ಒತ್ತಡದಲ್ಲಿ ರಾತ್ರಿ ತರಗತಿ ಬೇಡ

Team Udayavani, Dec 10, 2017, 3:36 PM IST

10-Dec14.jpg

ಪುತ್ತೂರು: ಎಸೆಸೆಲ್ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಉತ್ತಮ ಫಲಿತಾಂಶ ಪಡೆಯಬೇಕು. ಹಾಗೆಂದು ಯಾವುದೇ ಶಾಲೆಯಲ್ಲೂ ಒತ್ತಾಯಪೂರ್ವಕವಾಗಿ ರಾತ್ರಿ ತರಗತಿ ನಡೆಸುವುದು ಬೇಡ ಎಂದು ತಾಲೂಕು ಪಂಚಾಯತ್‌ ಅಧ್ಯಕ್ಷೆ ಭವಾನಿ ಚಿದಾನಂದ್‌ ಶಿಕ್ಷಕರಿಗೆ ಸೂಚಿಸಿದರು. 2017-18ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗೆ ಪೂರಕವಾಗಿ ಶನಿವಾರ ತಾ.ಪಂ. ಸಭಾಂಗಣದಲ್ಲಿ ನಡೆದ ತಾಲೂಕಿನ ಪ್ರೌಢಶಾಲಾ ಸಭೆಯಲ್ಲಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಬಸ್‌ ಕೊರತೆ, ಹೆತ್ತವರ ಅಸಹಕಾರ ಸಹಿತ ಹಲವು ಸಮಸ್ಯೆಗಳಿವೆ. ಈ ನಿಟ್ಟಿನಲ್ಲಿ ಯಾರಿಗೂ ಒತ್ತಡಪೂರ್ವಕವಾಗಿ ತರಗತಿ ನಡೆಸಬೇಕಾಗಿಲ್ಲ. ಆಸಕ್ತಿಯಿಂದ ಬರುವಂಥ ವಿದ್ಯಾರ್ಥಿಗಳಿಗೆ ತರಗತಿ ನಡೆಸಿ. ರಾತ್ರಿ ತರಗತಿಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಬೆಳಗ್ಗೆ ಅಥವಾ ಸಂಜೆ ವೇಳೆ ವಿಶೇಷ ತರಗತಿ ನೀಡುವುದು ಸೂಕ್ತ ಎಂದರು.

ಕರ್ತವ್ಯನಿಷ್ಠೆ ಪಾಲಿಸಿ
ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಗೆಳೆಯ ರಂತೆ ವರ್ತಿಸಿ ಅವರನ್ನು ಪಠ್ಯದ ಕಡೆಗೆ ಗಮನ ಕೊಡುವಂತೆ ಪ್ರೇರೇಪಣೆ ನೀಡುವುದು ಮುಖ್ಯ. ಫಲಿತಾಂಶ ಗಳಿಕೆಯಲ್ಲಿ ಶಿಕ್ಷಕರ ಶ್ರಮ ಮಹತ್ವವಾದದ್ದು. ಶಿಕ್ಷಕರು ಕರ್ತವ್ಯ ನಿಷ್ಠೆಯನ್ನು ಪಾಲನೆ ಮಾಡಬೇಕು. ಪಠ್ಯ ವಿಷಯಗಳನ್ನು ಡಿಸೆಂಬರ್‌ ಅಂತ್ಯಕ್ಕೆ ಪೂರ್ಣಗೊಳಿಸಿ, ಉಳಿದ ಸಮಯಗಳನ್ನು ಅಭ್ಯಾಸಕ್ಕಾಗಿ ಮೀಸಲಿಡುವಂತೆ ಅವರು ತಿಳಿಸಿದರು.

ರಾತ್ರಿ ಶಾಲೆ ನಡೆಸುವುದರಿಂದ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ತಾ.ಪಂ. ಸದಸ್ಯರಿಂದಲೂ ಉತ್ತಮ ಪ್ರೇರಣೆ ದೊರೆತಿದೆ ಎಂದು ರಾಮಕುಂಜ, ಇರ್ದೆ, ಉಪ್ಪಳಿಗೆ ಶಾಲಾ ಶಿಕ್ಷಕರು ತಿಳಿಸಿದರು. ರಾತ್ರಿ ವೇಳೆ ಕಾಡು ಪ್ರಾಣಿಗಳ ತೊಂದರೆಯಿದೆ. ರಾತ್ರಿ ಶಾಲೆಗೆ ವಿದ್ಯಾರ್ಥಿಗಳು ಬರುವುದಕ್ಕೆ ಭಯಪಡುತ್ತಾರೆ ಎಂದು ಸುಳ್ಯಪದವು ಶಾಲಾ ಶಿಕ್ಷಕ ತಿಳಿಸಿದರು.

