“ನಲಿ-ಕಲಿ’ಯಲ್ಲೂ ಪರಿಣಾಮಕಾರಿ ಇಂಗ್ಲಿಷ್‌ ಬೋಧನೆ

ಆಂಗ್ಲ ಮಾಧ್ಯಮ ಕೈತಪ್ಪುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಸಾಂತ್ವನ ಸೂತ್ರ

Team Udayavani, Jun 8, 2019, 5:59 AM IST

KAN

ಮಂಗಳೂರು: ಒಂದು ಸಾವಿರ ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮದ ಜತೆಗೆ ಅವುಗಳ ಕನ್ನಡ ಮಾಧ್ಯಮ ತರಗತಿಗಳಲ್ಲೂ “ನಲಿ-ಕಲಿ’ ಕಲಿಕಾ ವ್ಯವಸ್ಥೆಯಡಿ ಇಂಗ್ಲಿಷ್‌ ಬೋಧನೆಯನ್ನು ಪರಿಣಾಮಕಾರಿಯಾಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಒಂದು ಸಾವಿರ ಶಾಲೆ ಗಳಲ್ಲಿನ ಆಂಗ್ಲ ಮಾಧ್ಯಮಕ್ಕೆ ಬೇಡಿಕೆ ಹೆಚ್ಚಿದೆ. ಆದರೆ 30ಮಕ್ಕಳಿಗೆ ಸಂಖ್ಯೆ ಮಿತಿಗೊಳಿಸಿರುವ ಕಾರಣ ಹೆತ್ತವರಿಗೆ ನಿರಾಶೆ ಯಾಗಿದೆ. ಹೀಗಾಗಿ “ನಲಿ-ಕಲಿ’ಯಲ್ಲಿ ಆಟ- ಚಟುವಟಿಕೆಗಳ ಮೂಲಕ ಇಂಗ್ಲಿಷ್‌ ಕಲಿಸಲು ಇಲಾಖೆ ಮುಂದಾಗಿದೆ.

ರಾಜ್ಯದಲ್ಲಿ 43 ಸಾವಿರ ಸರಕಾರಿ ಮತ್ತು ಅನುದಾನಿತ ಶಾಲೆಗಳಿವೆ. ಇಂಗ್ಲಿಷ್‌ ಮಾಧ್ಯಮ ಆರಂಭವಾದ 1 ಸಾವಿರ ಶಾಲೆಗಳ ಕನ್ನಡ ಮಾಧ್ಯಮದ 1ರಿಂದ 3ನೇ ತರಗತಿಗಳಿಗೆ “ನಲಿ-ಕಲಿ’ ಇಂಗ್ಲಿಷ್‌ ಪಠ್ಯದ ಜತೆಗೆ ಆ್ಯಕ್ಟಿವಿಟಿ ಕಾರ್ಡ್‌ ಕೂಡ ನೀಡಲಾಗುತ್ತದೆ. ಇದರ ಯಶಸ್ಸನ್ನು ಅಧರಿಸಿ ಮುಂದಿನ ವರ್ಷ ಎಲ್ಲ ಶಾಲೆಗಳಿಗೆ ವಿಸ್ತರಿಸುವ ಯೋಜನೆ ಇಲಾಖೆ ಹೊಂದಿದೆ.

ಶಿಕ್ಷಕರಿಗೆ ತರಬೇತಿ
ಆಯ್ಕೆಯಾದ ಶಿಕ್ಷಕರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಿದ್ದು, ಅವರು ಚಟುವಟಿಕೆ ಆಧಾರಿತ ಇಂಗ್ಲಿಷ್‌ ಕಲಿಸುವರು. ಕೆಲವೆಡೆ 4 ಮತ್ತು 5ನೇ ತರಗತಿಯ ಆಂಗ್ಲ ಶಿಕ್ಷಕರನ್ನು ಇದಕ್ಕೆ ಗೊತ್ತುಪಡಿಸಲಾಗಿದೆ ಎನ್ನುತ್ತಾರೆ ಸರ್ವ ಶಿಕ್ಷಾ ಅಭಿಯಾನದ ಪ್ರಮುಖರು.

