JMFC Court;ಡ್ರಗ್ಸ್ ಪ್ರಕರಣ: ಅಪರಾಧಿಗೆ ಕಠಿನ ಸಜೆ
Team Udayavani, Jul 11, 2023, 5:45 AM IST
ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಪ್ರಕರಣದ ಅಪರಾಧಿ ಕುದ್ರೋಳಿಯ ಸಿಪಿಸಿ ಕಂಪೌಂಡ್ನ ನಿವಾಸಿ ಇಬ್ರಾಹಿಂ ಕೆ. (39) ಎಂಬಾತನಿಗೆ ಮಂಗಳೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ತಾರಾ ಕೆ.ಸಿ ಅವರು ಆರು ತಿಂಗಳ ಕಠಿನ ಸಜೆ ಮತ್ತು 10,000 ರೂ. ದಂಡ ವಿಧಿಸಿದ್ದಾರೆ.
ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ ಒಂದು ತಿಂಗಳು ಹೆಚ್ಚುವರಿ ಸಾದಾ ಸಜೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
2018ರ ಫೆ.14ರಂದು ಇಬ್ರಾಹಿಂ ಸ್ಕೂಟರ್ನಲ್ಲಿ ಗಾಂಜಾವನ್ನಿಟ್ಟು ನಗರದ ಕುಂಟಿಕಾನ ಜಂಕ್ಷನ್ ಫ್ಲೈಓವರ್ ಕೆಳಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದರು.ಆತನ ಪ್ಯಾಂಟಿನ ಕಿಸೆಯಲ್ಲಿ 50 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಆತ ಕಾಸರಗೋಡಿನ ಉಪ್ಪಳದಿಂದ ಗಾಂಜಾ ಖರೀದಿಸಿ ಮಾರಾಟ ಮಾಡಲು ತಂದಿರುವುದು ದೃಢಪಟ್ಟಿತ್ತು.
ಅಂದಿನ ಉರ್ವ ಪೊಲೀಸ್ ಠಾಣಾ ನಿರೀಕ್ಷಕರಾಗಿದ್ದ ರವೀಶ್ ನಾಯ್ಕ ಅವರು ಪ್ರಕರಣ ದಾಖಲಿಸಿ ಪಿಎಸ್ಐ ವನಜಾಕ್ಷಿ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಹಾಯಕ ಸರಕಾರಿ ಅಭಿಯೋಜಕಿ ನೇತ್ರಾವತಿ ಅವರು ಸರಕಾರದ ಪರವಾಗಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.