ದುರಸ್ತಿ ಕಾಣದ ರಸ್ತೆಯಲ್ಲಿ ಗ್ರಾಮಸ್ಥರ ಶ್ರಮದಾನ
Team Udayavani, Nov 10, 2018, 11:30 AM IST
ಅಜ್ಜಾವರ : ಸುಳ್ಯ – ಮಂಡೆಕೋಲು ಸಂಪರ್ಕ ಮಾರ್ಗವಾದ ಅಜ್ಜಾವರ ರಸ್ತೆ ಶಿಥಿಲಗೊಂಡು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಗುಂಡಿ ಬಿದ್ದ ರಸ್ತೆಗಳಲ್ಲಿ ಪ್ರಯಾಣಿಕರು ಅಂಗೈಯಲ್ಲಿ ಜೀವ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಇತ್ತು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶ್ರಮದಾನದ ಮೂಲಕವೇ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಅಜ್ಜಾವರ ರಸ್ತೆ 6.5 ಕಿ.ಮೀ. ದೂರವಿದೆ. ಡಾಮರು ಹಾಕಿ ಐದು ವರ್ಷ ಕಳೆದಿದ್ದು, ಆ ಬಳಿಕ ದುರಸ್ತಿ ಕಂಡಿಲ್ಲ. ಅತಿಯಾಗಿ ಮಳೆ ಬೀಳುವ ಪ್ರದೇಶವಾದ್ದರಿಂದ ಹಾಗೂ ಈ ಬಾರಿ ಅತಿವೃಷ್ಟಿಯೂ ಕಾಡಿದ್ದರಿಂದ ಸಹಜವಾಗಿ ರಸ್ತೆಯುದ್ದಕ್ಕೂ ದೊಡ್ಡ ಗಾತ್ರದ ಗುಂಡಿಗಳು ನಿರ್ಮಾಣವಾಗಿವೆ. ನಿರ್ವಹಣೆಯ ಅವ್ಯವಸ್ಥೆಯೇ ಇದಕ್ಕೆಲ್ಲ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಜಾಣ ಮೌನಕ್ಕೆ ಬೇಸರ
ರಸ್ತೆಗಳು ಜನರ ಪ್ರಯಾಣಕ್ಕೆ ಅಡ್ಡಿಯಾಗುತ್ತಿದ್ದರೂ ಅಧಿಕಾರಿಗಳು ಜಾಣ ಮೌನ ತಾಳಿರುವುದಕ್ಕೆ ಬೇಸತ್ತ ಅಜ್ಜಾವರ ಗ್ರಾಮಸ್ಥರು ರಸ್ತೆಯಲ್ಲಿರುವ ಹೊಂಡ – ಗುಂಡಿಗಳನ್ನು ಒಂದು ದಿನದ ಶ್ರಮದಾನದ ಮೂಲಕ ಮುಚ್ಚಿದ್ದಾರೆ. ದೊಡ್ಡ ಗಾತ್ರದ ಹೊಂಡಗಳಿದ್ದಲ್ಲಿ ಕೆಂಪು ಕಲ್ಲು, ಜೆಸಿಬಿ ಸಹಾಯದಿಂದ ಮಣ್ಣು ಹಾಕಿ ಮುಚ್ಚಲಾಗಿದೆ. ತೀವ್ರ ನಿರ್ಲಕ್ಷ್ಯಕ್ಕೆ ಒಳಗಾದ ಸುಳ್ಯ- ಅಜ್ಜಾವರ- ಮಂಡೆಕೋಲು ಜಿ.ಪಂ. ರಸ್ತೆಯನ್ನು ಶ್ರಮದಾನದ ಮೂಲಕ ಸರಿಪಡಿಸುವ ಮೊದಲು ಗ್ರಾಮಸ್ಥರು ಕರಪತ್ರ ಹಂಚಿ, ಜಾಗೃತಿ ಮೂಡಿಸಿದ್ದರು. ‘ನಮ್ಮ ರಸ್ತೆಯನ್ನು ನಿರ್ಲಕ್ಷಿಸಿದ ಜನಪ್ರತಿನಿಧಿಗಳನ್ನು ನಿರ್ಲಕ್ಷಿಸಿ, ಎಲ್ಲರೂ ಒಂದಾಗಿ ಶ್ರಮದಾನದಲ್ಲಿ ಭಾಗವಹಿಸಿ, ನಮ್ಮ ರಸ್ತೆ- ನಮ್ಮ ಶ್ರಮ’ ಎಂದು ಕರಪತ್ರದಲ್ಲಿ ಮುದ್ರಿಸಲಾಗಿತ್ತು.
ಏಕಕಾಲಕ್ಕೆ 3 ಕಡೆ ಶ್ರಮದಾನ
ಒಂದು ದಿನದ ಶ್ರಮದಾನದಲ್ಲಿ ಗುಂಡಿ ಮುಚ್ಚುವ ಕೆಲಸ ಬೆಳಗ್ಗೆ 9.30ಕ್ಕೆ ಅಜ್ಜಾವರ ಗ್ರಾಮದ ಕಾಂತಮಂಗಲ, ಅಜ್ಜಾವರ ಹಾಗೂ ಅಡ್ಪಂಗಾಯದಲ್ಲಿ ಆರಂಭವಾಯಿತು. ಶ್ರಮದಾನದ ಮೂಲಕ ಪ್ರತಿಭಟಿಸಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು. ರಸ್ತೆ ದುರಸ್ತಿಗೆ ಗ್ರಾಮಸ್ಥರ ಮನವಿಯ ಹಿನ್ನೆಲೆಯಲ್ಲಿ ಕೇಂದ್ರದ ಸಿಆರ್‌ಎಫ್ ಯೋಜನೆಯಲ್ಲಿ 6 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ರಾಜ್ಯ ಸರಕಾರದ ಟೆಂಡರ್ ಪ್ರಕ್ರಿಯೆಯಲ್ಲಿ ಆದ ವಿಳಂದಿಂದ ರಸ್ತೆ ದುರಸ್ತಿ ಕಾಮಗಾರಿ ಇನ್ನೂ ನಡೆದಿಲ್ಲ. ಮುಂಬರುವ ಮಳೆಗಾಲಕ್ಕೆ ಮೊದಲಾದರೂ ರಸ್ತೆ ದುರಸ್ತಿಯಾಗಲಿ ಎಂದು ಆಗ್ರಹಿಸಿದ್ದಾರೆ.
ಗುಂಡಿ ಮುಚ್ಚಿದೆವು
ಅಜ್ಜಾವರ ರಸ್ತೆ ದುರಸ್ತಿಯ ಕುರಿತು ಹಲವು ಬಾರಿ ಮನವಿ ಮಾಡಲಾಗಿದೆ. ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಗ್ರಾಮಸ್ಥರು ಸೇರಿ ಶಿಥಿಲಗೊಂಡಿರುವ ರಸ್ತೆಯ ಹೊಂಡ ಗುಂಡಿಗಳನ್ನು ಶ್ರಮದಾನದ ಮೂಲಕ ಮುಚ್ಚಿದ್ದೇವೆ.
– ಮಿಥುನ್ ಕರ್ಲಪ್ಪಾಡಿ, ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.