ಬೆಳ್ತಂಗಡಿ : ಇಂದು ಡಾ| ಹೆಗ್ಗಡೆ ಪಟ್ಟಾಭಿಷೇಕದ ವರ್ಧಂತ್ಯುತ್ಸವ
Team Udayavani, Oct 24, 2022, 9:00 AM IST
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 52ನೇ ವರ್ಧಂತ್ಯುತ್ಸವು ಅ. 24ರ ಸೋಮವಾರ ಜರಗಲಿದೆ.
1948ರ ನ. 25ರಂದು ಅಂದಿನ ಧರ್ಮಾಧಿಕಾರಿ ಕೀರ್ತಿಶೇಷ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರರಾಗಿ ಜನಿಸಿದ್ದ ವೀರೇಂದ್ರ ಕುಮಾರ್ 1968ರ ಅ. 24ರಂದು ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. ಎಂಟು ಶತಮಾನಗಳಿಂದ ನಡೆಯುತ್ತಿದ್ದ ಅನ್ನದಾನ, ವಿದ್ಯಾದಾನ, ಔಷಧದಾನ ಮತ್ತು ಅಭಯದಾನದೊಂದಿಗೆ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಪ್ರತಿ ವರ್ಷ ಉಚಿತ ಸಾಮೂಹಿಕ ವಿವಾಹ, ಕಲ್ಯಾಣ ಮಂಟಪಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಆಯುರ್ವೇದ, ಪ್ರಕೃತಿ ಚಿಕಿತ್ಸಾ ವಿಧಾನ ಮತ್ತು ಯೋಗ ವಿಜ್ಞಾನಕ್ಕೆ ಕಾಯಕಲ್ಪ, ಸ್ವ-ಉದ್ಯೋಗ ತರಬೇತಿ ಕೇಂದ್ರಗಳು ಮೊದಲಾದ ಹತ್ತು ಹಲವು ಯೋಜನೆಗಳನ್ನು ವಿವಿಧೆಡೆ ಆರಂಭಿಸಿದರು.
ಶಾಂತಿವನ ಟ್ರಸ್ಟ್ ಮೂಲಕ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಅನುಷ್ಠಾನ, ಧರ್ಮೋತ್ಥಾನ ಟ್ರಸ್ಟ್ ಮೂಲಕ ಐತಿಹಾಸಿಕ ದೇವಸ್ಥಾನಗಳು ಮತ್ತು ಸ್ಮಾರಕಗಳ ಜೀರ್ಣೋದ್ಧಾರ ಮತ್ತು ಸಂರಕ್ಷಣೆ ಇತ್ಯಾದಿ ಹತ್ತು – ಹಲವು ಯೋಜನೆಗಳನ್ನು ಡಾ| ಹೆಗ್ಗಡೆಯವರು ಅನುಷ್ಠಾನಗೊಳಿಸಿದ್ದಾರೆ.
ಇವರ ಸೇವೆ-ಸಾಧನೆಯನ್ನು ಮನ್ನಿಸಿ ಪ್ರಧಾನಿ ನರೇಂದ್ರ ಮೋದಿಯವರು ಹೆಗ್ಗಡೆಯವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿರುವುದು ಧರ್ಮಸ್ಥಳದ ಪರಂಪರೆಗೆ ಸಂದ ಅಪಾರ ಗೌರವವಾಗಿದೆ. ಸಂಪ್ರದಾಯದಂತೆ ಪಟ್ಟಾಭಿಷೇಕ ವರ್ಧಂತಿ ದಿನ ಹೆಗ್ಗಡೆಯವರು ತಮ್ಮ ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ. ಸೋಮವಾರ ದೇವಸ್ಥಾನ ಮತ್ತು ಬಸದಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಅಭಿನಂದನ ಸಮಾರಂಭ
ಅ. 24ರ ಸಂಜೆ 4ಕ್ಕೆ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಹೆಗ್ಗಡೆಯವರ ಅಭಿನಂದನ ಸಮಾರಂಭ ನಡೆಯಲಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸುವರು. ಶಾಸಕರಾದ ಕೆ. ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್‌ಕುಮಾರ್ ಶುಭಾ ಶಂಸನೆ ಮಾಡುವರು. ಹಿರಿಯ ನೌಕರರ ಸಮ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳ ಅಭಿನಂದನೆ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿ ಅಧ್ಯಕ್ಷ ಡಿ. ಹಷೇìಂದ್ರ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಹಿಂದೂ ತರುಣರ ಹತ್ಯೆಗೆ ಯತ್ನ; ಠಾಣೆಗೆ ದಾಳಿ ಪ್ರಕರಣ ಎನ್‌ಐಎ ವ್ಯಾಪ್ತಿಗೆ: ಮುತಾಲಿಕ್ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.