Mangaluru: ಕೆಎಂಸಿ ಆಸ್ಪತ್ರೆಯ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ. ಲಕ್ಷ್ಮಣ ಪ್ರಭು ನಿಧನ
Team Udayavani, Nov 17, 2023, 8:47 AM IST
ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರು ಇಂದು ನಿಧನ ಹೊಂದಿದರು. ಅವರಿಗೆ 61 ವರ್ಷ ವಯಸ್ಸಾಗಿತ್ತು.
ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು ಆ ಬಳಿಕ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Assembly Elections: ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಇಂದು ಚುನಾವಣೆ… ಮತದಾನ ಆರಂಭ
36 ವರ್ಷಗಳ ಅಗಾಧ ಅನುಭವವನ್ನು ಹೊಂದಿರುವ ಅವರು ತಮ್ಮ ಪರಿಣತಿಯನ್ನು ಕೆಎಂಸಿ ಆಸ್ಪತ್ರೆಗೆ ಮಂಗಳೂರಿಗೆ ಅರ್ಪಿಸಿದ್ದಾರೆ.
ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು.
ಎಂಬಿಬಿಎಸ್, MS ಜನರಲ್ ಸರ್ಜರಿ, MCH ಜೆನಿಟೂರ್ನರಿ ಸರ್ಜರಿ, DNB ಮೂತ್ರಶಾಸ್ತ್ರದಲ್ಲಿ ಪದವಿಗಳನ್ನು ಹೊಂದಿರುವ ಡಾ. ಪ್ರಭು, 2022 ರಲ್ಲಿ ಯುರೊಲಾಜಿಕಲ್ ಸೊಸೈಟಿ ಆಫ್ ಇಂಡಿಯಾ (USI) ನ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿದ್ದರು.
ಭಾರತೀಯ ವೈದ್ಯಕೀಯ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.