ಪೂರ್ವ ಮುಂಗಾರು ನಿರ್ಗಮನ; ಶೇ. 78 ಮಳೆ ಕೊರತೆ


Team Udayavani, Jun 2, 2019, 10:34 AM IST

rainn

ಮಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ನಿರ್ಗಮನಗೊಂಡಿದ್ದು, ಮಳೆಗಾಲ ಪ್ರಾರಂಭಕ್ಕೆ ತಾಲೀಮು ಆರಂಭ ವಾಗಿದೆ. ಈ ಬಾರಿ ಶೇಕಡಾ 78ರಷ್ಟು ಮಳೆ ಕೊರತೆಯ ಸ್ಥಿತಿ ಕರಾವಳಿಯದು. ಈ ಸಲ ಮೂರ್‍ನಾಲ್ಕು ದಿನ ತಡವಾಗಿ ಅಂದರೆ, ಜೂನ್‌ ಮೊದಲ ವಾರಾಂತ್ಯಕ್ಕೆ ರಾಜ್ಯ ಕರಾವಳಿಗೆ ಮುಂಗಾರು ಪ್ರವೇಶಿಸುವ ಮುನ್ಸೂಚನೆಯಿದೆ.

ಕಳೆದ ಬಾರಿ ಮೇ 29ಕ್ಕೇನೇ ಕರ್ನಾಟಕ ಕರಾವಳಿಗೆ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ಬಾರಿ ನಿಧಾನವಾಗಿದೆ. ಕರಾವಳಿಯಲ್ಲಿ ಈ ಬಾರಿ ಅತೀ ಕಡಿಮೆ ಮುಂಗಾರುಪೂರ್ವ ಮಳೆಯಾಗಿದೆ. ಕಳೆದ ಬಾರಿ ಶೇ. 87ರಷ್ಟು ಮಳೆ ಹೆಚ್ಚಳವಾಗಿದ್ದರೆ, ಈ ಬಾರಿ ಶೇ. 78ರಷ್ಟು ಮಳೆ ಕೊರತೆ ಇದೆ. ಕಳೆದ ಬಾರಿ ಪೂರ್ವ ಮುಂಗಾರು ವೇಳೆ ಮೊದಲ ಎರಡು ತಿಂಗಳು ಸಾಧಾರಣ ಮಳೆಯಾಗಿದ್ದರೂ ಮೇ ಕೊನೆಯಲ್ಲಿ ಭಾರೀ ಮಳೆಯಾಗಿತ್ತು.

