ವಿವಿಧೆಡೆ ಶ್ರದ್ಧಾ ಭಕ್ತಿಯ ಈಸ್ಟರ್ ಆಚರಣೆ
Team Udayavani, Apr 2, 2018, 10:15 AM IST
ಮಹಾನಗರ: ರವಿವಾರ ಕ್ರೈಸ್ತರು ಯೇಸು ಕ್ರಿಸ್ತರ ಪುನರುತ್ಥಾನದ ಹಬ್ಬ ಈಸ್ಟರ್ ಅನ್ನು ಚರ್ಚ್‌ಗಳಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ನಗರದ ವಿವಿಧ ಚರ್ಚ್‌ಗಳಲ್ಲಿ ನಡೆದ ಆಚರಣೆಯಲ್ಲಿ ಸಾವಿರಾರು ಕ್ರೈಸ್ತರು ಪಾಲ್ಗೊಂಡಿದ್ದರು.
ಚರ್ಚ್‌ಗಳಲ್ಲಿ ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಈಸ್ಟರ್ ಹಬ್ಬದ ಬಲಿಪೂಜೆಗಳು ನಡೆದವು. ಆಯಾ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ಮುಖಂಡತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಹೊಸ ಅಗ್ನಿಯ ಆಶೀರ್ವಚನದೊಂದಿಗೆ ಕಾರ್ಯಕ್ರಮ ಆರಂಭವಾಯಿತು.
ಹೊಸ ಅಗ್ನಿಯಿಂದ ಈಸ್ಟರ್ ಮೋಂಬತ್ತಿಯನ್ನು ಧರ್ಮಾಧ್ಯಕ್ಷರು/ ಗುರುಗಳು ಬೆಳಗಿಸಿದ ಬಳಿಕ ಭಾಗವಹಿಸಿದ್ದ ಸಮಸ್ತ ಕ್ರೈಸ್ತ ಬಾಂಧವರು ಆ ಅಗ್ನಿಯ ಮೂಲಕ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆ ಸಲ್ಲಿಸಿದರು. ರವಿವಾರ ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಈಸ್ಟರ್ ಹಬ್ಬದ ಊಟವನ್ನು ಸವಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.