ಸುಳ್ಯದಲ್ಲಿ ನೀರಿಗೆ ಬರ: 15 ದಿನಕ್ಕಷ್ಟೆ ಸಂಗ್ರಹ

ಕಟ್ಟಡ ಕಾಮಗಾರಿ, ಕೃಷಿಗೆ ಕುಡಿಯುವ ನೀರು ಬಳಕೆಗೆ ನಿಷೇಧ!

Team Udayavani, May 19, 2019, 6:00 AM IST

a-8

ಸುಳ್ಯ: ಬೇಸಗೆ ಬಿಸಿಯ ಪರಿಣಾಮ ನಗರದಲ್ಲಿ ನೀರಿನ ಕೊರತೆ ಎದುರಾಗಿದ್ದು, ನ.ಪಂ. ನಳ್ಳಿ ವ್ಯವಸ್ಥೆ ಮೂಲಕ ಪೂರೈಕೆ ಮಾಡುವ ಕುಡಿಯುವ ನೀರನ್ನು ಕಟ್ಟಡ ಕಾಮಗಾರಿ, ಕೃಷಿ ತೋಟಕ್ಕೆ ಬಳಸುವುದನ್ನು ನಗರಾಡಳಿತ ನಿಷೇಧಿಸಿದೆ!

ನಗರಕ್ಕೆ ನೀರು ಸರಬರಾಜಿನ ಮೂಲ ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಕಡಿಮೆ ಆಗುತ್ತಿರುವುದರಿಂದ ಮತ್ತು ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಇಳಿಕೆ ಆಗುತ್ತಿರುವ ಕಾರಣ ಮುನ್ನೆಚ್ಚೆರಿಕೆ ಕ್ರಮವಾಗಿ ಈ ಸೂಚನೆ ನೀಡಲಾಗಿದೆ. ಕುಡಿಯುವ ನೀರನ್ನು ಕಟ್ಟಡ ರಚನೆ, ಗಿಡ ಮರಗಳಿಗೆ ಉಪಯೋಗ ಮಾಡುವುದನ್ನು ಸದ್ಯಕ್ಕೆ ನಿಷೇಧಿಸಲಾಗಿದೆ ಎಂದು ನಗರಾಡಳಿತ ಸಾರ್ವಜನಿಕ ಪ್ರಕಟನೆ ಮೂಲಕ ಜನರ ಗಮನಕ್ಕೆ ತರಲು ಮುಂದಾಗಿದೆ.

15 ದಿನದಲ್ಲೇ ಬರಿದು
ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಇಲ್ಲದ ಕಾರಣ ವರ್ಷಂಪ್ರತಿ ಬೇಸಗೆ ಕಾಲದಲ್ಲಿ ಕಲ್ಲುಮುಟ್ಲು ಬಳಿ ಪಯಸ್ವಿನಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತಾತ್ಕಾಲಿಕ ಮರಳು ಕಟ್ಟವೇ ನೀರು ಪೂರೈಕೆಗಿರುವ ಆಧಾರ. ಈ ಬಾರಿ ಮೇ ಮೊದಲ ವಾರದಲ್ಲಿ ಕೊಡಗು ಪರಿಸರದಲ್ಲಿ ಮಳೆ ಉಂಟಾದ ಕಾರಣ ಪಯಸ್ವಿನಿಯಲ್ಲಿ ನೀರಿನ ಹರಿವು ಉಂಟಾಗಿ ಮರಳುಕಟ್ಟ ತುಂಬಿತ್ತು. ಆದರೆ ಅನಂತರ ಮಳೆ ಬಾರದ ಕಾರಣ ಹರಿವಿನ ಪ್ರಮಾಣ ಕ್ಷೀಣಿಸಿದೆ. ಸದ್ಯದ ಸ್ಥಿತಿಯಲ್ಲಿ ಮರಳು ಕಟ್ಟದಲ್ಲಿ 15 ದಿನಗಳಿಗೆ ಪೂರೈಕೆಗೆ ಸಾಕಾಗುವಷ್ಟು ನೀರು ಲಭ್ಯವಿದ್ದು, ಮಳೆ ಬಾರದಿದ್ದರೆ ನೀರಿಗಾಗಿ ತತ್ವಾರ ಪಡುವ ಆತಂಕವಿದೆ. ಮರಳು ಕಟ್ಟದಿಂದ ಕೆಳಭಾಗಕ್ಕೆ ಹೆಚ್ಚುವರಿಯಾಗಿ ಹರಿಯುತ್ತಿದ್ದ ನೀರನ್ನು ಚೀಲವಿಟ್ಟು ತಡೆಯುವ ಕಾಮಗಾರಿ ಪ್ರಾರಂಭಿಸಲಾಗಿದೆ.

