ದ.ಕ. ಜಿಲ್ಲೆಯ 80 ಕಡೆ ಕೊರೊನಾ ತಪಾಸಣೆ ಕೇಂದ್ರ ಕಾರ್ಯಾರಂಭ


Team Udayavani, Mar 14, 2020, 6:26 AM IST

careful-of-corona-2

ಮಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿ ಆವರಿಸಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ತೀವ್ರ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ವಿಮಾನ ನಿಲ್ದಾಣ, ಎನ್‌ಎಂಪಿಟಿ ಸೇರಿದಂತೆ 80 ಕಡೆಗಳಲ್ಲಿ ಕೊರೊನಾ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ.

ಪ್ರಸ್ತುತ ಇಡೀ ಜಗತ್ತಿನಲ್ಲಿ ಕೊರೊನಾ ಭೀತಿ ಆವರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೂ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗದಿದ್ದರೂ ಮುಂದೆ ಹರಡ ದಂತೆ ತಡೆಯುವ ಸಲುವಾಗಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ. ಕೊರೊನಾಕ್ಕೆ ಕಾರಣವಾಗುವ ಲಕ್ಷಣಗಳುಳ್ಳ ಯಾವುದೇ ರೋಗ ಮನುಷ್ಯನನ್ನು ಬಾಧಿಸಿದರೂ ಆತನನ್ನು ಸರಿಯಾಗಿ ಪರಿಶೀಲಿಸಿ ಆತನಿಗಿರುವ ಕಾಯಿಲೆಯನ್ನು ಪತ್ತೆಹಚ್ಚುವುದು ಅವಶ್ಯ. ಅದಕ್ಕಾಗಿಯೇ ಜಿಲ್ಲೆಯಲ್ಲಿ 80 ಕಡೆಗಳಲ್ಲಿ ಕೊರೊನಾ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ.

ವೆನ್ಲಾಕ್ ಮತ್ತು ಲೇಡಿಗೋಶನ್‌ ಜಿಲ್ಲಾಸ್ಪತ್ರೆಗಳಲ್ಲಿ ಮಾತ್ರವಲ್ಲದೆ, ಜಿಲ್ಲೆಯ 6 ಸಮುದಾಯ ಆರೋಗ್ಯ ಕೇಂದ್ರ, 66 ಪ್ರಾಥಮಿಕ ಆರೋಗ್ಯ ಕೇಂದ್ರ, 4 ತಾಲೂಕು ಆಸ್ಪತ್ರೆಗಳಲ್ಲಿ ಕೊರೊನಾ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. ಜನರು ಅಗತ್ಯ ಬಿದ್ದಲ್ಲಿ ಸನಿಹದ ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬಹುದು.

ಕಾರ್ಯಾಚರಣೆ ಆರಂಭ
ಎಲ್ಲ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳ ವೈದ್ಯರು ಹಾಗೂ ಸಿಬಂದಿಗೆ ಕೊರೊನಾ ಪ್ರಕರಣಗಳು ಕಂಡುಬಂದಲ್ಲಿ ಅದನ್ನು ನಿರ್ವಹಿಸ ಬೇಕಾದ ಜವಾಬ್ದಾರಿಗಳ ಬಗ್ಗೆ ಈಗಾಗಲೇ ತರಬೇತಿ ನೀಡಲಾಗಿದೆ. ಎಲ್ಲ ಕಡೆಗಳಲ್ಲೂ ಶುಕ್ರವಾರ ದಿಂದಲೇ ತಪಾಸಣಾ ಕೇಂದ್ರಗಳು ಕಾರ್ಯಾ ರಂಭಿಸಿವೆ. ವೆನಾÉಕ್‌, ಲೇಡಿಗೋಶನ್‌ ಆಸ್ಪತ್ರೆ, ವಿಮಾನ ನಿಲ್ದಾಣ ಮತ್ತು ಎನ್‌ಎಂಪಿಟಿ ಯಲ್ಲಿ ಈ ಸೇವೆ 24×7 ಲಭ್ಯ ವಿದ್ದರೆ, ತಾಲೂಕು ಆಸ್ಪತ್ರೆ, ಪ್ರಾ. ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಬೆಳಗ್ಗಿನಿಂದ ಸಂಜೆ ತನಕ ಲಭ್ಯವಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಜೇಶ್‌ ತಿಳಿಸಿದ್ದಾರೆ. ಅಗತ್ಯ ಬಿದ್ದಲ್ಲಿ ರೋಗಿಗಳ ಗಂಟಲ ಸ್ರಾವದ ಮಾದರಿ ತೆಗೆದು ಪರೀಕ್ಷೆಗೆ ಕಳುಹಿಸಿಕೊಡಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಆರೋಗ್ಯ ಕೇಂದ್ರ ಸಂಪರ್ಕಿಸಿ
ವಿದೇಶಗಳಿಂದ ಆಗಮಿಸುವ ಪ್ರಯಾ ಣಿಕರಲ್ಲಿ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ, ಗಂಟಲು ನೋವು ಕಂಡುಬಂದಲ್ಲಿ ಅಥವಾ ಯಾವುದೇ ಮಾಹಿತಿ ಬೇಕಾದಲ್ಲಿ ತತ್‌ಕ್ಷಣ ಸಹಾಯವಾಣಿ ಸಂಖ್ಯೆ 104/ 1077 ಅಥವಾ ದೂ.ಸಂ.: 0824- 2442590ನ್ನು ಸಂಪರ್ಕಿಸಬಹುದು. ಕೊರೊನಾದ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಬಹುದು.