ಏನಿದು ಆ್ಯಕ್ಟಿವಿಟಿ ಕಾರ್ಡ್‌?
ಇದು ಚಟುವಟಿಕೆ ಆಧಾರಿತ ಇಂಗ್ಲಿಷ್‌ ಕಲಿಕೆ ವಿಧಾನ. ಕಾರ್ಡ್‌ ಎಂಬುದು ಹೆಸರಷ್ಟೆ, 1ರಿಂದ 3ನೇ ತರಗತಿಗಳ ಮಕ್ಕಳನ್ನು ತಲಾ 30 ವಿದ್ಯಾರ್ಥಿಗಳ ಯೂನಿಟ್‌ಗಳಾಗಿ ವಿಂಗಡಿಸಲಾಗುತ್ತದೆ. ಪ್ರತೀ ಯೂನಿಟ್‌ಗೆ ಒಂದರಂತೆ ಕಲಿಕಾ ಸಾಮಗ್ರಿ ಮತ್ತು ಕಲಿಕಾ ವಿಧಾನ ಒಳಗೊಂಡ ಒಂದು ಸೆಟ್‌ ಆ್ಯಕ್ಟಿವಿಟಿ ಕಾರ್ಡ್‌ ನೀಡಲಾಗುತ್ತದೆ. ಇದರಲ್ಲಿರುವ ಸೂಚನೆಗಳ ಅನುಸಾರ ಶಿಕ್ಷಕರು ಬೋಧಿಸಬೇಕು. ಮೊದಲ 3 ತಿಂಗಳಲ್ಲಿ ಪದ, ಉಚ್ಚಾರ, ಆಲಿಸುವಿಕೆ, ಸಂಭಾಷಣೆ, ಬರವಣಿಗೆ ಸಂಬಂಧಿತ ಆಟಗಳು ಮೂಲಕ ಇಂಗ್ಲಿಷ್‌ ಕಲಿಕೆ; ಓದುವುದು, ಬರವಣಿಗೆಗೆ ಒತ್ತು ನೀಡಲಾಗುತ್ತದೆ.

ಪ್ರಸಕ್ತ ವರ್ಷವೇ ಪ್ರಾರಂಭ
ಸರಕಾರಿ ಶಾಲೆಗಳಲ್ಲಿ ಕನ್ನಡದಷ್ಟೇ ಇಂಗ್ಲಿಷ್‌ ಭಾಷೆಗೂ ಒತ್ತು ನೀಡಲು ಸರಕಾರ ಸೂಚಿಸಿದೆ. ಆಂಗ್ಲ ಮಾಧ್ಯಮ ಆರಂಭ ವಾದ 1 ಸಾವಿರ ಶಾಲೆಗಳಲ್ಲಿ “ನಲಿ-ಕಲಿ’ ವ್ಯವಸ್ಥೆಯಡಿ ಪರಿಣಾಮ ಕಾರಿ ಆಂಗ್ಲ ಶಿಕ್ಷಣ ನೀಡಲಾಗುವುದು. ದಾಖಲಾತಿ ಪೂರ್ಣಗೊಂಡ ಬಳಿಕ ಮಕ್ಕಳ ಸಂಖ್ಯೆ ಆಧರಿಸಿ ಆ್ಯಕ್ಟಿವಿಟಿ ಕಾರ್ಡ್‌ ಹಂಚಲಾಗುತ್ತದೆ.
-ಗುಣವತಿ,
ಜೂನಿಯರ್‌ ಪ್ರೋಗ್ರಾಮ್‌ ಆಫೀಸರ್‌
ನಲಿಕಲಿ ಯೋಜನೆ

ಪರಿಣಾಮಕಾರಿ ಅಧ್ಯಯನ
“ನಲಿ-ಕಲಿ’ಯಲ್ಲಿ ಪರಿಚಯ ಭಾಷೆಯಾಗಿ ಇಂಗ್ಲಿಷ್‌ ಬೋಧನೆ ಇತ್ತು. ಆದರೆ ಇಂಗ್ಲಿಷ್‌ ಮಾಧ್ಯಮ ಆರಂಭವಾದ ಕಾರಣ ದಾಖಲಾತಿ ಹೆಚ್ಚುತ್ತಿದೆ. ಅಂತಹ ಮಕ್ಕಳೂ ಇಂಗ್ಲಿಷನ್ನು ಕಲಿಯಲೆಂದು ಚಟುವಟಿಕೆ ಆಧಾರಿತ ಬೋಧನೆ ಆರಂಭವಾಗುತ್ತಿದೆ.
ವೈ. ಶಿವರಾಮಯ್ಯ
ಡಿಡಿಪಿಐ ದ.ಕ. 

-ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.