ಚುನಾವಣೆ ಸಿದ್ಧತೆ ಪೂರ್ಣ: ದ.ಕ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌


Team Udayavani, May 11, 2018, 7:35 AM IST

DC-Office-10-5.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳಲ್ಲಿರುವ ಒಟ್ಟು 1,858 ಮತಗಟ್ಟೆಗಳಲ್ಲಿ ಮೇ 12 ರಂದು ನಡೆಯುವ ಮತದಾನಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಮತದಾನದ ಅವಧಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಇರುತ್ತದೆ ಎಂದು ಡಿಸಿ ಶಶಿಕಾಂತ ಸೆಂಥಿಲ್‌ ತಿಳಿಸಿದರು. ಜಿಲ್ಲೆಯಲ್ಲಿ ಒಟ್ಟು 17,11,878 ಮತದಾರರಿದ್ದಾರೆ. ಅವರಲ್ಲಿ 8,41,073 ಪುರುಷರು ಹಾಗೂ 8,70,675 ಮಹಿಳೆಯರು. ಅಲ್ಲದೆ 100 ಮಂದಿ ಲೈಂಗಿಕ ಅಲ್ಪಸಂಖ್ಯಾಕ ಮತದಾರರಿದ್ದಾರೆ. 20 ಪಿಂಕ್‌ ಮತ್ತು 5 ಎತ್ನಿಕ್‌ ಮತದಾನ ಕೇಂದ್ರಗಳನ್ನು ಸ್ವೀಪ್‌ ಸಮಿತಿ ಗುರುತಿಸಿದೆ.

7,569 ಮತ ಯಂತ್ರ:1,858 ಮತಗಟ್ಟೆಗಳಿಗೆ 7,569 ಮತ ಯಂತ್ರ ಒದಗಿಸಲಾಗಿದೆ. ಶೇ.20ರಷ್ಟು ಮತ ಯಂತ್ರಗಳು ಮೀಸಲಿರಬೇಕೆಂಬ ನಿಯಮವಿದ್ದು, ಹೆಚ್ಚುವರಿ ಮತ ಯಂತ್ರಗಳನ್ನು ಪೂರೈಕೆ ಮಾಡಲಾಗಿದೆ.

ಚುನಾವಣಾಧಿಕಾರಿಗಳು: ಎಲ್ಲ 8 ಕ್ಷೇತ್ರಗಳಿಗೆ ಚುನಾವಣ ಅಧಿಕಾರಿ ನೇಮಕ ಮಾಡಲಾಗಿದೆ. ಬೆಳ್ತಂಗಡಿ- ಎಚ್‌.ಆರ್‌. ನಾಯ್ಕ (95914 17218), ಮೂಡಬಿದಿರೆ- ವಿ. ಪ್ರಸನ್ನ (9731192244), ಮಂಗಳೂರು ನಗರ ಉತ್ತರ – ಎಸ್‌.ಬಿ. ಪ್ರಶಾಂತ್‌ ಕುಮಾರ್‌ (7760432770), ಮಂಗಳೂರು ನಗರ ದಕ್ಷಿಣ – ಆ್ಯಂಟನಿ ಮರಿಯಾ ಇಮ್ಯಾನುವೆಲ್‌ (8277931060), ಮಂಗಳೂರು- ಮಹೇಶ್‌ ಕರ್ಜಗಿ (9448933653), ಬಂಟ್ವಾಳ- ರವಿ ಬಸರಿಹಳ್ಳಿ (9902967070), ಪುತ್ತೂರು- ಎಚ್‌.ಕೆ. ಕೃಷ್ಣ ಮೂರ್ತಿ (7760292048), ಸುಳ್ಯ- ಬಿ. ಟಿ. ಮಂಜುನಾಥನ್‌ (9448067681).

