ಮಾರುಕಟ್ಟೆಯಲ್ಲಿ ಒಣಮೆಣಸು ಕೊರತೆ : ಬೆಲೆ ಏರಿಕೆ ಸಂಭವ
Team Udayavani, Mar 9, 2023, 7:32 AM IST
ಮಂಗಳೂರು: ನಗರಕ್ಕೆ ಹೊರ ಜಿಲ್ಲೆಗಳಿಂದ ಬರುವ ಒಣ ಮೆಣಸಿನ ಪ್ರಮಾಣ ಕಡಿಮೆಯಾಗಿದ್ದು, ಇದರಿಂದ ನಗರದ ಬಂದರಿನ ಸಗಟು ಮಾರುಕಟ್ಟೆಯಲ್ಲಿ ಒಣಮೆಣಸಿಗೆ ಕೊರತೆಯಾಗಿ, ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ.
ಮಂಗಳೂರಿಗೆ ಪ್ರತಿನಿತ್ಯ 2,000- 2,500 ಚೀಲ ಮೆಣಸು ಬಳ್ಳಾರಿಯ ಬ್ಯಾಡಗಿಯಿಂದ ಬರುತ್ತಿತ್ತು. ಆದರೆ ಗುರುವಾರ 1,200 ಗೋಣಿ ಮಾತ್ರ ಬಂದಿದೆ. ಬುಧವಾರವೂ ಪ್ರಮಾಣ ಕಡಿಮೆ ಇತ್ತು. ಇದರಿಂದ ಮೆಣಸು ಲಭ್ಯತೆ ಕಡಿಮೆಯಾಗಿ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನುವ ಮಾತುಗಳು ವರ್ತಕರ ಕಟ್ಟೆಯಲ್ಲಿ ಕೇಳಿ ಬರುತ್ತಿದೆ.
ಸೋಮವಾರ ನಡೆದ ಏಲಂನಲ್ಲಿ ಮೆಣಸಿನ ಬೆಲೆ ಕಿಲೋಗೆ 320 ರೂ. ನಿಂದ 450 ರೂ. ವರೆಗೆ (ರಖಂ) ಏರಿಕೆಯಾಗಿದೆ. ಈ ಬಾರಿ ಮೆಣಸಿನ ಬೆಳೆ ಉತ್ತಮವಾಗಿ ಬಂದಿದೆ, ಆದರೆ ರೈತರಿಂದ ಮಾರುಕಟ್ಟೆಗೆ ಬರುವಾಗ ಸ್ವಲ್ಪ ತಡವಾಗಿದೆ. ಎರಡು ವಾರದಲ್ಲಿ ಮಾರುಕಟ್ಟೆಗೆ ಹೊಸ ಬೆಳೆ ಬರುವ ನಿರೀಕ್ಷೆಯಿರುವುದರಿಂದ ಬೆಲೆಯಲ್ಲಿ ಇಳಿಕೆ ಯಾಗುವ ಸಾಧ್ಯತೆಯಿದೆ.
ಮಾರುಕಟ್ಟೆಗೆ ಬರುವ ಮೆಣಸಿನ ಪ್ರಮಾಣ ಕಡಿಮೆಯಾದರೆ ಕೂಲಿ ಗಳಿಗೂ ಕೆಲಸ ಇಲ್ಲದಂತಾಗುತ್ತದೆ ಎನ್ನುತ್ತಾರೆ ಬಂದರು ಶ್ರಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಕೆ. ಇಮ್ತಿಯಾಝ್.
ಎಸಿಯಲ್ಲಿ ಸಂಗ್ರಹ
ಕೆಲವು ವರ್ತಕರು ಹೊಸ ಮೆಣಸು ಬಂದರೂ ಅದನ್ನು ಹವಾನಿಯಂತ್ರಿತ ಗೋಡೌನ್ನಲ್ಲಿ ಸಂಗ್ರಹಿಸಿಟ್ಟು ಮಾರುಕಟ್ಟೆಯಲ್ಲಿ ಕೊರತೆ ಸೃಷ್ಟಿಸಿ, ಬೆಲೆ ಏರಿಕೆ ಮಾಡುತ್ತಾರೆ ಎನ್ನುವ ಮಾತುಗಳೂ ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.