ಡಾ| ಬಿ.ಎಂ. ಹೆಗ್ಡೆ ಅವರಿಗೆ ಇಂದು ಪದ್ಮವಿಭೂಷಣ ಪ್ರದಾನ
Team Udayavani, Nov 9, 2021, 7:10 AM IST
ಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ| ಬೆಳ್ಳೆ ಮೋನಪ್ಪ ಹೆಗ್ಡೆ (ಡಾ| ಬಿ. ಎಂ. ಹೆಗ್ಡೆ) ಅವರಿಗೆ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ನಡೆಯಲಿದೆ.
ಡಾ| ಬಿ.ಎಂ.ಹೆಗ್ಡೆಯವರಿಗೆ ಈ ವರ್ಷದ ಜನವರಿಯಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಅವರು ಹೊಸದಿಲ್ಲಿಗೆ ತೆರಳಿದ್ದು ನಾಳೆ ರಾಷ್ಟ್ರಪತಿ ರಾಮಾನಾಥ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸುವರು. ಅವರಿಗೆ 2010ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿತ್ತು.
ಉಡುಪಿಯ ಬೆಳ್ಳೆ ಗ್ರಾಮದಲ್ಲಿ ಜನಿಸಿದ ಡಾ| ಬಿ. ಎಂ. ಹೆಗ್ಡೆಯವರು ವೈದ್ಯಕೀಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದ ಕೆಲವೇ ಭಾರತೀಯ ವೈದ್ಯರಲ್ಲಿ ಅಗ್ರಗಣ್ಯರು ಎಂಬ ಹೆಗ್ಗಳಿಕೆಗೆ ಪಾತ್ರರಾದವರು.
ಇದನ್ನೂ ಓದಿ:12ರ ವರೆಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಸುಲಭ ಆರೋಗ್ಯ ಚಿಕಿತ್ಸೆ ಮತ್ತು ಅನಾವಶ್ಯಕ ಚಿಕಿತ್ಸೆಗಳ ಬಗ್ಗೆ ಮಾಹಿತಿಯನ್ನು ಒಳಗೊಂಡ ಉಪನ್ಯಾಸಗಳ ಮೂಲಕ ಜನಸಾಮಾನ್ಯರಲ್ಲೂ ಜನಪ್ರಿಯತೆಯನ್ನು ಗಳಿಸಿದ ವೈದ್ಯಶ್ರೇಷ್ಠ. ಡಾ| ಹೆಗ್ಡೆಯವರು ಅಧ್ಯಾಪಕರಾಗಿ, ಪರೀಕ್ಷಕರಾಗಿ, ಸಂಶೋಧಕರಾಗಿ, ಬರಹಗಾರರಾಗಿ ಶಿಕ್ಷಣ ತಜ್ಞರಾಗಿ, ಆರೋಗ್ಯ ಸಲಹೆಗಾರರಾಗಿ, ವಾಗ್ಮಿಯಾಗಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.