ಕೆ.ಎಸ್ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯ ಡಾ|ಜಯರಾಮ ಶೆಟ್ಟಿ ಹೃದಯಾಘಾತದಿಂದ ನಿಧನ
Team Udayavani, Jan 11, 2023, 10:19 PM IST
ಉಳ್ಳಾಲ : ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ವಿಭಾಗದ ತಜ್ಞ ವೈದ್ಯರಾದ ಗುರುಪುರ ಪರಾರಿ ದೋಟ ಕೊಳಕೆಬೈಲು ನಿವಾಸಿ ಡಾ| ಜಯರಾಮ ಶೆಟ್ಟಿ(53) ಹೃದಯಾಘಾತದಿಂದ ಜ.,11ರಂದು ಬುಧವಾರ ಮಂಗಳೂರಿನ ಸ್ವ$ಗೃಹದಲ್ಲಿ ನಿಧನ ಹೊಂದಿದರು.ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಮಂಗಳೂರಿನ ಕೆ.ಎಂಸಿ ವೈದ್ಯಕೀಯ ಕಾಲೇಜಿನಲ್ಲಿ ರೇಡಿಯೇಷನ್ ಆಂಕಾಲಜಿ ವಿಷಯದಲ್ಲಿ ಸ್ನಾತಕೋತ್ತರ ಉನ್ನತ ಶಿಕ್ಷಣ ಪಡೆದ ಬಳಿಕ ಸುಮಾರು ಒಂದು ದಶಕಕ್ಕಿಂತ ಹೆಚ್ಚು ಕಾಲ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ, ಬಳಿಕ ಕಳೆದ 11 ವರುಷಗಳಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಸಂಜೆಯವರೆಗೆ ಕಾರ್ಯ ನಿರ್ವಹಿಸಿ ಮನೆಗೆ ತೆರಳಿದ್ದು, ಈ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದ ಅವರು ಅನೇಕ ಬಡ ರೋಗಿಗಳ ಚಿಕಿತ್ಸೆಗೆ ಸಹಾಯಹಸ್ತ ನೀಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.