ಈ ಬಾರಿಯೂ ಉತ್ತಮ ಮಳೆಯಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಹುಸಿ ಯಾಗಿದೆ. ಕರಾವಳಿ ಪ್ರದೇಶದಲ್ಲಿ ಮಳೆಯಿಲ್ಲ, ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಮೂರ್ನಾಲ್ಕು ದಿನಗಳಿಂದ ಉಷ್ಣಾಂಶ ಏರಿಕೆಯಾಗುತ್ತಿದ್ದು, ಮಧ್ಯಾಹ್ನ ವೇಳೆಗೆ 37 ಡಿ.ಸೆ. ವರೆಗೆ ತಲುಪುತ್ತಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಈ ಬಾರಿ ಮುಂಗಾರು ಜೂ. 5 ಅಥವಾ 6ರಂದು ಕೇರಳ ಕರಾವಳಿ ತೀರ ತಲುಪ ಬಹುದು. ಇದಾದ ಎರಡು ದಿನಗಳ ಬಳಿಕ ಅಂದರೆ ಜೂ. 8ರ ಹೊತ್ತಿಗೆ ಮುಂಗಾರು ಕರ್ನಾಟಕದ ಕರಾವಳಿಯನ್ನು ತಲುಪಬಹುದು. ಮುಂಗಾರು ಆಗಮನದ ವರೆಗೆ ಕರಾವಳಿ ಪ್ರದೇಶದಲ್ಲಿ ಬೆಳಗ್ಗಿನ ವೇಳೆ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲವು ಕಡೆ ಮಳೆಯೂ ಸುರಿಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲೇ ಹೆಚ್ಚು ಮಳೆ ಕೊರತೆ
ಈ ಬಾರಿಯ ಪೂರ್ವ ಮುಂಗಾರು ವೇಳೆ ರಾಜ್ಯದ ಕರಾವಳಿಯಲ್ಲಿ ಅತೀ ಕಡಿಮೆ ಮಳೆಯಾಗಿದೆ. ಜ. 1ರಿಂದ ಮೇ 31ರ ವರೆಗಿನ ಅಂಕಿ-ಅಂಶದ ಪ್ರಕಾರ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಶೇ. 27ರಷ್ಟು, ಉತ್ತರ ಒಳನಾಡಿನಲ್ಲಿ ಶೇ. 64ರಷ್ಟು, ಮಲೆನಾಡಿನಲ್ಲಿ ಶೇ.57ರಷ್ಟು ಮತ್ತು ಕರಾವಳಿಯಲ್ಲಿ ಶೇ. 78ರಷ್ಟು ಮಳೆ ಕೊರತೆ ಇದೆ. ಒಟ್ಟಾರೆ ರಾಜ್ಯದಲ್ಲಿ ಶೇ. 52ರಷ್ಟು ಮಳೆ ಕೊರತೆ ಇದೆ. ವಾಡಿಕೆಯಂತೆ ಈ ಅವಧಿಯಲ್ಲಿ ಒಟ್ಟು 178 ಮಿ.ಮೀ. ಮಳೆಯಾಗಬೇಕಿದ್ದರೂ ಬಂದಿರುವುದು 38 ಮಿ.ಮೀ. ಮಾತ್ರ.

ಕ್ಷೀಣಿಸಿದ ಪೂರ್ವ ಮುಂಗಾರು
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪೂರ್ವ ಮುಂಗಾರು ಕ್ಷೀಣಿಸಿದೆ. ಕರಾವಳಿ ಸೇರಿದಂತೆ ರಾಜ್ಯದಲ್ಲಿ ವಾಡಿಕೆಯಂತೆ ಮಳೆ ಬಂದಿಲ್ಲ. ಸದ್ಯ ಪೂರ್ವ ಮುಂಗಾರು ಋತು ಪೂರ್ಣಗೊಂಡಿದೆ. ಮುನ್ಸೂಚನೆಯ ಪ್ರಕಾರ ಜೂ. 5-6ರಂದು ಕೇರಳ ಕರಾವಳಿ ತೀರಕ್ಕೆ ಮುಂಗಾರು ಅಪ್ಪಳಿಸಲಿದೆ.
ಸುನಿಲ್‌ ಗವಾಸ್ಕರ್‌, ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ

ಟಾಪ್ ನ್ಯೂಸ್

Elon-Musk

America: ಎಚ್‌-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

robbers

Suratkal: ಮಹಿಳೆಯರಿಗೆ ನಿಂದನೆ: ಬಾಲಕರ ಸೆರೆ

1-MRPL

MRPL: ನಾಲ್ಕು ಪ್ರತಿಷ್ಠಿತ ಪಿಆರ್‌ಎಸ್‌ಐ ಶ್ರೇಷ್ಠ ಪ್ರಶಸ್ತಿ

1-k-u

Karavali Utsav: ಶ್ವಾನ ಪ್ರದರ್ಶನ, ಚಲನಚಿತ್ರೋತ್ಸವ, ಯುವಮನ

Consumer-Court

Mangaluru: ಖಾಸಗಿ ಬಸ್‌ನಲ್ಲಿ ತಿಗಣೆ ಕಡಿತ: ಮಹಿಳೆಗೆ 1.29 ಲಕ್ಷ ರೂ. ಪರಿಹಾರ ನೀಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Elon-Musk

America: ಎಚ್‌-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.