ಐಕಳೋತ್ಸವ: ತುಳು ಜಾನಪದ ಕ್ರೀಡಾಮೇಳ
Team Udayavani, Jan 15, 2018, 11:34 AM IST
ಐಕಳ: ಗ್ರಾಮೀಣ ಜನರಲ್ಲಿ ಕೃಷಿ ಕಾರ್ಯದ ಕಾಯಕವನ್ನು ಹಿರಿಯರು ಎಷ್ಟು ಕಷ್ಟಪಟ್ಟು ಮಾಡುತ್ತಿದ್ದರು ಎಂಬುವುದನ್ನು ನಮ್ಮ ಯುವ ಜನಾಂಗ ತಿಳಿಯಬೇಕು. ಇಂತಹ ಜಾನಪದ ಕ್ರೀಡಾಕೂಟ ಆಯೋಜಿಸಿದಾಗ ಗ್ರಾಮೀಣ ಜನರ ಒಗ್ಗಟ್ಟು ಪ್ರದರ್ಶನಗೊಳ್ಳುತ್ತದೆ ಎಂದು ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ ಹೇಳಿದರು.
ಅವರು ಜ. 14 ರಂದು ಐಕಳ ಬಾವ ಕಾಂತಾಬಾರೆ -ಬೂದಾಬಾರೆ ಜೋಡುಕರೆ ಕಂಬಳ ಸಮಿತಿಯ ಆಶ್ರಯದಲ್ಲಿ ತುಳು ಜಾನಪದ ಕ್ರೀಡಾ ಮೇಳ ಐಕಳ್ಳೋತ್ಸವವನ್ನು ಕಂಬಳದ ಮಂಜೊಟ್ಟಿ ಗದ್ದೆಯಲ್ಲಿ ಉದ್ಘಾಟಿಸಿದರು. ಐಕಳ ಕಂಬಳ ಸಮಿತಿಯ ಅಧ್ಯಕ್ಷ ಐಕಳಬಾವ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಅಧ್ಯಕ್ಷತೆ ವಹಿಸಿ, ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಜಾನಪದ ಕ್ರೀಡೆಗಳನ್ನು ಎಲ್ಲರಿಗೂ ತಿಳಿ ಹೇಳುವ ಕಾರ್ಯ ಮಾಡುತ್ತಿದ್ದೇವೆ ಎಂದರು.
ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಾಂಭವಿ ಶೆಟ್ಟಿ, ಮೆನ್ನಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸಾವಿತ್ರಿ
ಶೆಟ್ಟಿ, ಪತ್ರಕರ್ತ ಯಶವಂತ ಐಕಳ, ಕಂಬಳ ಸಮಿತಿ ಸಂಚಾಲಕ ಮುರಳೀಧರ ಶೆಟ್ಟಿ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಸಂಜೀವ ಶೆಟ್ಟಿ ಐಕಳ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ಸಾಯಿನಾಥ ಶೆಟ್ಟಿ ಸ್ವಾಗತಿಸಿದರು. ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.