ಬಾಂಬ್ ಪತ್ತೆ ನಿಷ್ಣಾತೆ ಶ್ವಾನ ಲೀನಾ ಇನ್ನಿಲ್ಲ
ಮಂಗಳೂರು ವಿಮಾನ ನಿಲ್ದಾಣ
Team Udayavani, Nov 22, 2021, 6:26 AM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಶ್ವಾನ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಬಾಂಬ್ ಪತ್ತೆ ಕಾರ್ಯ ದಲ್ಲಿ ನಿಷ್ಣಾತೆ ಎನಿಸಿದ ಲಾಬ್ರಡೋರ್ ಜಾತಿಗೆ ಸೇರಿದ ಶ್ವಾನ ಲೀನಾ (8 ವರ್ಷ 9 ತಿಂಗಳು) ಅನಾರೋಗ್ಯದಿಂದ ರವಿವಾರ ಮೃತ ಪಟ್ಟಿದೆ.
ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಲೀನಾ ಫೆ. 16ರಿಂದ ಆಹಾರ ಸೇವಿಸುತ್ತಿರಲಿಲ್ಲ. ಗ್ಲುಕೋಸ್ ನೀಡಲಾಗುತ್ತಿತ್ತು. ರವಿವಾರ ಮುಂಜಾನೆ ಸಾವನ್ನಪ್ಪಿತು.
ಲೀನಾಳ ಅಂತ್ಯ ಕ್ರಿಯೆಯನ್ನು ರವಿವಾರ ಸೇನಾ ಗೌರವದೊಂದಿಗೆ ವಿಮಾನ ನಿಲ್ದಾಣದ ಆವರಣದಲ್ಲಿ ನಡೆಸಲಾಯಿತು.
2013 ಮೇ 5ರಂದು ಜನಿಸಿದ ಲೀನಾ ರಾಂಚಿಯಲ್ಲಿ ಸ್ಫೋಟಕ ಪತ್ತೆ ಕಾರ್ಯಾಚರಣೆಯ ತರ ಬೇತಿ ಪಡೆದು ಮಂಗಳೂರು ವಿಮಾನ ನಿಲ್ದಾಣ ಶ್ವಾನದಳಕ್ಕೆ ಸೇರ್ಪಡೆ ಯಾಗಿತ್ತು. ಶ್ವಾನದಳ ವಿಭಾಗದ ನಾಲ್ಕು ಶ್ವಾನಗಳಲ್ಲಿ ಲೀನಾ ಅತ್ಯಂತ ಚುರುಕಿನದಾಗಿತ್ತು. ದಾಖಲೆಗಳಲ್ಲಿ ಲೀನಾ ಎಂಬ ಹೆಸರಿದ್ದರೂ ಸಿಐಎಸ್‌ಎಫ್ ಸಿಬಂದಿ ಇದನ್ನು “ಡೋಲಿ’ ಎಂದೇ ಕರೆಯುತ್ತಿದ್ದರು. ಲೀನಾಳ ಅನಾರೋಗ್ಯದ ಹಿನ್ನೆಲೆಯಲ್ಲಿ ಬೇರೊಂದು ಶ್ವಾನವನ್ನು ವಿಮಾನ ನಿಲ್ದಾಣದ ಶ್ವಾನದಳ ವಿಭಾಗಕ್ಕೆ ಸೇರ್ಪಡೆ ಮಾಡಿ ರಾಂಚಿಯಲ್ಲಿ ತರಬೇತಿ ನೀಡಲಾಗುತ್ತಿದೆ.
ಇದನ್ನೂ ಓದಿ:ಪೊಲೀಸರ ಮೇಲೆ ಹಲ್ಲೆಗೆ ಯತ್ನ : ರೌಡಿಶೀಟರ್ ಬಂಧನ
ಆದಿತ್ಯ ರಾವ್ ಇರಿಸಿದ್ದ
ಬಾಂಬ್ ಪತ್ತೆ ಹೆಗ್ಗಳಿಕೆ
2020 ಜನವರಿ 12ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿ ಆದಿತ್ಯ ರಾವ್ ಇರಿಸಿದ್ದ ಬಾಂಬ್‌ನ್ನು ಪತ್ತೆಮಾಡಿದ್ದು ಇದೇ ಲೀನಾ. ವಿಮಾನ ನಿಲ್ದಾಣದಲ್ಲಿ ಪ್ರತೀ ಗಂಟೆಗೊಮ್ಮೆ ಶ್ವಾನದಳದಿಂದ ಸ್ಫೋಟಕ ಪತ್ತೆ ತಪಾಸಣೆ ನಡೆಯುತ್ತಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.