ಎಡಿಬಿ ಒಂದನೇ ಹಂತದ ಯೋಜನೆ ವೈಫಲ್ಯದಿಂದ ಕುಡಿಯುವ ನೀರಿನ ಸಮಸ್ಯೆ
Team Udayavani, Apr 30, 2019, 6:31 AM IST
ಮಹಾನಗರ: ಎಡಿಬಿ ಒಂದನೇ ಹಂತದ ಯೋಜನೆ ಸಂಪೂರ್ಣ ವಿಫಲವಾದ್ದರಿಂದ ನಗರಕ್ಕೆ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ನೀರಿನ ಸಮಸ್ಯೆ ಉಲ್ಬಣಕ್ಕೆ ಹಿಂದೆ ಆಡಳಿತ ನಡೆಸಿದವರೇ ಕಾರಣ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.
ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, 160 ಕೋಟಿ ರೂ. ವೆಚ್ಚದಲ್ಲಿ ಎಡಿಬಿ ಒಂದನೇ ಹಂತದ ಯೋಜನೆ ನಡೆದಿದೆ. ಯೋಜನೆ ಪ್ರಕಾರ 2023ರ ವರೆಗೆ ನಗರಕ್ಕೆ 24×7 ನೀರು ಕಲ್ಪಿಸಬಹುದಿತ್ತು. ಆದರೆ ತುಂಬೆಯಲ್ಲಿ ಶುದ್ಧೀಕರಣ ಘಟಕ, ನೀರಿನ ಟ್ಯಾಂಕ್, ಗುಣಮಟ್ಟದ ಪೈಪ್ ಅಳವಡಿಸುವಲ್ಲಿ ಸಂಪೂರ್ಣ ವಿಫಲವಾಗಿರುವುದರಿಂದಲೇ ಪ್ರಸ್ತುತ ನೀರಿಗಾಗಿ ಹಾಹಾಕಾರ ಉಂಟಾಗಿದೆ ಎಂದರು.
ತುಂಬೆಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಬೇಕೆಂಬ ಒತ್ತಾಯ ಎಡಿಬಿ ಒಂದನೇ ಹಂತದ ಕಾಮಗಾರಿಯ ವೇಳೆಯೇ ಕೇಳಿ ಬಂದಿತ್ತು. ಆದರೆ ಆಗಿನ ಕಾಂಗ್ರೆಸ್ ಸರಕಾರ ಈ ಬೇಡಿಕೆಯನ್ನು ತಿರಸ್ಕರಿಸಿತ್ತು. ಆಗ ಆ ಯೋಜನೆಯ ಮುಖ್ಯಸ್ಥರು ಮಾಜಿ ಶಾಸಕರೇ ಆಗಿದ್ದರು ಎಂದು ತಿಳಿಸಿದರು.
ಯಾರಧ್ದೋ ಒತ್ತಡ, ಲಾಬಿಗೆ ಮಣಿದು ನೀರು ಸರಬರಾಜು ಮಾಡಬೇಡಿ. ನಿಜವಾಗಿಯೂ ಸಮಸ್ಯೆ ಇರುವವರು, ಬಡವರು, ಎತ್ತರದ ಪ್ರದೇಶದಲ್ಲಿರುವವರಿಗೆ ಕೂಡಾ ನೀರು ಸಿಗಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ತುಂಬೆ ವೆಂಟೆಡ್ ಡ್ಯಾಂ ಪರಿಶೀಲನೆಗೆ ತೆರಳುವಾಗ ಶಾಸಕರನ್ನು ಕರೆದುಕೊಂಡು ಹೋಗಬೇಕಿತ್ತು. ಆದರೆ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಯಾವುದೇ ಮಾಹಿತಿ ನೀಡದೆ ತೆರಳಿರುವುದು ಸರಿಯಲ್ಲ ಎಂದು ಇದೇ ವೇಳೆ ಅವರು ತಿಳಿಸಿದರು.
