ಕಲೆ ನಿಂತ ನೀರಾಗದಿರಲಿ: ಪಟ್ಲ ಸತೀಶ್ ಶೆಟ್ಟಿ
Team Udayavani, Feb 28, 2018, 2:29 PM IST
ಬೆಂದೂರ್‌ವೆಲ್ : ಯಕ್ಷಗಾನದಲ್ಲಿ ಗಾನ ಎಂಬ ಪದಕ್ಕೆ ಹೆಚ್ಚು ಮಹತ್ವ. ಗಾನ ಎಂದ ಮೇಲೆ ಸಂಗೀತ ಬೇಕು. ಕಲೆ ನಿಂತ ನೀರಾಗಬಾರದು. ಅದಕ್ಕಾಗಿ ಪ್ರಯೋಗಗಳು ನಡೆಯುತ್ತಲೇ ಇರಬೇಕು ಎಂದು ಭಾಗವತ ಪಟ್ಲ ಸತೀಶ್ ಶೆಟ್ಟಿ ಅಭಿಪ್ರಾಯಪಟ್ಟರು.
‘ಯಕ್ಷಗಾನ – ಪರಂಪರೆ ಮತ್ತು ಪ್ರಯೋಗ ಇತ್ತೀಚಿನ ಒಲವುಗಳು’ ವಿಷಯದ ಮೇಲೆ ಮಂಗಳೂರು ಸಂತ ಆ್ಯಗ್ನೆಸ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದ ಸಮಾರೋಪದಲ್ಲಿ ಅವರು ಮಾತನಾಡಿದರು.
ವಿದ್ವಾಂಸರ ಸಂಖ್ಯೆ ಹೆಚ್ಚಳದಿಂದಲೋ, ಕಲಾವಿದರ ಅಜ್ಞಾನದಿಂದಲೋ ಯಕ್ಷಗಾನದ ಸರಿ- ತಪ್ಪುಗಳಲ್ಲಿ ಗೊಂದಲ ಏರ್ಪಟ್ಟಿವೆ. ಈ ಗೊಂದಲಗಳನ್ನು ನಿವಾರಿಸಲು ವಿದ್ವಾಂಸರು ಮತ್ತು ಕಲಾವಿದರು ಒಟ್ಟು ಸೇರಿ ಚರ್ಚಿಸಬೇಕು ಎಂದು ಅವರು ಹೇಳಿದರು.
ಮಂಗಳೂರು ವಿವಿ ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಡಾ| ಧನಂಜಯ ಕುಂಬ್ಳೆ ಅಧ್ಯಕ್ಷತೆ ವಹಿಸಿದ್ದರು. ಸಂತ ಆ್ಯಗ್ನೆಸ್ ಕಾಲೇಜಿನ ಡಾ| ಸಂಪೂರ್ಣಾನಂದ ಬಳ್ಕೂರು ಸ್ವಾಗತಿಸಿದರು. ರಥಬೀದಿ ಸಪ್ರದ ಕಾಲೇಜಿನ ಡಾ| ಪ್ರಕಾಶಚಂದ್ರ ಶಿಶಿಲ ವಂದಿಸಿದರು. ಪವಿತ್ರಾ ಕೆ. ನಿರೂಪಿಸಿದರು.
ಸಂತ ಆ್ಯಗ್ನೆಸ್ ಕಾಲೇಜು, ಮಂಗಳೂರು ರಥಬೀದಿ ಸರಕಾರಿ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಮಂಗಳೂರು ಆಕಾಶವಾಣಿ ಸಂಯುಕ್ತವಾಗಿ ಈ ವಿಚಾರಸಂಕಿರಣ ಏರ್ಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.