ ಹೊರವಲಯದ ತಣ್ಣೀರುಬಾವಿಯಲ್ಲಿ ಹಾಗೂ ಬಂಟ್ವಾಳದ ಐಬಿ ಕಚೇರಿ ಬಳಿಯಲ್ಲಿ ನಿರ್ಮಾಣಗೊಂಡಿರುವ ಟ್ರೀ ಪಾರ್ಕ್‌ ಈಗಾಗಲೇ ಸಾರ್ವಜನಿಕರಿಗಾಗಿ ತೆರೆದುಕೊಂಡಿದೆ. ಉಳಿದಂತೆ ಬಂಟ್ವಾಳದ ಆಲಂಪುರಿ, ಬೆಳ್ತಂಗಡಿಯ ಕಲ್ಲುಗುಡ್ಡೆ, ಪುತ್ತೂರಿನ ಬಿರುಮಲೆಗುಡ್ಡೆ ಹಾಗೂ ಸುಳ್ಯ ತಾಲೂಕು ಸುಬ್ರಹ್ಮಣ್ಯದ ಕುಮಾರಧಾರ ನದಿ ತಟಗಳಲ್ಲಿ ಈಗಾಗಲೇ ಸ್ಥಳಗಳನ್ನು ಗುರುತಿಸಲಾಗಿದ್ದು ಕೆಲಸ ಕಾರ್ಯಗಳು ನಡೆಯುತ್ತಿವೆ.

ಈ ಟ್ರೀ ಪಾರ್ಕ್‌ಗಳಲ್ಲಿ ಬಂಟ್ವಾಳದ ಆಲಂಪುರಿ, ಬೆಳ್ತಂಗಡಿಯ ಕಲ್ಲುಗುಡ್ಡೆ ಹಾಗೂ ಪುತ್ತೂರಿನ ಬಿರುಮಲೆಗುಡ್ಡೆಯ ಸ್ಥಳಗಳು ಬೆಟ್ಟದ ಅಂಚಿನಲ್ಲಿದ್ದು ನಗರದಿಂದ ಬರುವ ಪ್ರವಾಸಿಗರಿಗೆ ಕಾಡು ಹಾಗೂ ಬೆಟ್ಟದ ನೈಜತೆಯನ್ನು ಆನುಭವಿಸುವ ಅವಕಾಶಗಳಿವೆ. ಈ ಮೂರು ಸ್ಥಳಗಳಲ್ಲಿ ಟ್ರೀ ಪಾರ್ಕ್‌ನ ಕೆಲಸ ಅರ್ಧದಷ್ಟು ಪೂರ್ಣಗೊಂಡಿದ್ದು, ಆಗಸ್ಟ್‌ ತಿಂಗಳಾಂತ್ಯಕ್ಕೆ ಉದ್ಘಾಟನೆಗೊಳ್ಳಲಿವೆ. ಸುಬ್ರಹ್ಮಣ್ಯದ ಕುಮಾರಧಾರಾ ನದಿ ತಟದಲ್ಲಿರುವ ಸ್ಥಳವನ್ನು ಟ್ರೀ ಪಾರ್ಕ್‌ಗಾಗಿ ಆಯ್ಕೆ ಮಾಡಿ ಸರ್ವೆ ಕಾರ್ಯವೂ ಮುಗಿದಿದ್ದು, ಆ ವೇಳೆಗೆ ಲೋಕಾರ್ಪಣೆಗೊಳ್ಳುವ ಸಾಧ್ಯತೆಯಿದೆ. 

