ದ.ಕ.: ಫೆ. 25ರಂದು ಹರತಾಳ


Team Udayavani, Feb 22, 2017, 2:04 PM IST

flag.jpg

ವಿಶ್ವ ಹಿಂದೂ ಪರಿಷತ್‌, ಹಿಂದೂ ಜಾಗರಣಾ ವೇದಿಕೆ ಕರೆ
ಮಂಗಳೂರು
: ಕೇರಳದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹಾಗೂ ಮುಗ್ಧರ ಹತ್ಯೆ ತಡೆಯಲು ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ವಿಫಲರಾಗಿದ್ದು ಅವರ ಮಂಗಳೂರು ಭೇಟಿಯನ್ನು ಪ್ರತಿಭಟಿಸಿ ಫೆ. 25ರಂದು ದ.ಕ. ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಹರತಾಳಕ್ಕೆ ಕರೆ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಹಿಂದೂ ಜಾಗರಣ ವೇದಿಕೆ ತಿಳಿಸಿವೆ.

ಪ್ರತಿಭಟನಾ ಮೆರವಣಿಗೆ
ಈ ಹಿಂದೆ ಮಂಗಳೂರು ಹರತಾಳಕ್ಕೆ ಕರೆಕೊಟ್ಟಿರುವುದನ್ನು ಇಡೀ ಜಿಲ್ಲೆಯಾದ್ಯಂತ ವಿಸ್ತರಿಸಲಾಗಿದ್ದು ಫೆ. 25ರಂದು ಬೆಳಗ್ಗೆ 6ರಿಂದ ಸಂಜೆ 6ರ ತನಕ ದ.ಕ. ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಹರತಾಳ ನಡೆಯಲಿರುವುದು. ಫೆ. 24ರಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್‌ (ಜ್ಯೋತಿ) ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಡಿ.ಸಿ. ಕಚೇರಿ ಎದುರುಗಡೆ ಬೃಹತ್‌ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್‌ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌ ಮತ್ತು ಬಜರಂಗದಳದ ಪ್ರಾಂತ ಸಂಚಾಲಕ ಶರಣ್‌ ಪಂಪ್‌ವೆಲ್‌ ತಿಳಿಸಿದ್ದಾರೆ.

ವಿಪರ್ಯಾಸ
ಕಣ್ಣೂರು, ತೃಶ್ಶೂರ್‌ ಸೇರಿದಂತೆ ಕೇರಳದ ವಿವಿಧೆಡೆ ಅಮಾಯಕ ಹಿಂದೂ ಕಾರ್ಯಕರ್ತರು ಮತ್ತು ರಾಜಕೀಯ ಎದುರಾಳಿ ಪಕ್ಷಗಳ ಕಾರ್ಯಕರ್ತರನ್ನು ಸಿಪಿಎಂ ಅವ್ಯಾಹತವಾಗಿ ಹತ್ಯೆಗೈಯುತ್ತಿದೆ. ಈ ಪಕ್ಷದ ನೇತಾರರಾಗಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮಂಗಳೂರಿನಲ್ಲಿ ನಡೆಯುವ ಕೋಮು ಸೌಹಾರ್ದ ರ್ಯಾಲಿಯಲ್ಲಿ ಭಾಷಣ ಮಾಡಲು ಬರುತ್ತಿರುವುದು ವಿಪರ್ಯಾಸ ಎಂದು ಸಂಘಟನೆಗಳು ತಿಳಿಸಿವೆ.

ಕೇರಳದಲ್ಲಾಗುತ್ತಿರುವ ಮುಗ್ಧರ ಹತ್ಯೆಯನ್ನು ತಡೆಯುವಲ್ಲಿ ವಿಫಲವಾಗಿರುವ ಪಿಣರಾಯಿ ವಿಜಯನ್‌ ಕಾರ್ಯಕ್ರಮವನ್ನು ವಿರೋಧಿಸಿ ದ.ಕ. ಜಿಲ್ಲೆಯಾದ್ಯಂತ ನಡೆಯುವ ಈ ಪ್ರತಿಭಟನೆ ಮತ್ತು ಹರತಾಳಕ್ಕೆ ಜಿಲ್ಲೆಯ ಎಲ್ಲ ನಾಗರಿಕರು, ಸಂಘ-ಸಂಸ್ಥೆಗಳು, ಬಸ್‌ ಮಾಲಕರು, ಚಾಲಕರು, ರಿಕ್ಷಾ ಚಾಲಕರು-ಮಾಲಕರು, ಹೊಟೇಲ್‌ ಮಾಲಕರು ಸಿಬಂದಿ, ವಿದ್ಯಾರ್ಥಿಗಳು ತಮ್ಮ ಕಚೇರಿ, ಕಾಲೇಜುಗಳನ್ನು ಮುಚ್ಚಿ ಈ ಹರತಾಳದಲ್ಲಿ ಸ್ವಯಂಪ್ರೇರಿತವಾಗಿ ಪಾಲ್ಗೊಂಡು ಬೆಂಬಲಿಸಬೇಕೆಂದು ಕೋರಲಾಗಿದೆ ಎಂದವರು ಪ್ರಕಟನೆಯಲ್ಲಿ  ತಿಳಿಸಿದ್ದಾರೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.