ಎಲ್ಲೆಲ್ಲಿ ತಪಾಸಣೆ?
ಸಮುದಾಯ ಆರೋಗ್ಯ ಕೇಂದ್ರಗಳು: ಮೂಲ್ಕಿ, ಮೂಡುಬಿದಿರೆ, ಬಂಟ್ವಾಳ ತಾಲೂಕಿನ ವಾಮದಪದವು, ವಿಟ್ಲ; ಪುತ್ತೂರು ತಾಲೂಕಿನ ಕಡಬ, ಉಪ್ಪಿನಂಗಡಿ, ಜಿ.ಎಚ್‌. ಪುತ್ತೂರು ಕೇಂದ್ರಗಳಲ್ಲಿ ಕೊರೊನಾ ತಪಾಸಣೆ ಮಾಡಲಾಗುತ್ತದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳು: ಮಂಗಳೂರು ತಾಲೂಕಿನ ಕೋಟೆಕಾರು, ಉಳ್ಳಾಲ, ನಾಟೆಕಲ್‌, ಬೋಳಿಯಾರು, ಅಂಬ್ಲಿಮೊಗರು, ಅಡ್ಯಾರ್‌, ಗಂಜಿಮಠ, ಕುಡುಪು, ಕೊಂಪದವು, ಕುಪ್ಪೆಪದವು, ಬಜಪೆ, ಕಟೀಲು, ಆತೂರ್‌ ಕೆಮ್ರಾಲ್‌, ಕಾಟಿಪಳ್ಳ, ಬೋಂದೆಲ್‌, ಸುರತ್ಕಲ್‌, ಶಿರ್ತಾಡಿ, ಪಾಲಡ್ಕ, ಕಲ್ಲಮುಂಡ್ಕೂರು, ಬೆಳುವಾಯಿ, ನೆಲ್ಲಿಕಾರು, ಬಂಟ್ವಾಳ ತಾಲೂಕಿನ ಮಾಣಿ, ಪುಣಚ, ಪಂಜಿಕಲ್ಲು, ಮಂಚಿ, ಸಜಿಪನಡು, ಪುದು, ಕಲ್ಲಡ್ಕ ಬಾಳ್ತಿಲ, ಕುರ್ನಾಡು, ಪುಂಜಾಲಕಟ್ಟೆ, ದೈವಸ್ಥಳ, ಅಡ್ಯನಡ್ಕ, ಬೆಂಜನಪದವು, ರಾಯಿ, ಕನ್ಯಾನ, ನಾವೂರು, ಪೆರುವಾಯಿ, ಅಳಿಕೆ; ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಣಿಯೂರು, ವೇಣೂರು, ಇಂದಬೆಟ್ಟು, ಅಳದಂಗಡಿ, ಉಜಿರೆ, ನೆರಿಯ, ಹತ್ಯಡ್ಕ, ನಾರಾವಿ, ಪಡಂಗಡಿ, ಕೊಕ್ಕಡ, ಧರ್ಮಸ್ಥಳ; ಪುತ್ತೂರು ತಾಲೂಕಿನ ಕಾಣಿ ಯೂರು, ಸರ್ವೆ, ಪಾಣಾಜೆ, ನೆಲ್ಯಾಡಿ, ಕೊಯಿಲ, ಕೊಳ್ತಿಗೆ, ಈಶ್ವರಮಂಗಲ, ಶಿರಾಡಿ, ತಿಂಗಳಾಡಿ, ಪಾಲ್ತಾಡಿ; ಅರಂತೋಡು, ಬೆಳ್ಳಾರೆ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ಕೊಲ್ಲಮೊಗ್ರು ಕೇಂದ್ರಗಳಲ್ಲಿ ತಪಾಸಣೆ ಕೇಂದ್ರ ತೆರೆಯಲಾಗಿದೆ.

