Tax ಅನ್ಯಾಯ, ಬರಗಾಲ ನಡುವೆಯೂ ಆರ್ಥಿಕ ಪ್ರಗತಿ: ಸಚಿವ ದಿನೇಶ್ ಗುಂಡೂರಾವ್
Team Udayavani, Mar 3, 2024, 12:29 AM IST
ಮಂಗಳೂರು: ತೆರಿಗೆಯ ಪಾಲು ನೀಡುವಲ್ಲಿ ಕೇಂದ್ರ ಸರಕಾರ ಮಾಡು ತ್ತಿರುವ ಅನ್ಯಾಯ, ಬರಗಾಲ, ಈ ಹಿಂದಿನ ಬಿಜೆಪಿ ಸರಕಾರದ ಆರ್ಥಿಕ ಅಶಿಸ್ತಿನ ಪರಿಣಾಮದ ನಡುವೆಯೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಆರ್ಥಿಕ ಬೆಳವಣಿಗೆ ಉತ್ತಮಗೊಂಡಿದೆ. ಬಿಜೆಪಿ ಯವರ ಆರೋಪಗಳಿಗೆ ರಾಜ್ಯ ಬಜೆಟ್ ಸ್ಪಷ್ಟ ಉತ್ತರ ನೀಡಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಈ ಬಾರಿಯ ಬಜೆಟ್‌ನಲ್ಲಿ ಬಡತನ ನಿರ್ಮೂಲನೆ, ಮೂಲಸೌಕರ್ಯ ಅಭಿವೃದ್ಧಿ ಮೊದಲಾದವುಗಳಿಗೆ ಗರಿಷ್ಠ ಹಣ ಮೀಸಲಿಡಲಾಗಿದೆ. ವಿತ್ತೀಯ ಕೊರತೆ, ಸಾಲದ ಪ್ರಮಾಣ ಯಾವುದೇ ಮಾನದಂಡ ಮೀರಿಲ್ಲ. ಕೇಂದ್ರ ಸರಕಾರ ಜಿಎಸ್‌ಟಿ ಪಾಲು ನೀಡುತ್ತಿಲ್ಲ. ರಾಜ್ಯಗಳಿಗೆ ತೆರಿಗೆ ಸಂಗ್ರಹದ ಸ್ವಾತಂತ್ರ್ಯ ನೀಡುತ್ತಿಲ್ಲ. ಅದರಲ್ಲಿ ಯಾವುದೇ ಪಾಲು ಕೂಡ ಕೊಡುತ್ತಿಲ್ಲ. ರಾಜ್ಯದಲ್ಲಿ ಬರಗಾಲವಿದೆ. ಆದಾಗ್ಯೂ ಆರ್ಥಿಕ ಬೆಳವಣಿಗೆಯ ದರ ಉತ್ತಮವಾಗಿದೆ ಎಂದರು.
ಸಾಮಾಜಿಕ ಭದ್ರತಾ ಯೋಜನೆ ಸಹಿತ ಪ್ರಮುಖ ಯೋಜನೆಗಳಿಗೆ ಕೇಂದ್ರ ಸರಕಾರಕ್ಕಿಂತ ಸುಮಾರು 3ರಿಂದ 4 ಪಟ್ಟು ಅಧಿಕ ಮೊತ್ತವನ್ನು ರಾಜ್ಯ ಸರಕಾರ ನೀಡುತ್ತಿದೆ. ಆದರೆ ಆ ಯೋಜನೆಗಳಿಗೆ ಪ್ರಧಾನ ಮಂತ್ರಿ ಯವರ ಹೆಸರನ್ನೇ ಇಡಲಾಗಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗು ತ್ತಿದೆ. 7ನೇ ವೇತನ ಆಯೋಗದ ಶಿಫಾರಸು ಜಾರಿಗೆ 13,000 ಕೋ.ರೂ. ಮೀಸಲಿಡಲಾಗಿದೆ. ಅಲ್ಪಸಂಖ್ಯಾಕರು ಮಾತ್ರವಲ್ಲದೆ ಮೀನುಗಾರರು ಸಹಿತ ಎಲ್ಲ ವರ್ಗದವರಿಗೂ ಅನುದಾನ ಒದಗಿಸಲಾಗಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೂ ಅನುದಾನ ಒದಗಿಸಲಾಗಿದೆ. ನೇರ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ರಾಜ್ಯ 3ನೇ ಸ್ಥಾನದಲ್ಲಿ, ಜಿಎಸ್‌ಟಿ ಸಂಗ್ರಹದಲ್ಲಿ 2ನೇ ಸ್ಥಾನದಲ್ಲಿದೆ. ಶೇ.18ರಷ್ಟು ಜಿಎಸ್‌ಟಿ ಸಂಗ್ರಹ ಹೆಚ್ಚಾಗಿದೆ ಎಂದರು.