ಟ್ರೀ ಪಾರ್ಕ್‌ ಹೇಗಿರುತ್ತದೆ?
ಸಾಲು ಮರ ತಿಮ್ಮಕ್ಕ ಹೆಸರಿನೊಂದಿಗೆ ನಿರ್ಮಿತಗೊಳ್ಳುವ ಈ ಟ್ರೀ ಪಾರ್ಕ್‌ನಲ್ಲಿ ಕಲ್ಲು ಬೆಂಚುಗಳು, ಕುಡಿಯುವ ನೀರಿನ ವ್ಯವಸ್ಥೆ, ವಾಕಿಂಗ್‌ ಪಾತ್‌, ಕಾಡನ್ನು ಹೊಕ್ಕು ಅಲ್ಲಿನ ವನ್ಯ ಸಂಪತ್ತನ್ನು ವೀಕ್ಷಣೆ ಮಾಡಿದಂತೆ ಅನುಭವ ನೀಡುವ ವ್ಯವಸ್ಥೆ, ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ನೀಡುವ ಆ್ಯಂಫಿ ಥಿಯೇಟರ್‌, ಶೌಚಾಲಯದ ವ್ಯವಸ್ಥೆ, ಔಷಧೀಯ ಸಸ್ಯ ಹಾಗೂ ವಿವಿಧ ಗಿಡಮೂಲಿಕೆಗಳ ಪ್ರದರ್ಶನ ಇರಲಿದೆ. ಇದಲ್ಲದೆ ಮಕ್ಕಳು ಮೋಜನ್ನನುಭವಿಸಲು ಅನುಕೂಲವಾಗುವಂತೆ ಪ್ರತ್ಯೇಕ ಸ್ಥಳವನ್ನೂ ನಿರ್ಮಿಸಲಾಗುತ್ತದೆ. ಪ್ರತಿಯೊಂದು ಪಾರ್ಕ್‌ಗೂ ಕನಿಷ್ಠ 50 ಲಕ್ಷ ರೂಪಾಯಿ ವ್ಯಯಿಸುವ ಉದ್ದೇಶ ಹೊಂದಿದ ಅರಣ್ಯ ಇಲಾಖೆ, ಉಳಿದಂತೆ ಆಯಾ ಪ್ರದೇಶಕ್ಕೆ ತಕ್ಕಂತೆ ವಿವಿಧ ವ್ಯವಸ್ಥೆ ಕಲ್ಪಿಸಲು ಹಣ ವ್ಯಯಿಸಲಾಗುತ್ತದೆ ಎನ್ನುತ್ತಾರೆ ಅರಣ್ಯ ಇಲಾಖೆಯ ಅಧಿಕಾರಿಗಳು.

ವನ್ಯಮೃಗಗಳ ಸಂರಕ್ಷಣೆಯೇ ಗುರಿ
ಜನರಲ್ಲಿ ಪರಿಸರ ಪ್ರಜ್ಞೆ ಮೂಡಿಸಿ ವನ, ವನ್ಯಮೃಗಗಳ ಸಂರಕ್ಷಣೆಯಲ್ಲಿ ಜನರನ್ನು ತೊಡಗಿಸಿಕೊಳ್ಳುವುದೇ ಅರಣ್ಯ ಇಲಾಖೆಯ ಗುರಿ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಒಂದೊಂದು ಟ್ರೀ ಪಾರ್ಕ್‌ ನಿರ್ಮಿಸುವ ಗುರಿ ಹೊಂದಲಾಗಿದ್ದು ಮುಂದಿನ ನಾಲ್ಕು ವರ್ಷಗಳಲ್ಲಿ ಈ ಯೋಜನೆ ಕಾರ್ಯಗತಗೊಳ್ಳಲಿದೆ. ಈ ಟ್ರೀ ಪಾರ್ಕ್‌ಗಳ ಕೆಲಸ ಸಂಪೂರ್ಣಗೊಂಡ ಬಳಿಕ ಅತೀ ಕಡಿಮೆ ಪ್ರವೇಶ ಶುಲ್ಕ ನಿಗದಿಗೊಳಿಸಿ ಲೋಕಾರ್ಪಣೆ ಮಾಡಲಾಗುವುದು.
– ಡಾ| ವಿ. ಕರಿಕಳನ್‌,
ಅರಣ್ಯ ಸಂರಕ್ಷಣಾಧಿಕಾರಿ, ದ.ಕ. ಜಿಲ್ಲೆ

ಗಣೇಶ್‌ ಮಾವಂಜಿ

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.