ಕೆವಿಜಿ ಶಿಕ್ಷಣ ಸಂಸ್ಥೆಯಿಂದ ಡಾ| ಚಿದಾನಂದ ಅವರಿಗೆ ಸಮ್ಮಾನ
Team Udayavani, Jul 23, 2017, 6:40 AM IST
ಸುಳ್ಯ: ಸುಳ್ಯ, ಕೊಡಗು ಮತ್ತು ಬೆಂಗಳೂರಿನಲ್ಲಿರುವ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ, ಪ್ರಾಂಶುಪಾಲ ಮತ್ತು ಸಿಬಂದಿ ವರ್ಗದವರ ವತಿಯಿಂದ ಸಂಸ್ಥೆಯ ಅಧ್ಯಕ್ಷ ಡಾ| ಬಿ.ಸಿ. ರಾಯ್‌ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ| ಕೆ.ವಿ. ಚಿದಾನಂದ ಅವರನ್ನು ಸಮ್ಮಾನಿಸುವ ಕಾರ್ಯಕ್ರಮ ಅಮರಶ್ರೀ ಬಾಗ್‌ನಲ್ಲಿ ಶನಿವಾರ ನಡೆಯಿತು.
ಮಂಗಳೂರು ನಿಟ್ಟೆ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ| ರಮಾನಂದ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಆಯಾಯ ಊರಿನ ಬೆಳವಣಿಗೆ ಖ್ಯಾತಿಯಲ್ಲಿ ಅಲ್ಲಿನ ಸಾಧಕರ ಪರಿಶ್ರಮವಿರುತ್ತದೆ.
ಇಂದು ಸುಳ್ಯವನ್ನು ಗುರುತಿಸುವುದು ಡಾ| ಕುರುಂಜಿ ವೆಂಕಟರಮಣ ಗೌಡ ಅವರ ಹೆಸರಲ್ಲಿ. ಅವರು ಸ್ಥಾಪಿಸಿದ ಸಂಸ್ಥೆ ಗಳೆಲ್ಲವನ್ನು ಅವರ ಕಾಲಾನಂತರ ಉನ್ನತ ಸ್ಥಿತಿಯಲ್ಲಿ ಮುಂದುವರಿಸುತ್ತಿರುವ ಡಾ| ಕೆ.ವಿ.ಚಿದಾನಂದ ಅವರ ಪರಿಶ್ರಮ ಕಾಳಜಿ ಶ್ಲಾಘನೀಯ. ಇಂದು ಪ್ರತಿಷ್ಠಿತ ಪ್ರಶಸ್ತಿ ದೊರೆತಿರುವುದು ಅವರ ಸೇವೆಗೆ ಸಂದ ಗೌರವವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಎ.ಜೆ. ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರೀಸರ್ಚ್ ಸೆಂಟರ್‌ನ ಪ್ರೊ| ಡಾ| ಕಲ್ಪನಾ ಶ್ರೀಧರ್ ಅವರು ಮಾತನಾಡಿ, ಮಾನವೀಯತೆ, ದಯಾಪರತೆ, ಕಠಿನ ದುಡಿಮೆಯಿಂದ ಆರೋಗ್ಯ ಕ್ಷೇತ್ರಕ್ಕೆ ತಮ್ಮ ಕೊಡುಗೆ ನೀಡುತ್ತಿರುವ ಡಾ|ಚಿದಾನಂದ ಅವರು ಸುಳ್ಯಕ್ಕೊಂದು ಹೆಮ್ಮೆ ಎಂದರು.
ಸಮ್ಮಾನ ಸ್ವೀಕರಿಸಿದ ಡಾ| ಕೆ.ವಿ. ಚಿದಾನಂದ ಅವರು ರೋಗಿಗಳೊಂದಿಗೆ ಉತ್ತಮ ಬಾಂಧವ್ಯ ಇಟ್ಟು ಕೊಂಡಿ ರು ವು ದ ರಿಂದ ಅವರನ್ನು ವಿಐಪಿಯಂತೆ ನೋಡಿಕೊಳ್ಳುತ್ತೇವೆ. ಕಡಿಮೆ ವೆಚ್ಚದಲ್ಲಿ ಉತ್ತಮ ಸೇವೆ ನೀಡುವುದು ನಮ್ಮ ಧ್ಯೇಯ. ತಂದೆಯ ಪ್ರೇರಣೆಯಿಂದ ಇದೆಲ್ಲ ಸಾಧ್ಯವಾಗಿದೆ ಎಂದರು.
ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ| ಶೀಲಾ ಜಿ.ನಾಯಕ್ ಅಭಿನಂದನ ಭಾಷಣ ಮಾಡಿ, ಸಮ್ಮಾನಿಸಿದರು. ಕೆವಿಜಿ ಕಾನೂನು ಕಾಲೇಜಿನ ಮಾಜಿ ಪ್ರಾಂಶುಪಾಲ ಪಡ್ಡಂಬೈಲ್ ವೆಂಕಟ್ರಮಣ ಗೌಡ ಅಧ್ಯ ಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಡಾ| ರೇಣುಕಾಪ್ರಸಾದ್ ಕೆ.ವಿ., ಖಜಾಂಚಿ ಶೋಭಾ ಚಿದಾನಂದ, ಶ್ರೀಧರ್ ಮುರುಳ್ಯ ಮೊದಲಾದವರು ಭಾಗವಹಿಸಿದ್ದರು.
ಕೆವಿಜಿ ಡೆಂಟಲ್ ಕಾಲೇಜಿನ ಪ್ರಾಂಶುಪಾಲೆ ಡಾ| ಮೋಕ್ಷಾ ನಾಯಕ್ ಸ್ವಾಗತಿಸಿ, ಕೆವಿಜಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ , ಕಾರ್ಯಕ್ರಮ ಸಂಘಟಕ ಡಾ| ಎನ್.ಎ. ಜ್ಞಾನೇಶ್ ಪ್ರಾಸ್ತಾವಿಸಿದ ರು. ಕೆವಿಜಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಎನ್.ಎಸ್. ಶೆಟ್ಟರ್ ವಂದಿಸಿದರು.ಸಂಜೀವ ಕುದ್ಪಾಜೆ, ಬೇಬಿ ವಿದ್ಯಾ, ಲಕ್ಷ್ಮ ಣ ಯೇನೆಕಲ್ಲು ನಿರೂಪಿಸಿದರು. ಡಾ| ಗಿರಿಧರ ಗೌಡ ಸಮ್ಮಾನ ಪತ್ರ ವಾಚಿಸಿದರು.
ಡಾ| ಗೀತಾ ದೊಪ್ಪ ಮತ್ತು ಡಾ| ಯಶೋದಾ ರಾಮಚಂದ್ರ ಅತಿಥಿಗಳನ್ನು ಪರಿಚಯಿಸಿದರು. ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.