ಎಲೆಕ್ಟ್ರಿಕ್‌ ವಾಹನ ಸಂಖ್ಯೆ ಏರಿದರೂ ಚಾರ್ಜಿಂಗ್‌ ಸ್ಟೇಶನ್‌ ಮಾತ್ರ ಇಲ್ಲ !

Team Udayavani, Nov 19, 2021, 3:40 AM IST

ಎಲೆಕ್ಟ್ರಿಕ್‌ ವಾಹನ ಸಂಖ್ಯೆ ಏರಿದರೂ ಚಾರ್ಜಿಂಗ್‌ ಸ್ಟೇಶನ್‌ ಮಾತ್ರ ಇಲ್ಲ !

ಮಹಾನಗರ: ತೈಲ ದರ ಏರಿಕೆಗೆ ಪರ್ಯಾಯವಾಗಿ ನಗರದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಸಂಖ್ಯೆ ಹೆಚ್ಚಾದರೂ ಇವಿ ಚಾರ್ಜಿಂಗ್‌ ಸ್ಟೇಶನ್‌ ಮಾತ್ರ ಇಲ್ಲ!

ಎಲೆಕ್ಟ್ರಿಕ್‌ ವಾಹನಗಳಿಗೆ ಆವಶ್ಯಕವಾಗುವ ನಿಟ್ಟಿನಲ್ಲಿ ನಗರದ ಆಯ್ದ ಭಾಗಗಳಲ್ಲಿ ಇವಿ ಚಾರ್ಜಿಂಗ್‌ ಸ್ಟೇಶನ್‌ ಸ್ಥಾಪನೆಗೆ ಮೆಸ್ಕಾಂ ಯೋಜನೆ ರೂಪಿಸಿ ಹಲವು ಸಮಯ ಆಗಿದೆಯಾದರೂ ಇನ್ನೂ ಕಾರ್ಯರೂಪಕ್ಕೆ ಬರಲಿಲ್ಲ. ಹೀಗಾಗಿ ಎಲೆಕ್ಟ್ರಿಕ್‌ ವಾಹನದವರು ಚಾರ್ಜಿಂಗ್‌ ಮಾಡಲು ಈಗ ಮನೆಯನ್ನು ಅವಲಂಬಿಸಬೇಕಾಗಿದೆ. ಜತೆಗೆ ಕೆಲವು ಮಾಲ್‌ ಅಥವಾ ಶೋರೂಂಗಳಲ್ಲಿ ಹಣ ನೀಡಿ ಚಾರ್ಜಿಂಗ್‌ ಮಾಡುತ್ತಿದ್ದಾರೆ.

ಮಂಗಳೂರಿನಲ್ಲಿ 2019ರಲ್ಲಿ 51 ಎಲೆಕ್ಟ್ರಿಕ್‌ ವಾಹನವಿದ್ದರೆ, 2020ರಲ್ಲಿ ಈ ಸಂಖ್ಯೆ 117ಕ್ಕೆ ಏರಿತ್ತು. ಆದರೆ, ಈ ವರ್ಷದಲ್ಲಿ ಎಲೆಕ್ಟ್ರಿಕ್‌ ವಾಹನ ಗಳ ಸಂಖ್ಯೆ ದುಪ್ಪಟ್ಟಾಗಿದ್ದು ಬರೋಬ್ಬರಿ 891 ವಾಹನಗಳು ನೋಂದಣಿಯಾಗಿದೆ. ಇದರಲ್ಲಿ ರಿಕ್ಷಾ ಹಾಗೂ ದ್ವಿಚಕ್ರ ವಾಹನಗಳ ಸಂಖ್ಯೆಯೇ ಅಧಿಕ.

ಇತ್ತೀಚೆಗೆ ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ಅವರು ಮಂಗಳೂರಿಗೆ ಆಗಮಿಸಿ ಮೆಸ್ಕಾಂ ವತಿಯಿಂದ ಚಾರ್ಜಿಂಗ್‌ ಕೇಂದ್ರ ಆರಂಭಿಸುವ ಬಗ್ಗೆ ಮತ್ತೂಮ್ಮೆ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಮೆಸ್ಕಾಂ ವತಿಯಿಂದ ನಗರದ ಕೆಲವು ಪ್ರದೇಶದ ಸರ್ವೆ ಕೂಡ ನಡೆಸ ಲಾಗಿದೆ. ಆದರೆ ಇನ್ನೂ ಇದು ಅಂತಿಮವಾಗಿಲ್ಲ. ಈ ಮಧ್ಯೆ ಬೆಂಗಳೂರಿನಲ್ಲಿ ಬೆಸ್ಕಾಂ ವತಿಯಿಂದ ನಗರದ ವಿವಿಧ ಪ್ರದೇಶಗಳಲ್ಲಿ 12 ಡಿ.ಸಿ. ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಹಾಗೂ 100 ಎ.ಸಿ. ಚಾರ್ಜಿಂಗ್‌ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ.

