ದ.ಕ. ಜಿಲ್ಲೆ: 15 ಮಂದಿಗೆ ಕೋವಿಡ್ ಸೋಂಕು
Team Udayavani, Nov 7, 2021, 5:05 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶನಿವಾರ 15 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಸಾವು ವರದಿಯಾಗಿಲ್ಲ. ಜಿಲ್ಲೆಯಲ್ಲಿ 22 ಮಂದಿ ಗುಣಮುಖರಾಗಿದ್ದಾರೆ. ಸದ್ಯ 179 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಶೇ. 0.29 ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ.
ಉಡುಪಿ: 10 ಮಂದಿಗೆ ಸೋಂಕು
ಉಡುಪಿ: ಜಿಲ್ಲೆಯಲ್ಲಿ ಶನಿವಾರ 10 ಮಂದಿಗೆ ಸೋಂಕು ದೃಢಪಟ್ಟಿದೆ. 6 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 41ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.
ಕಾಸರಗೋಡು: 99 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 99 ಮಂದಿಗೆ ಸೋಂಕು ದೃಢಪಟ್ಟಿದ್ದು 110 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 729 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ.
ಕೇರಳದಲ್ಲಿ 6,546 ಮಂದಿಗೆ ಸೋಂಕು
ರಾಜ್ಯದಲ್ಲಿ ಶನಿವಾರ 6,546 ಮಂದಿಗೆ ಸೋಂಕು ದೃಢಪಟ್ಟಿದ್ದು 6,934 ಮಂದಿ ಗುಣಮುಖರಾಗಿದ್ದಾರೆ. 50 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಇರುವ ರಾಜ್ಯಗಳಲ್ಲಿ ಇಂಧನ ಬೆಲೆ ಇಳಿಕೆ ಆಗಿದೆಯಾ: ಪ್ರಹ್ಲಾದ ಜೋಶಿ
ಕೊಡಗು: ಒಬ್ಬರಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ಶನಿವಾರ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಸದ್ಯ 97 ಸಕ್ರಿಯ ಪ್ರಕರಣಗಳಿದ್ದರೆ 33 ಮಂದಿ ಬಿಡುಗಡೆಯಾಗಿದ್ದಾರೆ. ಯಾವುದೇ ಸಾವು ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.