ತಾಲೂಕು ಆಸ್ಪತ್ರೆಗಳು:
ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಆಸ್ಪತ್ರೆಗಳಲ್ಲಿಯೂ ಕೊರೊನಾ ತಪಾಸಣೆಗಾಗಿ ಕೇಂದ್ರ ತೆರೆಯಲಾಗಿದೆ.

685 ಮಂದಿಯ ತಪಾಸಣೆ
 ವಿದೇಶದಿಂದ ಬಂದವರ ಮೇಲೆ ನಿಗಾ
 ನಿಗದಿತ ಕಾರ್ಯಕ್ರಮಗಳು ರದ್ದು

ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ಮುಂದುವರಿದಿದ್ದು, ಶುಕ್ರವಾರ ವಿಮಾನ ನಿಲ್ದಾಣ ಮತ್ತು ಹಳೆಬಂದರಿ ನಲ್ಲಿ 685 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ವಿದೇಶದಿಂದ ಆಗಮಿಸಿದ ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ವೈದ್ಯಕೀಯ ನಿಗಾದಲ್ಲಿರ ಬೇಕೆಂದು ಜಿಲ್ಲಾಡಳಿತ ಸೂಚಿಸಿದೆ.

6 ಮಂದಿ ದಾಖಲು
ಜ್ವರ, ಶೀತ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ವಿದೇಶದಿಂದ ಬಂದ ಆರು ಮಂದಿಯನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿಕೊಳ್ಳಲಾಗಿದೆ. ಈಗಾಗಲೇ ಅವರ ಗಂಟಲಿನ ಸ್ರಾವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, 4 ವರದಿ ಬಂದಿದ್ದು ಎಲ್ಲವೂ ನೆಗೆಟಿವ್‌ ಬಂದಿದೆ. ಇನ್ನಿಬ್ಬರ ವರದಿ ಇನ್ನಷ್ಟೇ ಬರಬೇಕಾಗಿದೆ.

ಮಂಗಳೂರಿನ ವ್ಯಕ್ತಿಗೆ ಸೋಂಕು ಇಲ್ಲ
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಮಂಗಳೂರಿನ ವ್ಯಕ್ತಿಯ ರಕ್ತದ ಮಾದರಿ ಪರೀಕ್ಷೆಯಲ್ಲಿ ಸೋಂಕು ಇಲ್ಲವೆಂದು ಬಂದಿದೆ. ಲಕ್ಷದ್ವೀಪ ದಿಂದ ಮಂಗಳೂರಿಗೆ ಆಗಮಿಸಿದ ಹಡಗಿನಲ್ಲಿದ್ದ ಪ್ರಯಾಣಿಕರನ್ನು ಶುಕ್ರವಾರ ಹಳೆ ಬಂದರಿನಲ್ಲಿ ತಪಾಸಣೆಗೊಳಪಡಿಸಲಾಗಿದೆ. ಚೀನ, ಇಟೆಲಿ, ಇರಾನ್‌ ಮತ್ತು ದ. ಕೊರಿಯಾ ದೇಶಗಳಿಂದ ಆಗಮಿಸಿರುವ ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ವೈದ್ಯಕೀಯ ನಿಗಾದಲ್ಲಿ ಇರಬೇಕು ಎಂದು ಸೂಚಿಸಲಾಗಿದೆ.

ಪುಟಾಣಿಗಳಿಗೆ ರಜೆ
ಜಿಲ್ಲೆಯ ಎಲ್ಲ ಅಂಗನವಾಡಿ, ನರ್ಸರಿ ಮತ್ತು ಎಲ್‌ಕೆಜಿ/ಯುಕೆಜಿ ಸಂಸ್ಥೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಬಸ್‌ಗಳಿಗೆ ಔಷಧ ಸಿಂಪಡಣೆ
ಸೋಂಕು ಹರಡದಂತೆ ಕೆಎಸ್ಸಾರ್ಟಿಸಿ, ವೋಲ್ವೋ ಬಸ್‌ಗಳಲ್ಲಿ ಪ್ರತಿದಿನ ಔಷಧ ಸಿಂಪಡಣೆ ಕಾರ್ಯ ನಡೆಯುತ್ತಿದೆ.