13,176 ಸಿಬಂದಿ: ಜಿಲ್ಲೆಯಲ್ಲಿ ಒಟ್ಟು 13,176 ಸಿಬಂದಿಯನ್ನು ನೇಮಕ ಮಾಡಲಾಗಿದೆ. ಪ್ರತಿ ಮತಗಟ್ಟೆಗೆ ಒಬ್ಬ ಅಧ್ಯಕ್ಷಾಧಿಕಾರಿ, 4 ಮತಗಟ್ಟೆ ಅಧಿಕಾರಿ ಮತ್ತು ಒಬ್ಬ ಗ್ರೂಪ್‌ ಡಿ ಸಿಬಂದಿಯನ್ನು ನಿಯೋಜಿಸಲಾಗಿದೆ. ಕ್ಲಿಷ್ಟ ಮತಗಟ್ಟೆಗೆ ಓರ್ವ ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ.

648 ವಾಹನಗಳು: ಮತಗಟ್ಟೆ ಅಧಿಕಾರಿಗಳನ್ನು ಮತಗಟ್ಟೆಗಳಿಗೆ ತಲುಪಿಸಿ ಚುನಾವಣ ಕರ್ತವ್ಯ ಮುಕ್ತಾಯವಾದ ಬಳಿಕ ಡಿ – ಮಸ್ಟರಿಂಗ್‌ ಕೇಂದ್ರಕ್ಕೆ ಕರೆದೊಯ್ಯುವ ಬಗ್ಗೆ ಒಟ್ಟು 648 ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಪೋಲಿಂಗ್‌ ಏಜಂಟರ ನೇಮಕ: ಎಲ್ಲ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗುವ ಮೊದಲು ಅಣಕು ಮತದಾನ ನಡೆಸಲಾಗುತ್ತಿದ್ದು, ಪೋಲಿಂಗ್‌ ಏಜಂಟರು ಬೆಳಗ್ಗೆ 5.45ಕ್ಕೆ ಮತಗಟ್ಟೆಗಳಲ್ಲಿ ಹಾಜರಿರಬೇಕು. ಪೊಲೀಂಗ್‌ ಏಜಂಟರನ್ನು ಮಧ್ಯಾಹ್ನ 3 ಗಂಟೆವರೆಗೆ ಮಾತ್ರ ಬದಲಾಯಿಸಲು ಅವಕಾಶವಿದೆ.

ಅಂಚೆ ಮತದಾನ: ಚುನಾವಣ ಕರ್ತವ್ಯ ನಿರ್ವಹಿಸುವವರಿಗೆ ಅಂಚೆ ಮತದಾನ ಮಾಡುವ ಅವಕಾಶವಿದ್ದು, ಈ ಬಗ್ಗೆ 12,837 ಮತಗಟ್ಟೆ ಅಧಿಕಾರಿಗಳಿಗೆ ಹಾಗೂ 1,295 ಪೊಲೀಸ್‌ ಅಧಿಕಾರಿ/ ಸಿಬಂದಿಗೆ ಮತ್ತು 43 ವಾಹನ ಚಾಲಕ/ ಕ್ಲೀನರ್‌ಗಳಿಗೆ ಮತ ಪತ್ರಗಳನ್ನು ವಿತರಿಸಲಾಗಿದ್ದು, ಈಗಾಗಲೇ ಹಲವಾರು ಮಂದಿ ಮತದಾನ ಮಾಡಿದ್ದಾರೆ. 

517 ಕ್ಲಿಷ್ಟ ಮತಗಟ್ಟೆಗಳು: ಒಟ್ಟು 517 ಕ್ಲಿಷ್ಟ ಮತಗಟ್ಟೆ ಗುರುತಿಸಲಾಗಿದೆ. ಈ ಪೈಕಿ 97ಮತಗಟ್ಟೆಗಳಲ್ಲಿ ವೆಬ್‌ ಕಾಸ್ಟಿಂಗ್‌, 221 ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಉಳಿದ ಮತಗಟ್ಟೆಗಳಲ್ಲಿ ಕೇಂದ್ರೀಯ ಅರೆ ಸೈನಿಕ ಪಡೆ ಸಿಬಂದಿ/ವೀಡಿಯೋಗ್ರಾಫರ್‌ ನಿಯೋಜಿಸಲಾಗಿದೆ.

