ಚರಂಡಿ ಸ್ಲ್ಯಾಬ್ ಅವೈಜ್ಞಾನಿಕ ಜೋಡಣೆ: ಪರಿಶೀಲನೆ 


Team Udayavani, Apr 24, 2018, 11:15 AM IST

24-April-6.jpg

ಸುಳ್ಯ : ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯ ನಗರದಲ್ಲಿ ಚರಂಡಿ ಸ್ಲ್ಯಾಬ್ ಗಳು ಸಮರ್ಪಕವಾಗಿ ಅಳವಡಿಕೆ
ಆಗದಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಕೆಆರ್‌ಡಿಸಿಎಲ್‌ ಪ್ರಭಾರ ಮುಖ್ಯ ಎಂಜಿನಿಯರ್‌ ನಂಜುಂಡಪ್ಪ ಹಾಗೂ ಇತರ ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಹೆದ್ದಾರಿಗಳಲ್ಲಿ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಡಿ.ಎಂ. ಶಾರೀಖ್‌ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮುಖ್ಯ ರಸ್ತೆ ಬದಿಗಳಲ್ಲಿನ ಚರಂಡಿಯ ಸ್ಲ್ಯಾಬ್ ಗಳ ಪರಿಶೀಲನೆ ನಡೆಯಿತು.

ಸರಿಪಡಿಸಲು ತಾಕೀತು
ಪೈಚಾರ್‌ನಿಂದ ಗಾಂಧಿ ನಗರದ ತನಕ ಪರಿಶೀಲನೆ ನಡೆಸಿದರು. ಸ್ಲ್ಯಾಬ್  ಅವ್ಯವಸ್ಥೆಯನ್ನು ತತ್‌ಕ್ಷಣ ಸರಿಪಡಿಸಬೇಕು. ಮುಂದಿನ ಮಳೆಗಾಲದ ಒಳಗೆ ಕಾಮಗಾರಿ ವ್ಯವಸ್ಥಿತವಾಗಿ ಪೂರ್ಣಗೊಳ್ಳಬೇಕು ಎಂದು ಅವರು ಗುತ್ತಿಗೆದಾರರಿಗೆ ತಾಕೀತು ಮಾಡಿದರು. ಈ ಬಗ್ಗೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಾಂಧಿನಗರದ ಅರಣ್ಯ ಇಲಾಖೆ ಕಚೇರಿ ಬಳಿ ಒಂದು ಬದಿಯಲ್ಲಿ ಮಾತ್ರ ಚರಂಡಿ ನಿರ್ಮಿಸಲಾಗಿದೆ. ಇದರಿಂದ ಮಳೆಗಾಲದಲ್ಲಿ ನೀರು ರಸ್ತೆಯಲ್ಲಿಯೇ ಹರಿದು ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಇದನ್ನು ತತ್‌ಕ್ಷಣ ಸರಿಪಡಿಸುವಂತೆ ಸ್ಥಳೀಯ ನಿವಾಸಿ ಅಬ್ದುಲ್ಲ ಗಾಂಧಿನಗರ ಅವರು ಎಂಜಿನಿಯರ್‌ ಗಮನಕ್ಕೆ ತಂದರು. 

ಆರಂಭದಲ್ಲಿ ಕೆಆರ್‌ಡಿಸಿಎಲ್‌ ವತಿ ಯಿಂದ ಚರಂಡಿ ನಿರ್ಮಾಣ ನಡೆಯುತ್ತಿದ್ದ ಸಂದರ್ಭ ಕಾಮಗಾರಿ ಗುಣ ಮಟ್ಟದಿಂದ ಕೂಡಿತ್ತು. ಆಂದ್ರಪ್ರದೇಶದ ಕಂಪೆನಿಗೆ ಸಬ್‌ ಗುತ್ತಿಗೆ ನೀಡಿದ ಬಳಿಕ ಕಾಮಗಾರಿ ಅವೈಜ್ಞಾನಿಕವಾಗಿ ಕೂಡಿದೆ ಎಂದು ಸಾರ್ವಜನಿಕರು ದೂರಿದರು.

ರಾಜ್ಯ ಹೆದ್ದಾರಿಯ ಕಲ್ಲುಗುಂಡಿ ಭಾಗದಲ್ಲಿ ರಸ್ತೆಯಲ್ಲಿ ನಿರ್ಮಿಸಲಾದ ಹಂಪ್‌ಗ್ಳು ಅವೈಜ್ಞಾನಿಕ ಸ್ಥಿತಿಯಲ್ಲಿರುವ ಬಗ್ಗೆ ಉತ್ತರಿಸಿದ ಕೆಎಂಸಿ ಎಂಜಿನಿಯರ್‌ ಸುನೀಲ್‌, ಸುಳ್ಯ ಪೊಲೀಸ್‌ ಠಾಣೆಯ ಕೋರಿಕೆ ಮೇರೆಗೆ ಹಂಪ್‌ ನಿರ್ಮಿಸಲಾಗಿತ್ತು. ಅಲ್ಲಿ ಅಪಘಾತ ಸಂಭವಿಸಿದ ಕಾರಣದಿಂದ ಹಂಪ್‌ಗೆ ಬಣ್ಣ ಬಳಿಯಲಾಗಿದೆ ಎಂದು ಮಾಹಿತಿ ನೀಡಿದರು. ಈಗಿರುವ ಹಂಪ್‌ ಎತ್ತರ 6 ಇಂಚು ಇದ್ದಲ್ಲಿ, ಅದನ್ನು 3 ಇಂಚಿಗೆ ಇಳಿಸಬೇಕು. ರಾಜ್ಯ ಹೆದ್ದಾರಿಗಳಲ್ಲಿ ಹಂಪ್‌ ನಿರ್ಮಿಸುವ ಮೊದಲು ನಮ್ಮ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು. ಕೆಆರ್‌ಡಿಸಿಎಲ್‌ ಎಕ್ಸಕ್ಯೂಟಿವ್‌ ಎಂಜಿನಿಯರ್‌ ಲಕ್ಷ್ಮೀಶ ಮೈಸೂರು, ದೂರುದಾರ ಡಿ.ಎಂ. ಶಾರೀಕ್‌, ಸಂಶುದ್ದೀನ್‌ ಮೊದಲಾದವರು ಉಪಸ್ಥಿತರಿದ್ದರು.

ಸುದಿನ ವರದಿ ಫಲಶ್ರುತಿ
ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಹಾಗೂ ಚರಂಡಿ ಅವ್ಯವಸ್ಥೆ ಕುರಿತು ಕೆಲ ತಿಂಗಳ ಹಿಂದೆ ಉದಯವಾಣಿ ಸುದಿನ ವಿಸ್ತೃತ ವರದಿ ಪ್ರಕಟಿಸಿತ್ತು. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಡಿ.ಎಂ. ಶಾರೀಕ್‌ ಅವರು ದೂರು ನೀಡಿದ್ದರು.

ಟಾಪ್ ನ್ಯೂಸ್

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.