ಕರಾಯ: ಸ್ಥಳೀಯಾಡಳಿತದಿಂದ ಕುಡಿಯುವ ನೀರಿನ ವ್ಯವಸ್ಥೆ
ಉದಯವಾಣಿ ಫಲಶ್ರುತಿ
Team Udayavani, Apr 9, 2019, 6:00 AM IST
ಉಪ್ಪಿನಂಗಡಿ: ಕರಾಯ ಗ್ರಾಮದ ಪಡಾಯಿಬೆಟ್ಟುವಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮೂಲ ಸೌಕರ್ಯದಡಿ ಸ್ಥಳೀಯ ಆಡಳಿತವು ಪರ್ಯಾಯ ವ್ಯವಸ್ಥೆ ಮಾಡಿದೆ.
ಇಲ್ಲಿನ ಸಮಸ್ಯೆಗಳ ಕುರಿತು ನಾಲ್ಕು ದಿನಗಳ ಹಿಂದೆ “ಉದಯವಾಣಿ’ ಸುದಿನ ಸಚಿತ್ರ ವರದಿಯನ್ನು ಪ್ರಕಟಿಸಿತ್ತು. ಇದನ್ನು ಮನಗಂಡ ಪಂಚಾಯತ್ ತತ್‌ಕ್ಷಣವೇ ಸ್ಪಂದಿಸಿದೆ. ಗ್ರಾಹಕರ ಬೇಡಿಕೆಗೆ ತುರ್ಕಳಿಕೆ ಭಾಗದ ಸಂಪರ್ಕವನ್ನು ಜೋಡಣೆಗೈಯುವ ಮೂಲಕ ಕುಡಿಯುವ ನೀರು ಒದಗಿಸುವಲ್ಲಿ ಹರಸಾಹಸ ಪಡಬೇಕಾಯಿತು ಎಂದು ಅಯೂಬ್ ಡಿ.ಕೆ. ತಿಳಿಸಿದ್ದಾರೆ.
ಪಂಚಾಯತ್ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಅವರು ಪ್ರತಿಕ್ರಿಯಿಸಿ, ಇಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ವರ್ಗದ ಗ್ರಾಹಕರಿಗೆ ಸಮಾಜ ಕಲ್ಯಾಣ ಇಲಾಖೆಯ ಗಂಗಾ ಕಲ್ಯಾಣ ಕೊಳವೆ ಬಾವಿ ಪ್ರತ್ಯೇಕವಾಗಿದ್ದು, ಬಾವಿಯಲ್ಲಿ ನೀರು ಕಡಿಮೆಯಾಗಿದೆ. ಈ ಬಗ್ಗೆ ಆಯಾ ಇಲಾಖೆಗೆ ದೂರು ಸಲ್ಲಿಸಬೇಕಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.