ತುಂಬೆಯಲ್ಲಿ ಪ್ರಸ್ತುತ ನೀರಿನ ಮಟ್ಟ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ರೇಷನಿಂಗ್ ಆರಂಭಿಸುವುದು ಅನಿವಾರ್ಯ ಎಂಬುದಾಗಿ ಎಂಜಿನಿಯರ್ ತಿಳಿಸಿದ್ದಾರೆ. ಸಾರ್ವಜನಿಕರು ನೀರನ್ನು ಪೋಲು ಮಾಡದೇ, ಮಿತವಾಗಿ ಬಳಸಬೇಕು ಎಂದರು.ದ.ಕ. ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರು, ಮಾಜಿ ಕಾರ್ಪೊರೇಟರ್‌ಗಳಾದ ಭಾಸ್ಕರ್‌ಚಂದ್ರ ಶೆಟ್ಟಿ, ಪ್ರೇಮಾನಂದ ಶೆಟ್ಟಿ, ರಾಮ ಅಮೀನ್, ಮೀನುಗಾರ ಮುಖಂಡ ನಿತಿನ್ ಕುಮಾರ್, ರಮೇಶ್ ಉಪಸ್ಥಿತರಿದ್ದರು.
ಪರಿಹಾರ ನೀಡಲು ಸಿಎಂಗೆ ಬೇಡಿಕೆ
ತುಂಬೆ ವೆಂಟೆಡ್ ಡ್ಯಾಂನಲ್ಲಿ 7 ಮೀಟರ್‌ನಷ್ಟು ನೀರು ನಿಲ್ಲಬೇಕಾದರೆ ಹಲವರ ಜಾಗ ಮುಳುಗಡೆಯಾಗಿದೆ. ಜಾಗ ಕಳೆದುಕೊಂಡವರಿಗೆ 115-120 ಕೋಟಿ ರೂ. ಪರಿಹಾರ ನೀಡಬೇಕು. ಆದರೆ ಅಂದು ರಾಜ್ಯದಲ್ಲಿ, ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತ ಇದ್ದರೂ ಇಲ್ಲಿನ ಎಲ್ಲ ಶಾಸಕರು ಕಾಂಗ್ರೆಸ್‌ನವರಾದರೂ ಆಗ ಅವರಿಗೆ ಪರಿಹಾರ ತರಿಸಲು ಸಾಧ್ಯವಾಗಲಿಲ್ಲ ಎಂದು ಆಪಾದಿಸಿದ ವೇದವ್ಯಾಸ ಕಾಮತ್, ಈಗಿನ ದೋಸ್ತಿ ಸರಕಾರದಲ್ಲಿಯೂ ಈ ಬಗ್ಗೆ ಯಾರೊಬ್ಬರು ಮಾತನಾಡುತ್ತಿಲ್ಲ. ಆದರೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಈಗಾಗಲೇ ತಾನು ಎರಡು ಬಾರಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬೇಡಿಕೆ ಇಟ್ಟಿದ್ದೇನೆ ಎಂದರು.
ಮೇಲ್ವಿಚಾರಣೆ ಸಮಿತಿ ರಚಿಸಲಾಗುವುದು
451 ಕೋಟಿ ರೂ. ವೆಚ್ಚದ ಎರಡನೇ ಹಂತದ ಎಡಿಬಿ ಯೋಜನೆಯು ಟೆಂಡರ್ ಪ್ರಕ್ರಿಯೆಯಲ್ಲಿದೆ. ಕೇಂದ್ರದ ಅಮೃತ ಯೋಜನೆಯಲ್ಲಿ 35.51 ಕೋಟಿ ರೂ. ಬಿಡುಗಡೆಯಾಗಿದೆ. ಈ ಯೋಜನೆಯಲ್ಲಿ ಯಾವುದೇ ವೈಫಲ್ಯವಾಗದಂತೆ ಮೇಲ್ವಿಚಾರಣೆ ಸಮಿತಿ ರಚಿಸಲಾಗುವುದು ಎಂದು ಶಾಸಕರು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.