ಈದ್ ಮಿಲಾದ್ ಸರಳ ಆಚರಣೆ: ಜಿಲ್ಲಾಧಿಕಾರಿ ಆದೇಶ
Team Udayavani, Oct 18, 2021, 5:45 AM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಈದ್ ಮಿಲಾದ್ ಅನ್ನು ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಸೂಚಿಸಿದ್ದಾರೆ.
ಈದ್ ಮಿಲಾದ್ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸ ಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಕಾರ್ಯಕ್ರಮ/ಸಭೆ/ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.
ಮಸೀದಿ ಹಾಗೂ ದರ್ಗಾಗಳಲ್ಲಿ ಸುರಕ್ಷಿತ ಅಂತರ ಹಾಗೂ ಕೋವಿಡ್ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ದೈಹಿಕ ಅಂತರ ಕಾಪಾಡಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆ ಮಾಡಬಾರದು.
ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯೆ ಕನಿಷ್ಠ ಆರು ಅಡಿ ಅಂತರ ಇರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ.
ಇದನ್ನೂ ಓದಿ:ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ
ಮಸೀದಿಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್, ಇತರ ತೆರೆದ ಜಾಗ) ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.