ರಿಕ್ಷಾ ಚಾಲಕರೊರ್ವರು “ಸುದಿನ’ ಜತೆಗೆ ಮಾತನಾಡಿ, “ಎಲೆಕ್ಟ್ರಿಕ್‌ ರಿಕ್ಷಾ ವಿಭಿನ್ನ ಅನುಭವ ನೀಡುತ್ತದೆ. 4 ಗಂಟೆ ಮನೆಯಲ್ಲಿಯೇ ಚಾರ್ಜ್‌ ಮಾಡಿ ನಗರದಲ್ಲಿ ಸುಮಾರು 120 ಕಿ.ಮೀ.ವರೆಗೆ ಸಂಚರಿಸಬಹುದಾಗಿದೆ. ಆದರೆ, ನಗರದಲ್ಲಿ ಎಲ್ಲಿಯೂ ಚಾರ್ಜಿಂಗ್‌ ವ್ಯವಸ್ಥೆ ಇಲ್ಲದ ಕಾರಣದಿಂದ ಕೆಲವು ಸಂದರ್ಭ ದೂರ ಪ್ರದೇಶಕ್ಕೆ ಬಾಡಿಗೆ ಮಾಡಲು ಹೆದರಿಕೆ ಆಗುತ್ತದೆ. ಹೀಗಾಗಿ ನಗರದಲ್ಲಿ ಚಾರ್ಜಿಂಗ್‌ ಕೇಂದ್ರ ತೆರೆಯಲು ಸರಕಾರ ಒತ್ತು ನೀಡಬೇಕು’ ಎನ್ನುತ್ತಾರೆ.

“ಚಾರ್ಜಿಂಗ್‌ ಕೇಂದ್ರದ ಬಗ್ಗೆ  ಸರಕಾರಕ್ಕೆ ವರದಿ’ ಇ-ಸಂಚಾರವನ್ನು ಉತ್ತೇಜಿಸುವ ಸಲುವಾಗಿ ವಿದ್ಯುತ್‌ ವಾಹನಗಳ ಸಂಖ್ಯೆ ನಗರದಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಆದರೆ ಸದ್ಯ ಇವಿ ಚಾರ್ಜಿಂಗ್‌ ಸ್ಟೇಶನ್‌ ನಗರದಲ್ಲಿ ಲಭ್ಯವಿಲ್ಲ. ಹೀಗಾಗಿ ಸರಕಾರದ ವತಿಯಿಂದಲೇ ಚಾರ್ಜಿಂಗ್‌ ಸ್ಟೇಶನ್‌ ತೆರೆಯುವ ಸಂಬಂಧ ಚಿಂತನೆ ನಡೆಸಲಾಗಿದೆ. ನಗರದ ಯಾವ ಪ್ರದೇಶದಲ್ಲಿ ಚಾರ್ಜಿಂಗ್‌ ಕೇಂದ್ರ ತೆರೆಯಬೇಕು ಎಂಬ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು.ಆರ್‌.ಎಂ. ವರ್ಣೇಕರ್‌, ಆರ್‌ಟಿಒ, ಮಂಗಳೂರು

ಟಾಪ್ ನ್ಯೂಸ್

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ

ಯಮುನಾ ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

Yamuna ನದಿಯಲ್ಲಿ ಡಾ| ಮನಮೋಹನ್‌ ಸಿಂಗ್‌ ಚಿತಾಭಸ್ಮ ವಿಸರ್ಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Israel ಪ್ರಧಾನಿ ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಶಸ್ತ್ರಚಿಕಿತ್ಸೆ

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Kazakhstan: ಕಜಕ್‌ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್‌

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Rajasthan: ಕಾಂಗ್ರೆಸ್‌ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.