ಹಂತಹಂತವಾಗಿ ಕಠಿನಗೊಳಿಸಿ
ಪೂರ್ವಸಿದ್ಧತಾ ಪರೀಕ್ಷೆಗಳು ಕಠಿನವಾಗಿದ್ದರೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಕಡಿಮೆ ಆಗುತ್ತದೆ. ಪರೀಕ್ಷೆಯ ಬಗ್ಗೆ ವಿಶ್ವಾಸ ಮೂಡಿಸಲು ಮೂರು ಹಂತವಾಗಿ ನಡೆಯುವ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಹಂತ ಹಂತವಾಗಿ ಕಠಿನಗೊಳಿಸುವುದು ಉತ್ತಮ. ತಾಲೂಕು ಮಟ್ಟದಲ್ಲಿ ನಡೆಯುವ ಪರೀಕ್ಷೆಯನ್ನು ಅತ್ಯಂತ ಸರಳಗೊಳಿಸಿ, ಜಿಲ್ಲಾ ಮಟ್ಟದ ಪರೀಕ್ಷೆಯನ್ನು ಸ್ವಲ್ಪ ಕಠಿನ ಹಾಗೂ ರಾಜ್ಯ ಮಟ್ಟದ ಪರೀಕ್ಷೆಯನ್ನು ಇನ್ನಷ್ಟು ಕಠಿನ ಮಾದರಿಯಲ್ಲಿ ನಡೆಸುವುದು  ಸೂಕ್ತ ಎಂದು ರಾಮಕುಂಜ ಶಾಲಾ ಶಿಕ್ಷಕ ಸಲಹೆ ನೀಡಿದರು.

ಅಂಕ ಗಳಿಕೆಯಲ್ಲಿ ಹಿಂದೆ
ಅಂಕ ಗಳಿಕೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮಸೀದಿಗಳ ಮೂಲಕ ಸಭೆ ನಡೆಸಿ, ವಿದ್ಯಾರ್ಥಿಗಳ ಬಗ್ಗೆ ಹೆತ್ತವರಿಗೆ ತಿಳಿವಳಿಕೆ ನೀಡುವ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ತಿಳಿಸಿದರು.ಶಿಕ್ಷಣಕ್ಕೆ ಪೂರಕ ರಸಪ್ರಶ್ನೆಯನ್ನು ಆಯೋಜಿಸುವಂತೆ ಶಿಕ್ಷಕರಿಗೆ ಸೂಚಿಸಿದರು. ಶಾಲಾ ಸಮಸ್ಯೆಗಳನ್ನು ಗಮನಕ್ಕೆ ತಂದರೆ ಪರಿಹರಿಸುವ ಭರವಸೆ ನೀಡಿದರು.

ತಾಲೂಕು ಪಂಚಾಯತ್‌ ಉಪಾಧ್ಯಕ್ಷೆ ರಾಜೇಶ್ವರಿ, ತಾಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ
ಉಪಸ್ಥಿತರಿದ್ದರು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಲೋಕಾನಂದ ವಂದಿಸಿದರು.

ತಾ.ಪಂ. ಸ್ಪಂದನವಾಣಿ
ಎಸೆಸೆಲ್ಸಿ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಪೂರಕವಾಗುವಂತೆ ತಾಲೂಕು ಪಂಚಾಯತ್‌ನಿಂದ ಸ್ಪಂದನವಾಣಿಯನ್ನು ಪ್ರಾರಂಭಿಸಲಾಗಿದೆ. ಇದರ ಮುಖಾಂತರ ಶಿಕ್ಷಕರು 0-35 ಅಂಕಗಳಿಸುವ ವಿದ್ಯಾರ್ಥಿಗಳ ಹೆತ್ತವರ ದೂರವಾಣಿ ಸಂಖ್ಯೆಯನ್ನು ಪಡೆದು ಆಯಾ ಭಾಗದ ತಾ.ಪಂ. ಸದಸ್ಯರಿಗೆ ನೀಡಬೇಕಾಗಿದೆ. ಶಿಕ್ಷಕರಿಂದ ಪಡೆದ ದೂರವಾಣಿಗಳಿಗೆ ಸದಸ್ಯರು ಕರೆಮಾಡಿ ಮಕ್ಕಳ ಶಿಕ್ಷಣದ ಬಗ್ಗೆ ಹೆತ್ತವರ ಅರಿವು ಮೂಡಿಸುವುದು ಹಾಗೂ ಮಕ್ಕಳ ಮೇಲಿನ ಹೆತ್ತವರ ಜವಾಬ್ದಾರಿ ಬಗ್ಗೆ ಮನವರಿಕೆ ಮಾಡಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುವುದು ಎಂದು ಸಾಮಾಜಿಕ ಸ್ಥಾಯೀ ಸಮಿತಿ ಅಧ್ಯಕ್ಷ ಮುಕುಂದ ಹೇಳಿದರು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

courts

Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

police-ban

Sullia: ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

11

Puttur: ಬಸ್‌ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.