ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಕಾವೇರದ ಚುನಾವಣ ಹವಾ

Team Udayavani, May 3, 2018, 12:48 PM IST

3-May-11.jpg

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ಹತ್ತು ದಿನಗಳಷ್ಟೇ ಬಾಕಿ ಉಳಿದಿದ್ದರೂ ಪ್ರಚಾರದ ಅಬ್ಬರವಾಗಲಿ ಅಥವಾ ಚುನಾವಣೆ, ಪಕ್ಷಗಳ ಬಲಾಬಲ, ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದ ಬಗ್ಗೆಯಾಗಲೀ ಗಂಭೀರವಾದ ಮಾತು-ಚರ್ಚೆಗಳು ಸಾರ್ವಜನಿಕ ವಲಯದಿಂದ ಈ ಬಾರಿ ಅಷ್ಟೊಂದು ಕೇಳಿಸುತ್ತಿಲ್ಲ. ಪಕ್ಷಗಳ ಅಭ್ಯರ್ಥಿಗಳು ಮನೆ-ಮನೆ ಭೇಟಿ, ಬಹಿರಂಗ ಸಭೆಗಳಲ್ಲಿ ಮತಯಾಚನೆ ಮಾಡುತ್ತಿದ್ದರೆ, ಅತ್ತ ಮತದಾರರು ಮಾತ್ರ ತಮ್ಮ ಪಾಡಿಗೆ ತಾವು ಬಿಜಿಯಾಗಿರುವ ಸನ್ನಿವೇಶ ಕಾಣಿಸುತ್ತಿದೆ.

ಅದಕ್ಕೆ ಪ್ರಮುಖ ಕಾರಣ ಕಾಲೇಜುಗಳ ಪುನರಾರಂಭ ಹಾಗೂ ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಒತ್ತಡ. ಹಾಗೆಯೇ ಮಳೆಗಾಲ ಆರಂಭವಾಗುವುದಕ್ಕೆ ತಿಂಗಳಷ್ಟೇ ಬಾಕಿ ಉಳಿದಿದ್ದು, ಒಂದಷ್ಟು ಮಂದಿ ಮದುವೆ, ಜಾತ್ರೆ, ಧಾರ್ಮಿಕ ಉತ್ಸವಗಳನ್ನು ಪೂರ್ಣಗೊಳಿಸುವ ತರಾತುರಿಯಲ್ಲಿದ್ದಾರೆ. ಈ ಕಾರಣಗಳಿಂದ ಚುನಾವಣೆಯತ್ತ ಹೆಚ್ಚಿನ ಗಮನಹರಿಸುವ ಮೂಲಕ ಆ ಬಗ್ಗೆ ತಲೆಕೆಡಿಸಿಕೊಳ್ಳುವುದಕ್ಕೂ ಜಾಸ್ತಿ ಸಮಯವೂ ಇಲ್ಲ.

ಏಕೆಂದರೆ ಈ ವರ್ಷ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ ಪರಿಷ್ಕರಣೆಯಾಗಿದ್ದು ಪಿಯುಸಿ ತರಗತಿಗಳು ಒಂದು ತಿಂಗಳು ಮುಂಚಿತವಾಗಿ ಆರಂಭಗೊಳ್ಳುತ್ತಿವೆ. ದ್ವಿತೀಯ ಪಿಯುಸಿ ಮೇ 2ರಿಂದ ಆರಂಭವಾಗಿದೆ ಹಾಗೂ ಪ್ರಥಮ ಪಿಯುಸಿ ಮೇ 14ಕ್ಕೆ ಪ್ರಾರಂಭವಾಗುತ್ತಿವೆ.

ಇನ್ನು ದ್ವಿತೀಯ ಪಿಯುಸಿ, ಜೆಇಇ ಮೈನ್‌ ಫಲಿತಾಂಶ ಈಗಷ್ಟೆ ಬಂದಿದೆ. ಸಿಇಟಿ ಪರೀಕ್ಷೆಗಳ ಫಲಿತಾಂಶ ಸದ್ಯದಲ್ಲೇ ಘೋಷಣೆಯಾಗಲಿದೆ. ಇನ್ನು ಎಸ್‌ ಎಸ್‌ಎಲ್‌ಸಿ ಫಲಿತಾಂಶ ಕೂಡ ವಾರದೊಳಗೆ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಈ ರೀತಿ ಒಂದು ಕಡೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಾನಾ ಹಂತದ ಪರೀಕ್ಷೆಗಳ ಫಲಿತಾಂಶ ಹೊರಬೀಳುತ್ತಿದ್ದರೆ, ಇನ್ನೊಂದು ಕಡೆ ತಮ್ಮ ಮಕ್ಕಳಿಗೆ ಪಿಯುಸಿ, ಎಂಜಿನಿಯರಿಂಗ್‌, ವೈದ್ಯ ಸಹಿತ ಉನ್ನತ ಶಿಕ್ಷಣಕ್ಕೆ ಸೀಟು ಪಡೆಯುವ ವಿಚಾರದಲ್ಲಿ ಪೋಷಕರು ಬಿಜಿಯಾಗುತ್ತಿದ್ದಾರೆ. ಇದರ ನಡುವೆ ಚುನಾವಣೆ ಬಂದಿರುವುದರಿಂದ ಪೋಷಕರು ಆ ಕಡೆ ಹೆಚ್ಚು ಗಮನಹರಿಸುತ್ತಿದ್ದಾರೆ.

