![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 26, 2022, 11:13 PM IST
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಅವಧಿಯಲ್ಲಿ ಪ್ರತೀ ಕ್ಷೇತ್ರದಲ್ಲೂ ದೇಶಕ್ಕೆ ಹಿನ್ನಡೆಯಾಗಿದೆ. ಬೆಲೆಯೇರಿಕೆಯಿಂದ ಜನತೆ ಕಂಗೆಟ್ಟಿದ್ದಾರೆ. ಜನರಿಗೆ ಪರ್ಯಾಯವಾಗಿರುವ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ರಾಜ್ಯ, ರಾಷ್ಟ್ರಗಳಲ್ಲಿ ಅತಿ ಹೆಚ್ಚಿನ ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದರು.
ನಗರದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸ್ವಾತಂತ್ರÂ ಬಂದ ಬಳಿಕ ಸುಮಾರು 54 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ಸಾಧಿಸಿ ರಫ್ತು ಮಾಡುವ ಸ್ಥಿತಿಗೆ ತಲುಪಿತ್ತು. ಹಸುರು ಕ್ರಾಂತಿ, ಕ್ಷೀರ ಕ್ರಾಂತಿ ನಡೆದಿರುವುದು ಉತ್ಪಾದನ, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನದಲ್ಲಿ ಮಹತ್ತರ ಪ್ರಗತಿ ಆಗಿರುವುದು ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ. ಮೋದಿಯವರ ಆಡಳಿತದಲ್ಲಿ ಅಲ್ಲ ಎಂದರು.
ಮೋದಿಯವರು ಸುಳ್ಳು ಭರವಸೆಗಳನ್ನು ನೀಡಿ 2014ರಲ್ಲಿ ಅಧಿಕಾರಕ್ಕೆ ಬಂದರು. ಎಂಟು ವರ್ಷಗಳ ಅವರ ಆಡಳಿತದಲ್ಲಿ ಯಾವುದೇ ಒಂದು ಭರವಸೆ ಈಡೇರಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಉದ್ಯೋಗ ಸೃಷ್ಟಿಸುವ ಬದಲು ಇರುವ ಉದ್ಯೋಗವನ್ನು ಕಸಿದುಕೊಳ್ಳುವ ಕಾರ್ಯ ಆಗಿದೆ ಎಂದು ಟೀಕಿಸಿದರು.
ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ದೇಶದಲ್ಲಿ ಸರ್ವಧರ್ಮ ಸಮಭಾವದೊಂದಿಗೆ, ಜಾತ್ಯತೀತ ಸಿದ್ಧಾಂತಡಿ ಸಾಗುತ್ತಿರುವ ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶದ, ರಾಜ್ಯದ ಅಭಿವೃದ್ಧಿ ಸಾಧ್ಯ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಶ್ಚಿತವಾಗಿಯೂ ಅಧಿಕಾರಕ್ಕೆ ಬರಲಿದೆ ಎಂದರು.
ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ. ಖಾದರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿದರು. ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಸ್ತಾವನೆಗೈದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸ್ವಾಗತಿಸಿದರು.
ಮಾಜಿ ಸಚಿವರಾದ ಅಭಯಚಂದ್ರ ಜೈನ್, ಗಂಗಾಧರ ಗೌಡ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಮೊದಿನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಇನಾಯತ್ ಅಲಿ, ಕೃಪಾ ಆಳ್ವ, ಎಐಸಿಸಿ ಸದಸ್ಯೆ ಕವಿತಾ ಸನಿಲ್, ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ಸುರೇಶ್ ಬಲ್ಲಾಳ್, ಡಾ| ರಘು ಸುಳ್ಯ, ಶಾಲೆಟ್ ಪಿಂಟೊ, ರಾಜಶೇಖರ್ ಕೋಟ್ಯಾನ್, ವಿವಿಧ ಘಟಕಗಳ ಅಧ್ಯಕ್ಷರಾದ ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ನಾರಾಯಣ ನಾಯ್ಕ, ಲಾರೆನ್ಸ್ ಡಿ’ಸೋಜಾ, ಸುಭಾಶ್ ಕೊಲಾ°ಡು, ಡಾ| ಶೇಖರ್ ಪೂಜಾರಿ, ಸುದರ್ಶನ್ ಜೈನ್, ಬಿ.ಎಂ.ಅಬ್ಟಾಸ್ ಅಲಿ, ಮೋಹನ್ ಗೌಡ, ಸಚಿನ್ ರಾಜ್, ಲುಕಾ¾ನ್ ಬಂಟ್ವಾಳ, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿ’ಸೋಜಾ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಉಪಸ್ಥಿತರಿದ್ದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ನಿರೂಪಿಸಿದರು. ಐವನ್ ಡಿ’ಸೋಜಾ ವಂದಿಸಿದರು.
You seem to have an Ad Blocker on.
To continue reading, please turn it off or whitelist Udayavani.