ನಗರದಲ್ಲಿ ಟ್ಯಾಂಕರ್‌ ಬಳಕೆ; ಒಡೆದ ಮರಳು ಕಟ್ಟ

ಸುಳ್ಯ ತಾ|: ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ನೀರಿನ ಬರ

Team Udayavani, Apr 13, 2019, 6:00 AM IST

i-10

ನಾಗಪಟ್ಟಣದ ಬಳಿ ನೀರಿನ ಸಂಗ್ರಹ ಹೆಚ್ಚಾಗಿ ಮರಳು ಕಟ್ಟ ಒಡೆದು ಹೋಗಿದೆ.

ಸುಳ್ಯ: ಎಂಟು ತಿಂಗಳ ಭಾರೀ ಮಳೆಗೆ ಸಾಕ್ಷಿಯಾಗಿದ್ದ ಸುಳ್ಯ ತಾಲೂಕಿನ ಈಗಿನ ಸ್ಥಿತಿ ತದ್ವಿರುದ್ಧ. 28 ಗ್ರಾ.ಪಂ. ಮತ್ತು ನ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಕಾಡಿದೆ. ಭಾಗಮಂಡಲ ಪ್ರದೇಶದಲ್ಲಿ ಮಳೆ ಸುರಿದ ಕಾರಣ ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಕಂಡು ಬಂದಿದ್ದು, ನಗರಕ್ಕೆ ನೀರು ಪೂರೈಸಲು ನಿರ್ಮಿಸಿದ ಕಟ್ಟದಲ್ಲಿ ನೀರಿನ ಸಂಗ್ರಹ ಪ್ರಮಾಣ ಕೊಂಚ ಹೆಚ್ಚಾಗಿದೆ.

ಗ್ರಾಮಾಂತರದಲ್ಲಿ ಎರಡು ದಿನ ಕೊಂಚ ಮಳೆ ಸುರಿದು ಇಳೆ ತಂಪಾಗಿದ್ದರೂ ನೀರಿನ ಕೊರತೆ ನೀಗಲಾರದು. ಹಾಗಾಗಿ ಮಳೆ ಕೈ ಕೊಟ್ಟರೆ ಪರಿಸ್ಥಿತಿ ಬರೆಗಾಲದ ಸ್ವರೂಪ ಪಡೆದುಕೊಳ್ಳುವ ಆತಂಕ ಉಂಟಾಗಿದೆ.

ತಾಲೂಕು ಆಡಳಿತ ನೀಡಿದ ವರದಿ ಪ್ರಕಾರ, 28 ಪಂಚಾಯತ್‌ಗಳ ಪೈಕಿ 26ರಲ್ಲಿ ಸಮಸ್ಯೆ ಹೆಚ್ಚಾಗಿದೆ. ಪೆರುವಾಜೆ, ಅಮರಮುಟ್ನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಪರಿಸ್ಥಿತಿ ಪರವಾಗಿಲ್ಲ ಅನ್ನುವುದು ತಾ.ಪಂ. ಮಾಹಿತಿ. ಆದರೆ ಜನ ಹೇಳುವ ಪ್ರಕಾರ ಎಲ್ಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಮಸ್ಯೆ ತಪ್ಪಿಲ್ಲ. ನಳ್ಳಿ ನೀರು, ಸರಕಾರಿ ಬಾವಿ, ಖಾಸಗಿ ಬಾವಿ, ಕೆರೆಗಳನ್ನು ನಂಬಿದ ನಿವಾಸಿಗಳಿಗೂ ನೀರಿಲ್ಲ. ಹಲವು ಕಾಲನಿಗಳಲ್ಲಿ ಮೂರು ದಿನಕ್ಕೊಮ್ಮೆ ನಳ್ಳಿ ನೀರು ಪೂರೈಸಲಾಗುತ್ತಿದೆ.

ವಿದ್ಯುತ್‌ ಶಾಕ್‌
ನಳ್ಳಿ ನೀರು ನಂಬಿದ ಕುಟುಂಬಗಳು ಹನಿ ಹನಿ ನೀರಿಗೂ ಪರದಾಡುವ ಸ್ಥಿತಿ ಉಂಟಾಗಿದೆ. ನೀರು ಲಭ್ಯವಿದ್ದರೂ, ಪೂರೈಕೆಗೆ ವಿದ್ಯುತ್‌ ಸಮಸ್ಯೆ ಅಡ್ಡಿಯಾಗಿದೆ. ತ್ರಿಫೇಸ್‌ ಇಲ್ಲದೆ ಕೊಳವೆಬಾವಿ ಪಂಪ್‌ ಚಾಲೂ ಆಗುತ್ತಿಲ್ಲ. ಕರೆಂಟ್‌ ಬಳಸದೆ ಪರ್ಯಾಯ ವ್ಯವಸ್ಥೆಯಲ್ಲಿ ನೀರೆತ್ತಲು ದಾರಿ ಇಲ್ಲ. ಹೀಗಾಗಿ ಗ್ರಾ.ಪಂ.ಗಳಿಗೆ ನೀರೋದಗಿಸಲು ಸಮಸ್ಯೆ ತಂದೊಡ್ಡಿದೆ.

ನಗರದಲ್ಲಿ ಟ್ಯಾಂಕರ್‌ ಬಳಕೆ
ನಗರದ ಕೆಲವು ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಅಂಬೆಟಡ್ಕ, ಬೋರುಗುಡ್ಡೆ, ಕುರುಂಜಿಬಾಗ್‌ ಮೊದಲಾದ ಎತ್ತರದ ಪ್ರದೇಶಕ್ಕೆ ನೀರು ಪೂರೈಕೆ ಆಗದ ಕಾರಣ ಟ್ಯಾಂಕರ್‌ನಲ್ಲಿ ವಿತರಿಸಲಾಗುತ್ತಿದೆ. 6000 ಲೀ. ಸಾಮರ್ಥ್ಯದ ಟ್ಯಾಂಕರ್‌ ಇದ್ದು, ಇದರಲ್ಲಿ ನೀರು ಪೂರೈಸಲಾಗುತ್ತಿದೆ.

ಒಡೆದ ಮರಳು ಕಟ್ಟ
ಪಯಸ್ವಿನಿ ನದಿ ಪಾತ್ರದಲ್ಲಿ ಮಳೆ ಸುರಿದಿದ್ದು, ನಾಗಪಟ್ಟಣ ಬಳಿ ನಿರ್ಮಿಸಿದ ಮರಳು ಕಟ್ಟದಲ್ಲಿ ನೀರಿನ ಸಂಗ್ರಹ ಹೆಚ್ಚಿದೆ. ಗುರುವಾರ ರಾತ್ರಿ ಕಟ್ಟದ ಹೆಚ್ಚುವರಿ ನೀರು ನದಿಗೆ ಹರಿದಿದೆ. ಒತ್ತಡ ಹೆಚ್ಚಿ ಕಟ್ಟದ ಒಂದು ಪಾರ್ಶ್ವ ಒಡೆದು ಹೋಗಿ, ಮರಳಿನ ಚೀಲಗಳು ನೀರು ಪಾಲಾಗಿವೆ. ಅದನ್ನು ಮರುಜೋಡಿಸುವ ಕಾರ್ಯಕ್ಕೆ ನ.ಪಂ.ಮುಂದಾಗಿದೆ.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.