ರಸ್ತೆ ಮಧ್ಯೆ ಬಸ್ ನಿಲ್ಲಿಸಿದರೆ ಡ್ರೈವರ್ ಲೈಸನ್ಸ್ ರದ್ದು: ಎಚ್ಚರ
Team Udayavani, Aug 8, 2017, 8:20 AM IST
ಮಂಗಳೂರು: ಎಲ್ಲೆಂದರಲ್ಲಿ ಪ್ರಯಾಣಿಕರನ್ನು ಇಳಿಸಲು ಮತ್ತು ಹತ್ತಿಸಲು ಬಸ್ ನಿಲ್ಲಿಸಿದರೆ ಕಠಿನ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ.
ನಿರ್ದಿಷ್ಟ ಪ್ರದೇಶದಲ್ಲಿ ಬಸ್ ನಿಲ್ದಾಣಗಳಿದ್ದರೂ ಕೆಲವೊಂದು ಬಸ್‌ಗಳವರು ಕೈ ತೋರಿಸಿದಲ್ಲಿ ಅಥವಾ ಪ್ರಯಾಣಿಕರನ್ನು ಕಂಡಲ್ಲಿ ಹಠಾತ್ ಆಗಿ ನಿಲ್ಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ. ಆದುದರಿಂದ ಪ್ರಯಾಣಿಕರನ್ನು ಹತ್ತಿಸಲು ಹಾಗೂ ಇಳಿಸಲು ನಿಗದಿತ ಬಸ್ ತಂಗುದಾಣಗಳಲ್ಲಿಯೇ ಬಸ್‌ಗಳನ್ನು ನಿಲ್ಲಿಸಬೇಕು. ಹೆದ್ದಾರಿ ಸಹಿತ ಯಾವುದೇ ಪ್ರದೇಶದಲ್ಲಿ ಬಸ್ ನಿಲ್ದಾಣ ಹೊರತುಪಡಿಸಿ ಬೇರೆ ಪ್ರದೇಶದಲ್ಲಿ ಬಸ್‌ಗಳನ್ನು ನಿಲುಗಡೆಗೊಳಿಸುವುದು ಕಂಡುಬಂದಲ್ಲಿ ಬಸ್ ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.
ಬಸ್‌ನ ಚಾಲಕ/ನಿರ್ವಾಹಕರು ಸಮವಸ್ತ್ರವನ್ನು ತಪ್ಪದೇ ಧರಿಸಬೇಕು. ಸುರಕ್ಷತಾ ದೃಷ್ಟಿಯಿಂದ ಪ್ರಯಾಣಿಕರು ಬಸ್ ಬೇ/ ತಂಗುದಾಣದಲ್ಲಿಯೇ ಬಸ್ ಹತ್ತಬೇಕು ಹಾಗೂ ಇಳಿಯಬೇಕು. ಯಾವುದೇ ಕಾರಣಕ್ಕೂ ಚಲಿಸುತ್ತಿರುವ ಬಸ್ ಅನ್ನು ಹತ್ತುವುದು ಅಥವಾ ಇಳಿಯುವುದು ಮಾಡಬಾರದು ಎಂದು ಆರ್‌ಟಿಒ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.