ಎಪ್ರಿಲ್‌, ಮೇ ತಿಂಗಳಿನಲ್ಲಿ ವಿವಾಹ ಸಹಿತ ಶುಭ ಕಾರ್ಯಗಳು, ಜಾತ್ರೆಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುವ ಕಾಲ. ಜನರು ಇವುಗಳಲ್ಲಿ ಹೆಚ್ಚು ತೊಡಗಿಸಿಕೊಂಡಿರುತ್ತಾರೆ. ಇದರಿಂದಾಗಿ ಚುನಾವಣೆಯ ವಿಚಾರಗಳನ್ನು ಅಷ್ಟೇನೂ ಗಮನಿಸುವ ಗೋಜಿಗೆ ಅವರು ಹೋಗುತ್ತಿಲ್ಲ. ಚುನಾವಣ ಹವಾ ಕೂಲ್‌ ಆಗಿರಲು ಚುನಾವಣಾ ನೀತಿಸಂಹಿತೆಯ ಪಾತ್ರವೂ ಇದೆ. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ ಬಂಟಿಂಗ್ಸ್‌, ಪೋಸ್ಟರ್‌, ಫ್ಲೆಕ್ಸ್‌ಗಳನ್ನು ಅಳವಡಿಸುವಂತಿಲ್ಲ. 

ಗೋಡೆ ಬರಹಗಳನ್ನು ಹಾಕುವಂತಿಲ್ಲ. ಹತ್ತು ಹಲವು ನಿಯಮಗಳನ್ನು ಪಾಲಿಸಬೇಕಾಗಿರುವುದರಿಂದ ಧ್ವನಿ ವರ್ಧಕಗಳನ್ನು ಬಳಸಿ ಪ್ರಚಾರ ಮಾಡುವ ಗೋಜಿಗೂ ಅಭ್ಯರ್ಥಿಗಳು ಹೋಗುತ್ತಿಲ್ಲ. ಈ ಹಿಂದೆಲ್ಲ ಚುನಾವಣೆ ಬಂತೆಂದರೆ, ರಸ್ತೆಯುದ್ದಕ್ಕೂ ಬ್ಯಾನರ್‌, ಕಟೌಟ್‌, ಪೋಸ್ಟರ್‌ಗಳಿಂದ ರಾರಾಜಿಸುತ್ತಿತ್ತು. ಹೀಗಿರುವಾಗ, ಈಗ ಚುನಾವಣೆಯ ಬಗ್ಗೆ ಯಾವುದೇ ಸದ್ದು-ಗದ್ದಲ ಗೋಚರಿಸುತ್ತಿಲ್ಲ.

ಬಿಸಿಲಿನ ಧಗೆ: ತೀವ್ರ ಬಿಸಿಲಿನ ವಾತಾವರಣದ ನಡುವೆ ಈ ಬಾರಿಯ ಚುನಾವಣೆ ನಡೆಯುತ್ತಿದೆ. ದಕ್ಷಿಣ ಕನ್ನಡದಲ್ಲಿ ಪ್ರಸ್ತುತ ದಿನದ ಗರಿಷ್ಠ ತಾಪಮಾನವೂ 37 ಡಿಗ್ರಿ ಸೆಲ್ಸಿಯಸ್‌ ಇದೆ. ಪಕ್ಷಗಳ ಕಾರ್ಯಕರ್ತರು ಬಿಸಿಲಿನ ಧಗೆಗೆ ಬೆವರಿಳಿಸುತ್ತಾ ಮತದಾರರ ಮನೆಮನೆಗೆ ಭೇಟಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಉರಿ ಬಿಸಿಲಿನ ಬೇಗೆಯೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರನ್ನು ಹೈರಾಣಾಗಿಸಿದೆ.

ಕೇಶವ ಕುಂದರ್‌

ಟಾಪ್ ನ್ಯೂಸ್

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.