ವಾರದಲ್ಲಿ ನಿರಾಶ್ರಿತರಿಗೆ ಮನೆ ನಿರ್ಮಾಣಕ್ಕೆ ಚಾಲನೆ?
Team Udayavani, Dec 1, 2018, 12:05 PM IST
ಅರಂತೋಡು : ಮೂರೂವರೆ ತಿಂಗಳ ಹಿಂದೆ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ನಿರಾಶ್ರಿತರಾದವರಿಗೆ ಇನ್ನು ಒಂದು ವಾರದಲ್ಲಿ ಮುಖ್ಯಮಂತ್ರಿಯವರಿಂದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆಯಲಿದೆ ಎಂದು ಕೊಡಗು ಜಿಲ್ಲಾಡಳಿತ ತಿಳಿಸಿದೆ.
ಸರಕಾರವು ಕೊಡಗಿನಲ್ಲಿ ಸುಮಾರು 10 ಕಡೆ ನಿರಾಶ್ರಿತರಿಗೆ ಮನೆ ನಿರ್ಮಾಣ ಮಾಡಲು ಜಾಗ ಗುರುತಿಸಿದೆ. ಎರಡನೇ ಮೊಣ್ಣಂಗೇರಿ ಮತ್ತು ಜೋಡುಪಾಲದ ನಿರಾಶ್ರಿತರಿಗೆ ಮದೆನಾಡು ಹಾಗೂ ಕೊಡಗು ಸಂಪಾಜೆಯ ಶಾಲೆ ಬಳಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಅಲ್ಲಿ ಮನೆ ನಿರ್ಮಾಣ ಮಾಡಲಾಗುವುದು. ಇದರಿಂದ ನಿರಾಶ್ರಿತರು ಸ್ವಲ್ಪ ಮಟ್ಟಿಗೆ ನಿರಾಳಗೊಂಡಿದ್ದಾರೆ.
ಡಿ. 8ರಂದು ಶಂಕುಸ್ಥಾಪನೆ
ಮಹಾ ಮಳೆಯಿಂದ ನಿರಾಶ್ರಿತರಾದ ಕೊಡಗಿನ 845 ಕುಟುಂಬಗಳಿಗೆ ತಲಾ 9.85 ಲಕ್ಷ ರೂ. ವೆಚ್ಚದಲ್ಲಿ ಎರಡು ಬೆಡ್ ರೂಮ್‌ಗಳಿರುವ ಸುಸಜ್ಜಿತ ಮನೆಗಳನ್ನು ನಿರ್ಮಿಸಲಾಗುವುದು. ಡಿ. 8ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಬೆಂಗಳೂರಿನಲ್ಲಿ ಗುರುವಾರ ತಿಳಿಸಿದ್ದಾರೆ. ನಿರಾಶ್ರಿತರು ಬೀದಿಗೆ ಬೀಳಬಾರದು ಎಂಬ ಉದ್ದೇಶದಿಂದ ಮಾನವೀಯ ನೆಲೆಯಲ್ಲಿ ಸರಕಾರ ತಿಂಗಳಿಗೆ 10 ಸಾವಿರ ರೂ. ಮನೆ ಬಾಡಿಗೆ ನೀಡುತ್ತಿದೆ. 815 ಕುಟುಂಬದವರಿಗೆ ಈಗಾಗಲೇ ತಲಾ 50 ಸಾವಿರ ರೂ. ಹಸ್ತಾಂತರಿಸಲಾಗಿದೆ ಎಂದೂ ಹೇಳಿದ್ದಾರೆ.
ಆರು ಮಾದರಿ
ಮಡಿಕೇರಿ ಆರ್‌ಟಿಒ ಕಚೇರಿ ಪಕ್ಕ 6 ಮಾದರಿ ಮನೆಗಳ ನಿರ್ಮಾಣ ಕೆಲಸ ನಡೆದಿದೆ. ಈ ಮಾದರಿ ಮನೆಗಳಂತೆ ನಿರಾಶ್ರಿತರಿಗೆ ಗುರುತಿಸಲಾದ ಜಾಗದಲ್ಲಿ ಒಟ್ಟು ಐದು ಏಜೆನ್ಸಿಗಳು ಮನೆ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಿವೆ. ಕೊಡಗು ಸಂಪಾಜೆ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಈಗ 24 ಕುಟುಂಬ ವಾಸವಿದ್ದು 13 ಶಾಲಾ ಮಕ್ಕಳ ಸಹಿತ 73 ಜನರಿದ್ದಾರೆ. ದ.ಕ. ಸಂಪಾಜೆ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ 10 ಕುಟುಂಬ ವಾಸವಿದ್ದು 9 ಶಾಲಾ ಮಕ್ಕಳ ಸಹಿತ 40 ಜನರಿದ್ದಾರೆ. ವೃದ್ಧೆಯೂ ಈ ಕೇಂದ್ರದಲ್ಲಿದ್ದಾರೆ.
ಮಾದರಿ ಮನೆ
ನಿರಾಶ್ರಿತರಾದವರಿಗೆ ಗುರುತಿಸ ಲಾದ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಜೋಡುಪಾಲ ಮತ್ತು ಎರಡನೇ ಮೊಣ್ಣಂಗೇರಿ ಭಾಗದ ನಿರಾಶ್ರಿತರಿಗೆ ಕೊಡಗು ಸಂಪಾಜೆ ಮತ್ತು ಮದೆನಾಡಿನಲ್ಲಿ ಮನೆ ನಿರ್ಮಾಣ ಮಾಡಿ ಕೊಡಲಾಗುವುದು. ಈಗಾಗಲೇ ಮಾದರಿ ಮನೆಗಳ ನಿರ್ಮಾಣ ಕಾರ್ಯ ನಡೆದಿದೆ. ನಿರಾಶ್ರಿತರು ಯಾವುದೇ ಆತಂಕಗೊಳ್ಳಬೇಕಾಗಿಲ್ಲ.
-ಶ್ರೀವಿದ್ಯಾ, ಕೊಡಗು ಜಿಲ್ಲಾಧಿಕಾರಿ
ತೇಜೇಶ್ವರ್ ಕುಂದಲ್ಪಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.