‘ಕುಡಿಯುವ ನೀರು ಕೃಷಿಗೆ ಬಳಸಿದರೆ ಸಂಪರ್ಕ ಕಡಿತ’
Team Udayavani, Feb 7, 2019, 12:55 AM IST
ಅಜೆಕಾರು: ಯರ್ಲಪಾಡಿ ಗ್ರಾ.ಪಂ.ನ ಗ್ರಾಮ ಸಭೆ ಪಂಚಾಯತ್ ಸಭಾಭವನದಲ್ಲಿ ಫೆ. 6ರಂದು ಪಂಚಾಯತ್ ಅಧ್ಯಕ್ಷರಾದ ವಸಂತ ಕುಲಾಲ್ ಅಧ್ಯಕ್ಷತೆಯಲ್ಲಿ ನಡೆಯಿತು.
ವಸಂತ ಕುಲಾಲ್ ಮಾತನಾಡಿ, ಯರ್ಲಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದ್ದು ಕುಡಿಯುವ ನೀರಿಗೆ ಸಂಪರ್ಕ ಪಡೆದು ಕೃಷಿ ಸೇರಿದಂತೆ ಇತರ ಉದ್ದೇಶಕ್ಕೆ ನೀರನ್ನು ಬಳಕೆ ಮಾಡಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದರು.
ಹಲವು ವರ್ಷಗಳಿಂದ ಸರಕಾರಿ ಕಂದಾಯ ಭೂಮಿಯಲ್ಲಿ ಕೃಷಿ ಮಾಡಿ ಕೊಂಡು ಬಂದಿರುವ ರೈತರು ಅಕ್ರಮ ಸಕ್ರಮಕ್ಕಾಗಿ ನಮೂನೆ 57ರಲ್ಲಿ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯ ಗ್ರಾಮ ಕರಣಿಕರಾದ ತಾರೇಶ್ ಸೂಚಿಸಿ ದರು. ಪಿಡಿಒ ಪ್ರಮೀಳಾ ನಾಯಕ್ ಮಾಹಿತಿ ನೀಡಿದರು.
ಸಭೆಯಲ್ಲಿ ಪ.ಜಾತಿ ಮತ್ತು ಪ. ಪಂಗಡದ ಫಲಾನುಭವಿಗಳಿಗೆ ಸಹಾಯ ಧನದ ಚೆಕ್‌ಗಳನ್ನು ವಿತರಿಸಲಾಯಿತು.ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಕಾರ್ಕಳ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ| ಸುಬ್ರಹ್ಮಣ್ಯ ಪ್ರಸಾದ್ ಭಾಗವಹಿಸಿದ್ದರು.
ಆರೋಗ್ಯ ಇಲಾಖೆಯ ಮೇಲ್ವಿಚಾರಕ ರಾದ ಮೇರಿ, ತೋಟಗಾರಿಕೆ ಇಲಾಖೆಯ ಪ್ರಭುಸ್ವಾಮಿ, ಕೃಷಿ ಇಲಾಖೆಯ ಸಿದ್ದಪ್ಪ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಮೇಲ್ವಿಚಾರಕರಾದ ಸೌಭಾಗ್ಯ, ಅರಣ್ಯ ಇಲಾಖಾಧಿಕಾರಿ ಶ್ರೀಧರ್, ಪಶು ಸಂಗೋಪನ ಇಲಾಖಾಧಿಕಾರಿ ಡಾ| ಸೂರಜ್ ಮಾಹಿತಿ ನೀಡಿದರು.
ಪಂಚಾಯತ್ ಉಪಾಧ್ಯಕ್ಷ ಉದಯ ಹೆಗ್ಡೆ, ಸದಸ್ಯರು, ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯ ಕರ್ತೆಯರು ಉಪಸ್ಥಿತರಿದ್ದರು.
ಸಿಬಂದಿ ಕಾಂತಾ ಅವರು ಆರ್ಥಿಕ ವರ್ಷದ ವರದಿ ಮಂಡಿಸಿದರು. ಕಾರ್ಯ ದರ್ಶಿ ಸುನಂದಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಿಬಂದಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.