ಪ್ಲಾಸ್ಟಿಕ್ ಅಕ್ಕಿ ಭಯ ಬೇಡ: ಸಚಿವ ಖಾದರ್
Team Udayavani, Jun 11, 2017, 5:52 PM IST
ಮಂಗಳೂರು: ಪ್ಲಾಸ್ಟಿಕ್ ಅಕ್ಕಿ ಮತ್ತು ಪ್ಲಾಸ್ಟಿಕ್ ಮೊಟ್ಟೆ ಬಗ್ಗೆ ಹರಡುತ್ತಿರುವ ಸುದ್ದಿಗಳು ಆಧಾರ ರಹಿತವಾಗಿವೆ. ಈ ಕುರಿತಂತೆ ಜನಸಾಮಾನ್ಯರು ಯಾವುದೇ ಭಯಪಡಬೇಕಾಗಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು.
ಅವರು ನಗರದ ಸಕೀìಟ್ ಹೌಸ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸರಕಾರದ ಅನ್ನಭಾಗ್ಯ ಯೋಜನೆಯ ಯಶಸ್ಸನ್ನು ಸಹಿಸದೆ ಕೆಲವರು ಇಂತಹ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಪ್ಲಾಸ್ಟಿಕ್ ಅಕ್ಕಿ ತಯಾರಿಸಲು 80ರಿಂದ 100 ರೂ.ಗಳಷ್ಟು ಮತ್ತು ಪ್ಲಾಸ್ಟಿಕ್ ಮೊಟ್ಟೆಗೆ 40 ರೂ. ಮೇಲ್ಪಟ್ಟು ಖರ್ಚಾಗುತ್ತದೆ. ಹಾಗಾಗಿ ಅಂತಹ ದುಸ್ಸಾಹಸಕ್ಕೆ ಯಾರೂ ಕೈ ಹಾಕಲಾರರು. ಜನರು ಗೊಂದಲಗೊಳ್ಳಬಾರದು ಎಂಬುದಾಗಿ ಅವರು ವಿನಂತಿಸಿದರು.
ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು 2.77 ಲಕ್ಷ ಮೆಟ್ರಿಕ್ ಟನ್ ಅಕ್ಕಿ ರಾಜ್ಯಕ್ಕೆ ಬೇಕಾಗುತ್ತದೆ. ಇದನ್ನು ಫುಡ್ ಕಾರ್ಪೊರೇಶನ್ ಆಫ್ ಇಂಡಿಯಾದ ಮುಖಾಂತರವೇ ತರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.