ದ.ಕ., ಉಡುಪಿ: ಪಿಎಂಎಸ್‌ವೈಎಂ ಯೋಜನೆಗೆ ಚಾಲನೆ
Team Udayavani, Mar 6, 2019, 1:00 AM IST
ಮಂಗಳೂರು/ಉಡುಪಿ: ಅಸಂಘಟಿತ ವಲಯದ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ “ಪ್ರಧಾನ
ಮಂತ್ರಿ ಶ್ರಮ ಯೋಗಿ ಮಾನ-ಧನ್’ (ಪಿಎಂಎಸ್‌ವೈಎಂ) ಯೋಜನೆಗೆ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.
ದ.ಕ. ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಕಾರ್ಮಿಕರ ಭವಿಷ್ಯನಿಧಿ ಯೋಜನೆಯ ಮಂಗಳೂರು ಪ್ರಾದೇಶಿಕ ಕಚೇರಿಯಲ್ಲಿ ಮತ್ತು ಉಡುಪಿ ಜಿಲ್ಲಾ ಮಟ್ಟದ ಕಾರ್ಯ
ಕ್ರಮವನ್ನು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಡಾ| ಅಜಯ್ ಸಿಂಗ್ ಚೌಧರಿ ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಉದ್ಘಾಟಿಸಿದರು.
ಅಸಂಘಟಿತ ಕಾರ್ಮಿಕರಿಗೆ ಭದ್ರತೆ
ಒದಗಿಸುವ ಪಿಎಂಎಸ್‌ವೈಎಂ ಮಹತ್ತರ ಯೋಜನೆಯಾಗಿದೆ ಎಂದು ಶಾಸಕ ಕಾಮತ್ ಹೇಳಿದರು. 18ರಿಂದ 40 ವರ್ಷದೊಳಗಿನ ತಿಂಗಳಿಗೆ 15,000 ರೂ. ವರೆಗೆ ದುಡಿಯುವ ಉದ್ಯೋಗಿಗಳು ಯೋಜನೆಗೆ ಒಳಪಡುತ್ತಾರೆ. 60 ವರ್ಷದ ಬಳಿಕ ಮಾಸಿಕ 3,000 ರೂ. ಪಿಂಚಣಿ ಪಡೆಯುತ್ತಾರೆ ಎಂದು ತಿಳಿಸಿದರು.
ಕಾರ್ಮಿಕ ವಿಮಾ ಯೋಜನೆಯ ಮಂಗಳೂರು ಉಪವಲಯ ಕಚೇರಿಯ ನಿರ್ದೇಶಕ ಎಸ್. ಶಿವರಾಮಕೃಷ್ಣನ್ ಮತ್ತು ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ. ನಾಗರಾಜ್ ಮಾತನಾಡಿ, ಮಹತ್ವದ ಈ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಎಲ್ಲರ ಸಹಭಾಗಿತ್ವ ಅವಶ್ಯ ಎಂದರು.
ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತ ಡಿ.ಕೆ. ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಬಿಎಂಎಸ್ ಮುಖಂಡ ವಿಶ್ವನಾಥ ಶೆಟ್ಟಿ, ಸಹಾಯಕ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರಾದ ಸಿ. ಮುರಲೀಧರನ್, ವಿನ್ಸೆಂಟ್ ಜಾಕೋಬ್ ಚೇರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ಯೋಜನೆ ವಿವರ ನೀಡಿದರು. ಇಎಸ್‌ಐಸಿ ಅಧಿಕಾರಿ ಆರ್. ದಿನಕರನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.