ದ.ಕ.: 6 ಕೇಂದ್ರಗಳಲ್ಲಿ ಲಸಿಕೆ
Team Udayavani, Jan 12, 2021, 2:05 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೊರೊನಾ ಲಸಿಕೆ ಜ. 16ರಂದು ಜಿಲ್ಲೆಗೆ ತಲುಪುವ ನಿರೀಕ್ಷೆ ಇದ್ದು, ತಲುಪಿದರೆ ಅದೇ ದಿನ 6 ಕೇಂದ್ರಗಳಲ್ಲಿ ವಿತರಿಸಲು ಜಿಲ್ಲಾಡಳಿತ ವ್ಯಾಪಕ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಸುರತ್ಕಲ್‌ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಹಾಗೂ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ವಿತರಿಸಲಾಗು ವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ರಾಮಚಂದ್ರ ಬಾಯರಿ ಮಾಹಿತಿ ನೀಡಿದ್ದಾರೆ.
ದ.ಕ: 10 ಮಂದಿಗೆ ಕೋವಿಡ್ ದೃಢ :
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 10 ಮಂದಿಗೆ ಕೋವಿಡ್ ದೃಢಪಟ್ಟಿದೆ. 29 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 33,265 ಮಂದಿ ಸೋಂಕಿಗೊಳಗಾಗಿದ್ದು, 32,087 ಮಂದಿ ಗುಣಮುಖರಾಗಿದ್ದಾರೆ. 446 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 732 ಮಂದಿ ಮೃತಪಟ್ಟಿದ್ದಾರೆ. ಮಾಸ್ಕ್ ಧರಿಸದ 22,404 ಮಂದಿಗೆ ಈವರೆಗೆ ಒಟ್ಟು 23,73,370 ರೂ. ದಂಡ ವಿಧಿಸಲಾಗಿದೆ.
ಕೊಡಗು: 14 ಪ್ರಕರಣ :
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ 14 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 61 ಸಕ್ರಿಯ ಪ್ರಕರಣಗಳಿವೆ. ಕಾಸರಗೋಡು ಜಿಲ್ಲೆ:
ಕಾಸರಗೋಡು 48 ಮಂದಿಗೆ ಸೋಂಕು :
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 48 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. 87 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಕೇರಳದಲ್ಲಿ 3,110 ಪ್ರಕರಣರಾಜ್ಯದಲ್ಲಿ ಸೋಮವಾರ 3,110 ಮಂದಿಗೆ ಸೋಂಕು ದೃಢಪಟ್ಟಿದೆ. 3,922 ಮಂದಿ ಗುಣಮುಖ ರಾಗಿ ಆಸ್ಪತ್ರೆಗಳಿಂದ ತೆರಳಿದ್ದಾರೆ. 20 ಮಂದಿ ಸಾವಿಗೀಡಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಒಂದೇ ಒಂದು ಪ್ರಕರಣ :
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಂದೇ ಒಂದು ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಇದೂ ಕೂಡ ಉಡುಪಿ ಜಿಲ್ಲೆಯ ನಿವಾಸಿಯಾಗಿರದೆ ಹೊರ ಜಿಲ್ಲೆಯವರಾಗಿದ್ದಾರೆ. ಇವರು ರೋಗ ಲಕ್ಷಣವಿರುವ ಪುರುಷರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿ. 27ರಂದು ಒಂದು ಪ್ರಕರಣ ದಾಖಲಾಗಿದ್ದರೂ ಅವರು ಉಡುಪಿ ಜಿಲ್ಲೆಯವರೇ ಆಗಿದ್ದರು. ಇದು ಹೊರತುಪಡಿಸಿದರೆ ಮೇ 16-17ರಂದು ಒಂದು ಪ್ರಕರಣ ದಾಖಲಾಗಿತ್ತು.
ಜ. 10ರಂದು 1,639 ಗಂಟಲ ದ್ರವ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. 20 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದರು. ಪ್ರಸ್ತುತ 80 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.