ಕಾರ್ಯಕ್ರಮ ಮುಂದೂಡಿಕೆ
ಸಭೆ ಸಮಾರಂಭಗಳ ಆಚರಣೆಗೆ ಸರಕಾರ ಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ
ಆಯೋಜಿತವಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

ಮಾ. 14ರಂದು ಬೆಳಗ್ಗೆ 10 ಗಂಟೆಗೆ ದ.ಕ. ಜಿಪಂ ಸಭಾಂಗಣದಲ್ಲಿ ನಡೆಯಬೇಕಿದ್ದ ವಿಶ್ವ ಗ್ರಾಹಕ ದಿನಾಚರಣೆ, ಪುರಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಬೇಕಿದ್ದ ರೈತರ, ಸಹಕಾರಿಗಳ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಸಮ್ಮೇಳನ, ಮಾ. 15ರಂದು ನಡೆಯಬೇಕಿದ್ದ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ, ಹಂಪನಕಟ್ಟೆ ವಿ.ವಿ. ಕಾಲೇಜಿನಲ್ಲಿ ಮಾ. 16 ಮತ್ತು 17ಕ್ಕೆ ನಿಗದಿಯಾಗಿದ್ದ ಪ್ರತಿಭಾ ದಿನಾಚರಣೆ, ಮಾ. 14 ಮತ್ತು 15ರಂದು ಕದ್ರಿ ಪಾರ್ಕ್‌ ನಲ್ಲಿ ನಡೆಸಲು ಉದ್ದೇಶಿಸಿದ್ದ “ಸಾನಿಧ್ಯ ಉತ್ಸವ-2020′ ಕಾರ್ಯಕ್ರಮಗಳು ಮುಂದೂಡಿಕೆಯಾಗಿವೆ. ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಶನಿವಾರ ನಡೆಯಬೇಕಿದ್ದ ಮದುವೆ ಆರತಕ್ಷತೆಯೊಂದನ್ನೂ ಮುಂದೂಡಲಾಗಿದೆ.

ತಪಾಸಣೆ ಕೇಂದ್ರ
ಎನ್‌ಎಂಪಿಟಿ, ವಿಮಾನ ನಿಲ್ದಾಣ, ವೆನ್ಲಾಕ್, ಲೇಡಿಗೋಶನ್‌ 4 ತಾಲೂಕು ಆಸ್ಪತ್ರೆ 66 ಪ್ರಾ.ಆ. ಕೇಂದ್ರಗಳು 6 ಸಮುದಾಯ ಆ. ಕೇಂದ್ರಗಳು

ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಈವರೆಗೆ ಪತ್ತೆಯಾಗಿಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ. ಏನೇ ಸಲಹೆ, ಮಾರ್ಗದರ್ಶನ ಬೇಕಿದ್ದರೆ, ಗೊಂದಲಗಳಿದ್ದಲ್ಲಿ ಹತ್ತಿರದ ತಾಲೂಕು ಆಸ್ಪತ್ರೆ, ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಬಹುದು.
– ಡಾ| ರಾಜೇಶ್‌,  ಜಿಲ್ಲಾ ಆರೋಗ್ಯಾಧಿಕಾರಿ

ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಗಂಟಲಿನ ಸ್ರಾವ ಪರೀಕ್ಷೆ ಮಾಡುವ ಪರೀಕ್ಷಾ ಕೇಂದ್ರವನ್ನು ದ.ಕ. ಜಿಲ್ಲೆಯಲ್ಲಿ ತೆರೆಯಬೇಕೆಂಬ ಮನವಿಯನ್ನು ಸರಕಾರಕ್ಕೆ ಕಳುಹಿಸಲಾಗಿದೆ. ಸರಕಾರದ ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇವೆ.
– ಸಿಂಧೂ ಬಿ. ರೂಪೇಶ್‌, ದ.ಕ. ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MNG-Falnir

Mangaluru: ಬೊಲೆರೋ ವಾಹನಕ್ಕೆ ಆಕಸ್ಮಿಕ‌ ಬೆಂಕಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.