ಕೇರಳದಿಂದ ದ.ಕ. ಪ್ರವೇಶ: ಬಿಗಿ ತಪಾಸಣೆ
ಒಮಿಕ್ರಾನ್ ಆತಂಕ: ಕರಾವಳಿಯಲ್ಲಿಯೂ ಕಟ್ಟೆಚ್ಚರ
Team Udayavani, Nov 29, 2021, 6:44 AM IST
ಮಂಗಳೂರು: ವಿದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್ “ಒಮಿಕ್ರಾನ್’ ಪತ್ತೆ ಮತ್ತು ಕೊರೊನಾ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಕೇರಳ ಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ವೇಳೆ ತಪಾಸಣೆ ಬಿಗಿಗೊಳಿಸಲಾಗಿದೆ ಎಂದು ಡಿಸಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಬರುವ ವಿದ್ಯಾರ್ಥಿಗಳಲ್ಲಿ ಪಾಸಿಟಿವಿಟಿ ದರ ಶೇ. 8ರಷ್ಟು ವರದಿಯಾಗುತ್ತಿದೆ. ಅದಕ್ಕಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಶನಿವಾರ ಸೂಚನೆ ನೀಡಿದ್ದರು. ಅದರಂತೆ ಎಲ್ಲ ಗಡಿಗಳಲ್ಲಿಯೂ ಸ್ಥಳೀಯ ಪೊಲೀಸ್ ಠಾಣಾ ಸಿಬಂದಿ ಹಾಗೂ ಇತರ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ನೆಗೆಟಿವ್ ವರದಿ ಕಡ್ಡಾಯ
ದ.ಕ. ಜಿಲ್ಲೆಯಿಂದ ಕೇರಳ ಭಾಗಕ್ಕೆ ಬಸ್ ಸಂಚಾರ ಸದ್ಯಕ್ಕೆ ಮುಂದುವರಿಯಲಿದೆ. ಆದರೆ ಎರಡೂ ಕಡೆಗಳಲ್ಲಿಯೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಕೇರಳದಲ್ಲಿ ಪಾಸಿಟಿವಿಟಿ ದರ ಹೆಚ್ಚಿದ್ದರೂ ಕಾಸರಗೋಡಿನಲ್ಲಿ ಕಡಿಮೆ ಇದೆ. ಕಾಸರಗೋಡಿನ ಸುಮಾರು ಶೇ. 40ರಷ್ಟು ಮಂದಿ ದ.ಕ. ಜಿಲ್ಲೆ ಯನ್ನು ವಿವಿಧ ಕಾರಣಗಳಿಂದ ಅವಲಂಬಿಸಿ ದ್ದಾರೆ. ಗಡಿ ಭಾಗಗಳಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅದಲ್ಲದೆ ಕಳೆದ 15 ದಿನಗಳಿಂದ ಕೇರಳದಿಂದ ಬಂದ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ಸ್ಕ್ರೀನಿಂಗ್ ಮಾಡಲು ಸೂಚಿಸಲಾಗಿದೆ ಎಂದರು.
ಜಿಲ್ಲಾಡಳಿತಕ್ಕೆ ಪಟ್ಟಿ
ದಕ್ಷಿಣ ಆಫ್ರಿಕಾದಿಂದ ಇಲ್ಲಿಗೆ ಬಂದವರ ಪಟ್ಟಿಯನ್ನು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಿಲ್ಲಾಡಳಿತಕ್ಕೆ ಕಳುಹಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ಬಂದವರನ್ನು ಮತ್ತೊಮ್ಮೆತಪಾಸಣೆಗೊಳಪಡಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಕಳೆದ 15 ದಿನಗಳಿಂದೀಚೆಗೆ ಬಂದವರ ಪಟ್ಟಿಯನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ. ಮಂಗಳೂರಿಗೆ ದುಬಾೖಯಿಂದ ಬರುವವರು ಹೆಚ್ಚು. ಹಾಗೆ ಬರುವವರಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದಿದ್ದರೆ ಅವರನ್ನು ತಪಾಸಣೆ ಮಾಡುವ ವ್ಯವಸ್ಥೆಯೂ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಇದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ
ಆರೋಗ್ಯ ಇಲಾಖೆಯಿಂದ ಸಭೆ
ವಿದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಪತ್ತೆಯಾಗಿರುವ ಕಾರಣಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ರವಿವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ನಡೆಸಿದರು.
ಉಳ್ಳಾಲ; ತಪಾಸಣೆ ಆರಂಭ
ಉಳ್ಳಾಲ: ಗಡಿಭಾಗದ ಉಳ್ಳಾಲ ಮತ್ತು ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ಏಳು ಕಡೆ ಪೊಲೀಸ್ ಔಟ್‌ಪೋಸ್ಟ್ ಹಾಕಿ ತಪಾಸಣೆ ಆರಂಭಿಸಲಾಗಿದೆ.
ತಲಪಾಡಿ ಮತ್ತು ದೇವಿಪುರದಲ್ಲಿ ತಪಾಸಣೆ ಆರಂಭಿಸಿದ್ದು, ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು, ತೌಡುಗೋಳಿ, ನಾರ್ಯ, ಮುದುಂಗಾರುಕಟ್ಟೆ, ನಂದರಪಡು³ವಿನಲ್ಲಿ ಪೊಲೀಸ್ ಔಟ್ ಪೋಸ್ಟ್‌ಗಳನ್ನು ಹಾಕಿದ್ದು, ಪೊಲೀಸರು ತಪಾಸಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.