ಬಿಜೆಪಿ ಸರಕಾರದ ಆರ್ಥಿಕ ಅಶಿಸ್ತು
ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಮುಖ್ಯಮಂತ್ರಿ ವಿವೇಚನ ಕೋಟಾ ದಡಿ ಬೇಕಾಬಿಟ್ಟಿ ಟೆಂಡರ್ ಮಾಡಿ ರುವುದರಿಂದ ಆರ್ಥಿಕ ಅಶಿಸ್ತು ಉಂಟಾಗಿದೆ. ಆ ಯೋಜನೆಗಳನ್ನು ಪೂರ್ಣಗೊಳಿಸಲು 5-6 ವರ್ಷಗಳು ಬೇಕು ಎಂದರು.
ದೇಗುಲದ ಹಣ ಅನ್ಯ ಧರ್ಮಕ್ಕಿಲ್ಲ
ಧಾರ್ಮಿಕ ದತ್ತಿ ಇಲಾಖೆಯಿಂದ ಬೇರೆ ಧರ್ಮಗಳಿಗೆ ಹಣ ನೀಡಲಾ ಗುತ್ತಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರ ರೂಪಿಸಿದ ನಿಯಮ ದಡಿ ಅದಕ್ಕೆ ಅವಕಾಶವಿತ್ತು. ಆದರೆ ಇತ್ತೀಚೆಗೆ ಕಾಂಗ್ರೆಸ್ ಸರಕಾರ ಅದನ್ನು ತಿದ್ದುಪಡಿ ಮಾಡಿದ್ದು ಹಿಂದೂ ಧಾರ್ಮಿಕ ಕೇಂದ್ರಗಳ ಹೊರತಾಗಿ ಬೇರೆ ಧರ್ಮಗಳಿಗೆ ಧಾರ್ಮಿಕ ದತ್ತಿ ಇಲಾಖೆಯ ಹಣ ನೀಡಲು ಅವಕಾಶವಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ಹುದ್ದೆ ಭರ್ತಿಗೆ ಕ್ರಮ
ಆರೋಗ್ಯ ಇಲಾಖೆಯಲ್ಲಿರುವ ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನೀಷಿ ಯನ್ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳ ಲಾಗುವುದು. ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳ ಲಾಗುವುದು. ಪಿಜಿ ವೈದ್ಯರು ಮುಂದಿನ ತಿಂಗಳು ಸೇವೆಗೆ ಲಭ್ಯರಾಗುತ್ತಾರೆ. ಇಲಾಖೆಯಲ್ಲಿ ಸುಮಾರು 9 ಸಾವಿರ ಹುದ್ದೆಗಳು ಖಾಲಿ ಇದ್ದು ಪ್ರತೀ ವರ್ಷ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾದ ಕಾಯಿಲೆ/ಆರೋಗ್ಯ ಸಮಸ್ಯೆಗಳ ಪಟ್ಟಿಗೆ ಇನ್ನಷ್ಟು ಸೇರ್ಪಡೆಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ಟಿ.ಕೆ. ಸುಧೀರ್, ಎ.ಸಿ. ವಿನಯರಾಜ್, ಭರತ್ ಮುಂಡೋಡಿ, ನಾರಾಯಣ ನಾಯಕ್, ಜೋಕಿಂ ಡಿ’ಸೋಜಾ, ಸುರೇಂದ್ರ ಕಂಬಳಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.