ನೀರೆತ್ತಲು ಅಸಾಧ್ಯ!
ಕಲ್ಲುಮಟ್ಲು ಪಂಪ್‌ಹೌಸ್‌ ಬಳಿಯಲ್ಲಿ 50 ಎಚ್ಪಿ1 ಮತ್ತು 45 ಎಚ್ಪಿ 2 ಪಂಪ್‌ ಇರಿಸಲಾದ ನದಿ ಆಳದಲ್ಲಿ ಸಾಕಷ್ಟು ನೀರು ಲಭ್ಯವಿರದಿದ್ದರೆ ನೀರೆತ್ತಲು ಸಾಧ್ಯವಾಗುವುದಿಲ್ಲ. ಕೆಲವು ದಿನಗಳಲ್ಲಿ ಆ ಪರಿಸ್ಥಿತಿ ಬಂದೊದಗುವ ಚಿತ್ರಣ ಕಂಡು ಬಂದಿದೆ. ಇದರಿಂದ ನಗರದ ಮನೆ ಹಾಗೂ ಗೃಹೇತರ ಕಟ್ಟಡಗಳಿಗೆ ನಳ್ಳಿ ಸಂಪರ್ಕದ ಮುಖಾಂತರ ನೀರು ಹರಿಸುವುದು ಅಸಾಧ್ಯವೆನಿಸಲಿದೆ. ನಗರದ ವಿವಿಧ ಭಾಗದಲ್ಲಿರುವ 42 ಕೊಳವೆಬಾವಿ ಪೈಕಿ ಹಲವು ನೀರಿನ ಸಂಕಟ ಎದುರಿಸುತ್ತಿವೆ.

15 ದಿನಕ್ಕಷ್ಟೆ ನೀರಿದೆ
ಪಯಸ್ವಿನಿ ಹರಿವು ಮತ್ತು ಕೊಳವೆಬಾವಿ ನೀರಿನ ಪ್ರಮಾಣ ಇಳಿಕೆ ಆಗಿದೆ. ಈಗಿರುವ ಸಂಗ್ರಹ 15 ದಿನಕ್ಕೆ ಸಾಕಾಗಬಹುದು. ಹೀಗಾಗಿ ಮಿತ ಬಳಕೆ ನಿಟ್ಟಿನಲ್ಲಿ ಕಟ್ಟಡ ಕಾಮಗಾರಿ, ಗಿಡ, ಇತರ ಕೃಷಿ ಕಾರ್ಯಗಳಿಗೆ ಕುಡಿಯುವ ನೀರು ಬಳಸದಂತೆ ಮನವಿ ಮಾಡಲಾಗಿದೆ. ಜತೆಗೆ ನೀರಿನ ಪೂರೈಕೆಯನ್ನು ಎರಡು ದಿನಕ್ಕೊಮ್ಮೆ ನಿಗದಿಪಡಿಸಲಾಗಿದೆ.
– ಶಿವಕುಮಾರ್‌, ಮುಖ್ಯ ಎಂಜಿನಿಯರ್‌, ನ.ಪಂ.ಸುಳ್ಯ

ಟಾಪ್ ನ್ಯೂಸ್

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

robbers

Subramanya: ನಾಪತ್ತೆಯಾದ ವ್ಯಕ್ತಿ ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.