ಸಂಸ್ಕಾರಯುತ ಶಿಕ್ಷಣದಿಂದ ಮಕ್ಕಳ ಗುಣ ವಿಕಸನ: ಪ್ರೊ| ರವೀಂದ್ರ
Team Udayavani, Jul 11, 2017, 2:50 AM IST
ಕೊಡಿಯಾಲ್‌ಬೈಲ್: ವಿದ್ಯಾಭಾರತಿ ಕರ್ನಾಟಕ, ದ.ಕ. ಜಿಲ್ಲೆಯ ಘಟಕಕ್ಕೆ ಸಂಲಗ್ನಗೊಂಡ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರರಿಗಾಗಿ ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮ ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾಲಯದಲ್ಲಿ ನಡೆಯಿತು. ಕೆನರಾ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ| ರವೀಂದ್ರ ಉದ್ಘಾಟಿಸಿದರು. ಪ್ರೀತಿ – ವಾತ್ಸಲ್ಯಭರಿತ ಸಂಸ್ಕಾರಯುತ ಶಿಕ್ಷಣ ಮಕ್ಕಳಲ್ಲಿ ಗುಣ ವಿಕಾಸಗೊಳ್ಳಲು ಸಹಕಾರಿ. ಸಮಸ್ಯೆಗಳನ್ನು ಎದುರಿಸಬಲ್ಲ ಮಾನಸಿಕ ಸಿದ್ಧತೆಗೆ ವಿದ್ಯಾರ್ಥಿಗಳನ್ನು ತಯಾರುಗೊಳಿಸಬೇಕು. ವಿದ್ಯಾಭಾರತಿಯ ಧ್ಯೇಯೋದ್ದೇಶ, ಕಾರ್ಯ ಚಟುವಟಿಕೆಗಳು ಇದಕ್ಕೆ ಪೂರಕ ಎಂದು ಅವರು ಹೇಳಿದರು.
ದ.ಕ. ವಿದ್ಯಾಭಾರತಿಯ ಅಧ್ಯಕ್ಷ ಪ್ರೊ | ಎಂ. ಬಿ. ಪುರಾಣಿಕ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಭಾರತಿಯ ಪ್ರಾಂತ ಉಪಾಧ್ಯಕ್ಷೆ ಪಾರ್ವತಿ, ಶಾರದಾ ವಿದ್ಯಾ ಸಂಸ್ಥೆಯ ಟ್ರಸ್ಟಿ ಪ್ರದೀಪ ಕುಮಾರ ಕಲ್ಕೂರ, ಎಸ್.ಕೆ.ಡಿ.ಬಿ. ಅಸೋಸಿಯೇಶನ್‌ನ ಕಾರ್ಯದರ್ಶಿ ಸುಧಾಕರ ರಾವ್ ಪೇಜಾವರ, ವಿದ್ಯಾಭಾರತಿ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ ಉಪಸ್ಥಿತರಿದ್ದರು. ವಿದ್ಯಾಭಾರತಿ ಜಿಲ್ಲಾ ಕಾರ್ಯದರ್ಶಿ ಲೋಕಯ್ಯ ಡಿ. ಪ್ರಸ್ತಾವನೆಗೈದರು. ಶಾರದಾ ವಿದ್ಯಾಲಯದ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಪ್ರದೀಪ ಕುಮಾರ ಕಲ್ಕೂರ ವಂದಿಸಿದರು. ಶಾರದಾ ವಿದ್ಯಾಲಯದ ಉಪಪ್ರಾಂಶುಪಾಲ ದಯಾನಂದ ಕಟೀಲ್ ನಿರೂಪಿಸಿದರು.
ವಿದ್ಯಾಭಾರತಿಯ ಮೂಲಕ ಎಸ್‌ಜಿಎಫ್‌ಐಯಲ್ಲಿ ಪ್ರತಿನಿಧಿಸಿದ ಜಿಲ್ಲೆಯ ವಿವಿಧ ಶಾಲೆಗಳ ಕ್ರೀಡಾಳುಗಳನ್ನು ಗೌರವಿಸಲಾಯಿತು. ಕಟೀಲು ಶ್ರೀ ದುರ್ಗಾಪರಮೇಶ್ವರೀ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಡಾ| ಸೋಂದಾ ಭಾಸ್ಕರ ಭಟ್ ಅವರು ಸೋದರಿ ನಿವೇದಿತಾರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಅನಂತರ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕ-ಶಿಕ್ಷಕೇತರರು ಹಾಗೂ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರಿಗಾಗಿ ಪ್ರತ್ಯೇಕ ಗುಂಪುಗಳಲ್ಲಿ ಚರ್ಚೆ ನಡೆಯಿತು. ಸಮಾರೋಪದಲ್ಲಿ ಶಾರದಾ ವಿದ್ಯಾಲಯದ ಅಧ್ಯಾಪಕ ಸತ್ಯನಾರಾಯಣ ಭಟ್ ವೈಯಕ್ತಿಕ ಗೀತೆ ಹಾಡಿದರು. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು.ದಯಾನಂದ ಕಟೀಲ್ ನಿರೂಪಿಸಿದರು. ರಜನಿ ಶೆಣೈ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.