ವಿದ್ಯುತ್ ತಂತಿ ತಗುಲಿ ಶಾಕ್:ಲಾರಿ ಕ್ಲೀನರ್ ಸಾವು
Team Udayavani, Jun 5, 2019, 2:27 PM IST
ವಿಟ್ಲ: ವಿದ್ಯುತ್ ತಂತಿ ತುಗಲಿ ಲಾರಿ ಕ್ಲೀನರ್ ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಪಡಾರು ಜಂಕ್ಷನ್ ನಲ್ಲಿ ಸಂಭವಿಸಿದೆ.
ಹಾಸನ ಆಲೂರು ತಾ.ನ ಸಿಂಗಟಗೆರೆ ನಿಂಗರಾಜು ಅವರ ಪುತ್ರ ದುಷ್ಯಂತ ಮೃತ ದುರ್‌ದೈವಿ.
ಮಾದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆಕೆ.ಎಂ.ಎಫ್. ಹಿಂಡಿ ಚೀಲಗಳನ್ನು ಇಳಿಸಿ, ಪುಣಚಕ್ಕೆ ತೆರಳುವುದಕ್ಕಾಗಿ ಲಾರಿ ಚಾಲಕ ಪಡಾರು ಜಂಕ್ಷನನಲ್ಲಿ ನಿಲ್ಲಿಸಿ, ದಾರಿ ಕೇಳುತ್ತಿದ್ದರು. ಈ ಸಂದರ್ಭ ಕ್ಲೀನರ್ ದುಷ್ಯಂತ್ ಲಾರಿ ಕ್ಯಾಬಿನ್ ಮೇಲೇರಿ ಶರ್ಟ್ ತೆಗೆಯುತ್ತಿದ್ದಾಗ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶವಾಗಿದೆ.
ಕ್ಷಣದಲ್ಲೇ ಕ್ಯಾಬಿನ್ ನಿಂದ ಕೆಳಕ್ಕೆಸೆಯಲ್ಪಟ್ಟ ದುಷ್ಯಂತ್ ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದರು.
ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.