ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷರ ಬದಲಾವಣೆ ?
Team Udayavani, Jan 31, 2019, 5:13 AM IST
ಮಂಗಳೂರು: ಬಿಜೆಪಿಯೊಳಗಿನ ಒಪ್ಪಂದ ಸೂತ್ರದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ತಮ್ಮ ಸ್ಥಾನ ಬಿಟ್ಟು ಕೊಡಬೇಕಾದ ದಿನ ಸಮೀಪಿಸುತ್ತಿದೆ. ಇದಕ್ಕೆ ಸಂಬಂಧಿಸಿ ಬುಧವಾರ ಮಹತ್ವದ ಸಮಾಲೋಚನ ಸಭೆ ನಡೆದಿದೆ.
ಅಧ್ಯಕ್ಷರ ಆಯ್ಕೆ ಸಂದರ್ಭ ಪಕ್ಷದೊಳಗೆ ನಡೆದಿದೆ ಎನ್ನಲಾದ ಒಡಂಬಡಿಕೆಯಂತೆ ಮೀನಾಕ್ಷಿ ಅವರು ಅಧ್ಯಕ್ಷ ಪದವಿಯನ್ನು ಶಿರ್ತಾಡಿ ಜಿ.ಪಂ. ಕ್ಷೇತ್ರದ ಸದಸ್ಯೆ ಕೆ.ಪಿ. ಸುಜಾತ ಅವರಿಗೆ ಬಿಟ್ಟುಕೊಡಬೇಕಾಗಿದೆ. ಈ ಕಾರಣಕ್ಕೆ ಬುಧವಾರ ದ.ಕ. ಜಿ.ಪಂ.ನಲ್ಲಿದ್ದ 15ನೇ ಸಾಮಾನ್ಯ ಸಭೆಗೂ ಮುನ್ನ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಜಿ.ಪಂ. ಸದಸ್ಯರ ಜತೆಗೆ ವಿಸ್ತೃತ ಮಾತುಕತೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದರಿಂದಾಗಿ ಪೂರ್ವಾಹ್ನ 11ಕ್ಕೆ ಆರಂಭವಾದ ಜಿ.ಪಂ. ಸಾಮಾನ್ಯ ಸಭೆಗೆ ಬಿಜೆಪಿ ಸದಸ್ಯರು ಆಗಮಿ
ಸುವಾಗ ಅರ್ಧ ತಾಸು ತಡವಾಗಿತ್ತು. ಜಿ.ಪಂ.ನಲ್ಲಿ 36 ಸ್ಥಾನಗಳ ಪೈಕಿ ಬಿಜೆಪಿ 21 ಹಾಗೂ ಕಾಂಗ್ರೆಸ್‌ನ 15 ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನದ ಮೀಸಲಾತಿ ಪರಿಶಿಷ್ಟ ಜಾತಿ ವರ್ಗಕ್ಕೆ ಬಂದಿರುವ ಕಾರಣ ಆಡಳಿತ ಪಕ್ಷವಾದ ಬಿಜೆಪಿಯಲ್ಲಿ ಮೀನಾಕ್ಷಿ ಶಾಂತಿಗೋಡು ಹಾಗೂ ಕೆ.ಪಿ. ಸುಜಾತಾಗೆ ಅವಕಾಶಗಳಿತ್ತು. ಈ ವೇಳೆ ಬಿಜೆಪಿ ಪಕ್ಷದ ಪ್ರಮುಖರ ಮಾತುಕತೆಯ ಪ್ರಕಾರ ತಲಾ ಎರಡೂವರೆ ವರ್ಷದಂತೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಹಂಚಿಕೊಳ್ಳುವ ಬಗ್ಗೆ ಮೊದಲೇ ತೀರ್ಮಾನವಾಗಿತ್ತು.
ಅದರಂತೆ ಅಧ್ಯಕ್ಷ ಸ್ಥಾನ ಪಡೆದುಕೊಂಡಿರುವ ಮೀನಾಕ್ಷಿ ಶಾಂತಿಗೋಡು ಮತ್ತು ಉಪಾಧ್ಯಕ್ಷ ಸ್ಥಾನದ ಕಸ್ತೂರಿ ಪಂಜ ಅವರು ಕಳೆದ ಅಕ್ಟೋಬರ್‌ನಲ್ಲಿಯೇ ಅಧಿಕಾರ ಬಿಟ್ಟುಕೊಡಬೇಕಿತ್ತು ಎನ್ನಲಾಗಿದೆ. ಆದರೆ ಅವರು ಸ್ಥಾನ ತೊರೆಯದೆ ಇರುವ ಕಾರಣ ಈಗಲಾದರೂ ಬೇರೆಯವರಿಗೆ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕೂಗು-ಒತ್ತಾಯ ಕೂಡ ಸದಸ್ಯರೊಳಗೆ ಜೋರಾಗಿದೆ ಎನ್ನಲಾಗಿದೆ.
ಪಕ್ಷದ ತೀರ್ಮಾನ ಅಂತಿಮ
ಈ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜೀವ ಮಠಂದೂರು ಅವರು, ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲÉ ಎಂದು ಸ್ಪಷ್ಟಪಡಿಸಿದ್ದಾರೆ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, “ಬದಲಾವಣೆ ಬಗ್ಗೆ ತೀರ್ಮಾನವಾಗಿಲ್ಲ. ಈ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.