ನನೆಗುದಿಗೆ ಬಿದ್ದಿದೆವಾಮಂಜೂರಿನ ಡ್ರೈವಿಂಗ್‌ ಟೆಸ್ಟ್  ಟ್ರಾಫಿಕ್‌

Team Udayavani, May 14, 2018, 11:39 AM IST

14-May-5.jpg

ಮಹಾನಗರ: ಒಂದೂವರೆ ವರ್ಷಗಳ ಹಿಂದೆ ಆರಂಭಗೊಂಡಿದ್ದ ವಾಮಂಜೂರಿನ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಯು ಅನುದಾನದ ಕೊರತೆಯಿಂದಾಗಿ ಇದೀಗ ನನೆಗುದಿಗೆ ಬಿದ್ದಿದೆ.

ವಿವಿಧ ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ವಾಹನ ಚಾಲನಾ ಪರೀಕ್ಷಾ ಕೇಂದ್ರದಕ್ಕೆ ಹೈಟೆಕ್‌ ಸ್ಪರ್ಶ ನೀಡುವ ಉದ್ದೇಶದಿಂದ ಸರಕಾರ ಅನುದಾನ ಬಿಡುಗಡೆ ಮಾಡಿತ್ತು. ಆದರೆ ವಿವಿಧ ಕಾರಣಗಳಿಂದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ವಾಮಂಜೂರಿನಲ್ಲಿ ಸುಮಾರು 2 ಎಕ್ರೆಯಷ್ಟು ಜಾಗದಲ್ಲಿರುವ ವಾಹನ ಚಾಲನಾ ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಕಟ್ಟಡ, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳು ಇಲ್ಲ ಎನ್ನುವುದು ಪರೀಕ್ಷೆಗೆ ಬರುವ ಜನರ ಅಳಲಾಗಿತ್ತು. ಈ ನಿಟ್ಟಿನಲ್ಲಿ ಚಾಲನಾ ಪರೀಕ್ಷಾ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಸರಕಾರದಿಂದ 76 ಲಕ್ಷ ರೂ. ಬಿಡುಗಡೆಗೊಳಿಸಲಾಗಿತ್ತು. ಅನುದಾನ ಬಿಡುಗಡೆಗೊಂಡು ಒಂದೂವರೆ ವರ್ಷ ಕಳೆದರೂ ಆ ಪ್ರದೇಶದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ.

ಅನುದಾನ ಕೊಟ್ಟಿಲ್ಲ
ಬಿಡುಗಡೆಗೊಂಡ ಅನುದಾನದಲ್ಲಿ ಆ ಪ್ರದೇಶದಲ್ಲಿ ಕಟ್ಟಡ, ಬರುವವರಿಗೆ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ, ಶೌಚಾಲಯ ಹಾಗೂ ಕೇಂದ್ರದ ನಾಲ್ಕೂ ಬದಿಯಲ್ಲಿ ಕಾಂಪೌಂಡ್‌ ನಿರ್ಮಿಸುವ ಯೋಜನೆ ರೂಪಿಸಲಾಗಿತ್ತು. ಒಂದೂವರೆ ವರ್ಷದಲ್ಲಿ ಕಟ್ಟಡ, ಶೌಚಾಲಯ ಕಾಮಗಾರಿ ನಡೆದಿದೆ. ಆದರೆ ಬಹುಮುಖ್ಯವಾಗಿ ಬೇಕಾಗಿದ್ದ ವಾಹನ ಚಾಲನಾ ಪರೀಕ್ಷಾ ಕೇಂದ್ರದ ಇಂಟರ್‌ಲಾಕ್‌ ಅಳವಡಿಕೆ ಕಾಮಗಾರಿ ಮಾತ್ರ ಇನ್ನೂ ಆರಂಭಗೊಂಡಿಲ್ಲ. ಟೆಂಡರ್‌ ವಹಿಸಿಕೊಂಡ ನಿರ್ಮಿತಿ ಕೇಂದ್ರ ಅನುದಾನ ಬಿಡುಗಡೆ ವಿಳಂಬವಾದ ಹಿನ್ನೆಲೆಯಲ್ಲಿ ಇಂಟರ್‌ ಲಾಕ್‌ ಕಾಮಗಾರಿ ನಡೆದಿರಲಿಲ್ಲ. ಇನ್ನೂ ಕೆಲವು ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳುತ್ತದೆ ಎಂದು ಹೇಳುತ್ತಿದೆ.

