‘ಸಂಸ್ಕೃತಿಯ ಸಿರಿತನ ಉಳಿಸಲು ಯತ್ನ’
Team Udayavani, Mar 16, 2018, 11:54 AM IST
ಮಹಾನಗರ : ಸಂಸ್ಕೃ ತಿಯ ಸಿರಿತನವನ್ನು ಉಳಿಸುವ ಉದ್ದೇಶದಿಂದ ರಾಜ್ಯ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೋ ಹೇಳಿದರು. ದ.ಕ. ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ತುಳುಭವನದಲ್ಲಿ ಗುರುವಾರ ಆಯೋಜಿಸಿದ್ದ ಸುಗ್ಗಿ-ಹುಗ್ಗಿ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಡಿನ ಸಾಂಸ್ಕೃತಿಕ ಕಲೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಕೋಟ್ಯಾಂತರ ರೂ. ಖರ್ಚು ಮಾಡಲಾಗುತ್ತಿದೆ. ಕಲಾವಿದರಿಗೆ ಪ್ರೇಕ್ಷಕರೇ ದೇವರು. ಇಂತಹ ಸಮಾರಂಭಕ್ಕೆ ನಾನಾ ಊರುಗಳಿಂದ ಕಲಾವಿದರು ಬಂದರೂ, ಪ್ರೇಕ್ಷಕರ ಕೊರತೆ ಇದ್ದರೆ ಪ್ರದರ್ಶನ ನೀಡಲು ಬೇಸರವಾಗುತ್ತದೆ. ಈ ಕಾರ್ಯಕ್ರಮಕ್ಕೆ ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾಗಿದ್ದೇವೆ ಎಂದರು.
ವೇದಿಕೆಯಲ್ಲಿ ಪಾಲಿಕೆ ಸದಸ್ಯ ರಾಧಾಕೃಷ್ಣ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಜೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ ಬಿ. ಉಪಸ್ಥಿತರಿದ್ದರು.
ಪ್ರೇಕ್ಷಕರ ಕೊರತೆ
ಸುಗ್ಗಿ-ಹುಗ್ಗಿ ಸಂಭ್ರಮಕ್ಕೆ ಪ್ರೇಕ್ಷಕರನ್ನು ಸೆಳೆಯುವಲ್ಲಿ ಇಲಾಖೆ ವಿಫಲವಾದುದ್ದು ಕಂಡುಬಂತು. ಕುರ್ಚಿಗಳೆಲ್ಲಾ ಖಾಲಿ ಖಾಲಿಯಾಗಿದ್ದುದನ್ನು ಕಂಡ ಶಾಸಕ ಜೆ.ಆರ್. ಲೋಬೋ ಅವರು ಕೂಡ ಬೇಸರ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ 18 ಸಾಂಸ್ಕೃತಿಕ ಪ್ರಾಕಾರಗಳಲ್ಲಿ ಸುಮಾರು 200 ಮಂದಿ ಕಲಾವಿದರು ಪ್ರದರ್ಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.