ವಿಮಾನ ದುರಂತದ ನೆನಪು ಮಡಿದವರಿಗೆ ದ.ಕ.ಜಿಲ್ಲಾಡಳಿತದ ನಮನ
Team Udayavani, May 23, 2018, 12:11 PM IST
ಪಣಂಬೂರು: ಬಜಪೆ ಕೆಂಜಾರು ವಿಮಾನ ನಿಲ್ದಾಣದಲ್ಲಿ 2010ರ ಮೇ 22ರಂದು ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಸ್ಮರಣಾರ್ಥ ಕೂಳೂರು – ತಣ್ಣೀರುಬಾವಿ ರಸ್ತೆ ಪಕ್ಕ ನಿರ್ಮಿಸಿರುವ ಉದ್ಯಾನವನದಲ್ಲಿ ಮಂಗಳವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.
ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರು ಸ್ಮಾರಕಕ್ಕೆ ಹೂಗುತ್ಛ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ 2010ರಲ್ಲಿ ನಡೆದ ದುರ್ಘಟನೆಯ ಮಾಹಿತಿ ನೀಡಿದರು.
ಮಂಗಳೂರು ಸಹಾಯಕ ಆಯುಕ್ತ ಮಹೇಶ್ ಕರ್ಜಗಿ, ಗೃಹರಕ್ಷಕ ದಳದ ಅಧೀಕ್ಷಕ ಮುರಳಿಮೋಹನ ಚೂಂತಾರು, ಡಿಸಿಪಿ ಉಮಾಪ್ರಶಾಂತ್, ಪಾಲಿಕೆ ಆಯುಕ್ತ ಮಹಮ್ಮದ್ ನಜೀರ್, ಎನ್‌ಎಂಪಿಟಿ ಅಧ್ಯಕ್ಷ ಸುರೇಶ್ ಪಿ. ಶಿರ್ವಾಡ್ಕರ್, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಭಾರ ನಿರ್ದೇಶಕ ಅಬ್ರಹಾಂ ಕೊಶಿ, ಏರ್ ಇಂಡಿಯಾ ಭದ್ರತಾ ವಿಭಾಗದ ಅಧಿಕಾರಿ ಮೀರಾ ಕುಸೂರ್, ವಿಮಾನ ದುರಂತ ಸಂತ್ರಸ್ತ ಕುಟುಂಬಗಳ ಪರಿಹಾರ ಹೋರಾಟ ಸಮಿತಿ ಅಧ್ಯಕ್ಷ ಮಹಮ್ಮದ್ ಬ್ಯಾರಿ ಎಡಪದವು ಉಪಸ್ಥಿತರಿದ್ದರು.
ದುರಂತಕ್ಕೆ ಎಂಟು ವರ್ಷ
2010 ಮೇ 22ರ ಮುಂಜಾನೆ ಮಂಗಳೂರು ನಿಲ್ದಾಣದಲ್ಲಿ ಇಳಿಯಲು ಸಜ್ಜಾಗಿದ್ದ ವಿಮಾನ ಪೈಲಟ್‌ಗಳ ತಪ್ಪು ನಡೆಯಿಂದ ರನ್ ವೇಯಿಂದ ಜಾರಿ 158 ಮಂದಿ ಮೃತಪಟ್ಟಿದ್ದರು. 8 ಮಂದಿ ಮಾತ್ರ ಬದುಕುಳಿದಿದ್ದರು. ವಿಮಾನದಲ್ಲಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Siddaramaiah: ಕರಾವಳಿಗೆ ಎರಡು ಸರಕಾರಿ ಮೆಡಿಕಲ್ ಕಾಲೇಜು
CM Siddaramaiah: ಜಾತಿಗಣತಿ ವರದಿ ಮುಂದಿನ ಸಂಪುಟ ಸಭೆಯಲ್ಲಿ ಮಂಡನೆ
Mangaluru: ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಳುಗಳಿಗೆ ಕೃಪಾಂಕ ನೀಡಲು ತೀರ್ಮಾನ : ಸಿಎಂ
Fraud: ಆನ್‌ಲೈನ್ ಟ್ರೇಡಿಂಗ್: ಮಹಿಳೆಗೆ 15.27 ಲಕ್ಷ ರೂ. ವಂಚನೆ
Mangaluru: ಆರೋಪಿಗೆ 20 ವರ್ಷ ಕಠಿನ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.