ಚುನಾವಣ ಪೂರ್ವ ಸಮೀಕ್ಷೆ ನಿಷೇಧ: ಮತದಾನ ದಿನ ಬೆಳಗ್ಗೆ 7 ರಿಂದ ಸಂಜೆ 6.30ರವರೆಗೆ ಚುನಾವಣಾ ಪೂರ್ವ ಸಮೀಕ್ಷೆ ನಡೆಸುವುದನ್ನು ಹಾಗೂ ಒಪೀನಿಯನ್‌ ಪೋಲ್‌ ನ್ನು ಮತದಾನದ ಕೊನೆಯ 48 ಗಂಟೆಗಳಲ್ಲಿ ನಡೆಸುವುದನ್ನು ನಿಷೇಧಿಸಲಾಗಿದೆ.

ಮತಗಟ್ಟೆ ಬಳಿ ಪ್ರಚಾರ ನಿಷೇಧ: ಮತಗಟ್ಟೆಯ ಬಳಿ 100 ಮೀ. ವ್ಯಾಪ್ತಿಯಲ್ಲಿ ಚುನಾವಣ ಪ್ರಚಾರ ನಿಷೇಧಿಸಲಾಗಿದೆ. ಅಭ್ಯರ್ಥಿಯ ಬೂತ್‌ ನಿರ್ಮಿಸಲು ಮತಗಟ್ಟೆಯಿಂದ 200 ಮೀ. ದೂರದಲ್ಲಿ ಮಾತ್ರ ಅವಕಾಶವಿದೆ. ಇದಕ್ಕೆ ಸ್ಥಳೀಯಾಡಳಿತದ ಅನುಮತಿ ಕಡ್ಡಾಯ.

ಅಪರ ಜಿಲ್ಲಾಧಿಕಾರಿ ವೈಶಾಲಿ, ಮಂಗಳೂರು ಪೊಲೀಸ್‌ ಆಯುಕ್ತ ವಿಪುಲ್‌ ಕುಮಾರ್‌ ಮತ್ತು ಜಿಲ್ಲಾ ಎಸ್‌ಪಿ ಡಾ| ರವಿಕಾಂತೇ ಗೌಡ, ಡಿಸಿಪಿ ಹನುಮಂತರಾಯ, ಜಿ. ಪಂ. ಸಿಇಒ ಡಾ| ಎಂ.ಆರ್‌. ರವಿ ಇದ್ದರು. 

ಕಂಟ್ರೋಲ್‌ ರೂಂ
ಮತದಾರಾರ ಹೆಸರು ಮತದಾರರ ಪಟ್ಟಿಗಳಲ್ಲಿ ನೊಂದಾಯಿಸಿರುವ ಬಗ್ಗೆ ಮಾಹಿತಿ ಪಡೆಯಲು ಹಾಗೂ ಚುನಾವಣೆಗೆ ಸಂಬಂಧಪಟ್ಟ ಸಲಹೆ ಸೂಚನೆ ಅಥವಾ ದೂರುಗಳನ್ನು ನೀಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್‌ ರೂಂ ಸ್ಥಾಪಿಸಲಾಗಿದೆ. ಆವಶ್ಯಕತೆ ಇರುವವರು ಇದರ ಪ್ರಯೋಜನ ಪಡೆಯಬಹುದು.

ದೂರವಾಣಿ ಸಂಖ್ಯೆ: 0824-2420002
ಶುಲ್ಕ ರಹಿತ (ಟೋಲ್‌ ಫ್ರೀ) ದೂರವಾಣಿ: 18004252099
ವಾಟ್ಸ್‌ಆ್ಯಪ್‌ ಸಂಖ್ಯೆ: 8277163522

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.