ಟ್ರಾಫಿಕ್‌ ತುಂಬಾ ಜಲ್ಲಿ-ಕಲ್ಲು-ಮಣ್ಣು
ಇಲ್ಲಿ ವಾಹನ ಚಾಲನಾ ಪರವಾನಿಗೆ ಪಡೆಯಲು ಸವಾರರು ಸಂಕಷ್ಟಪಡುವ ಸ್ಥಿತಿಯಿದೆ. ಜಲ್ಲಿ-ಕಲ್ಲು-ಮಣ್ಣು ಆವೃತವಾಗಿರುವ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ವಾಹನ ಬಿಡುವವರು ಪರೀಕ್ಷಾ ಭಯದಿಂದ ಹೆಚ್ಚಿನ ಬಾರಿ ಎಡವುತ್ತಾರೆ. ರಾಜ್ಯದ ಇತರ ಭಾಗದಲ್ಲಿ ಸುಸಜ್ಜಿತ ಟ್ರಾಫಿಕ್‌ ಇರುವುದರಿಂದ ಮಂಗಳೂರಿನ ಟ್ರಾಫಿಕ್‌ ಅನ್ನು ಮೇಲ್ದರ್ಜೆಗೇರಿಸಬೇಕು ಎಂಬ ಆಗ್ರಹವೂ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಯೋಜನೆ ರೂಪಿಸಲಾಗಿತ್ತು.

ದಿನಕ್ಕೆ 100 ಮಂದಿಗೆ ಪರೀಕ್ಷೆ
ವಾಮಂಜೂರಿನಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನದವರೆಗೆ ದ್ವಿಚಕ್ರ ವಾಹನ ಚಾಲನಾ ಪರೀಕ್ಷೆಗೆ ಸುಮಾರು 50 ಮಂದಿ ಫೋರ್‌ ವೀಲ್ಹರ್‌ 60 ಮಂದಿಯಂತೆ ದಿನಕ್ಕೆ 100ಕ್ಕೂ ಅಧಿಕ ಮಂದಿ ಚಾಲನಾ ಪರೀಕ್ಷೆಗೆ ಹಾಜಾರಾಗುತ್ತಾರೆ. ಮಂಗಳೂರಿನ ಇನ್‌ ಸ್ಪೆಕ್ಟರ್‌ ಸೇರಿದಂತೆ 2-3 ಅಧಿಕಾರಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಾರೆ. ಆದರೂ ಇಲ್ಲಿ ಮೂಲಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ಪ್ರಸ್ತಾವನೆ ನೀಡಲಾಗಿತ್ತು. 

ಇಂಟರ್‌ಲಾಕ್‌ ಕಾಮಗಾರಿ ಆರಂಭ
ವಾಮಂಜೂರಿನ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ 76 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಆಯೋಜಿಸಲಾಗಿತ್ತು. ಕಳೆದ ಜನವರಿಯಿಂದ ಕಾಮಗಾರಿಗಳು ಆರಂಭಗೊಂಡಿತ್ತು. ಆದರೆ ಪ್ರಸ್ತುತ ಅನುದಾನ ಬಿಡುಗಡೆಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಇಂಟರ್‌ಲಾಕ್‌ ಕಾಮಗಾರಿ ಆರಂಭಗೊಂಡಿಲ್ಲ. ಚುನವಾಣೆ ಮುಗಿದ ಕೂಡಲೇ ಆ ಕಾಮಗಾರಿಯೂ ಪೂರ್ಣಗೊಳ್ಳಲಿದೆ.
ಸಿ.ಡಿ. ನಾಯಕ್‌,
  ಉಪಸಾರಿಗೆ ಆಯುಕ್ತರು,
  ಮಂಗಳೂರು

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.