ಗ್ರಾಮ ಪಂಚಾಯತ್ : ವಿದ್ಯುತ್‌ ಕಣ್ಣಾಮುಚ್ಚಾಲೆ

Team Udayavani, Jun 12, 2018, 2:15 AM IST

electric-11-6.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿ ನಾದ್ಯಂತ‌ ಕೆಲವು ದಿನಗಳಿಂದ ವಿದ್ಯುತ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದು, ಗ್ರಾಮೀಣ ಭಾಗದ ಜನರು ಮಳೆಗಾಲದ ಸಂದರ್ಭದಲ್ಲಿ ಕತ್ತಲೆಯಲ್ಲಿ ಜೀವನ ನಡೆಸುವಂತಾಗಿದೆ. ಬೇಸಗೆಯಲ್ಲಿ ಪವರ್‌ ಕಟ್‌ ನ ಬಿಸಿ ಅನುಭವಿಸಿದ ಜನರಿಗೆ ಮಳೆಗಾಲದಲ್ಲಿ ಪುನಃ ವಿದ್ಯುತ್‌ ಸರಬರಾಜಿನ ಅಡಚಣೆ ಮಾತ್ರ ತಪ್ಪಿಲ್ಲ. ತುರ್ತು ಕಾಮಗಾರಿಯ ನಿಮಿತ್ತ ವಾರಕ್ಕೊಮ್ಮೆ ಬೆಳಗ್ಗಿನಿಂದ ಸಂಜೆಯವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ. ಮಳೆಗಾಲ ಆರಂಭವಾಗುವ ಮುನ್ನ ವಿದ್ಯುತ್‌ ತಂತಿಗಳಿಗೆ ತಾಗಿಕೊಂಡಿರುವ ಮರದ ಗೆಲ್ಲು ತೆಗೆಯುವ ಟ್ರೀ- ಕಟ್ಟಿಂಗ್‌ ಕಾರ್ಯ ಸಮರ್ಪಕವಾಗಿ ನಡೆಸದ ಕಾರಣ ಈ ರೀತಿ ಅಡಚಣೆಯಾಗುತ್ತಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಒಂದು ಸಿಡಿಲು, ಗಾಳಿ ಬಂದರೆ ಸಾಕು ಹೋದ ಕರೆಂಟ್‌ ಮಾತ್ರ ಬರುವುದು ಎರಡು ಮೂರು ದಿನಗಳ ನಂತರವೇ!

ವಿಪರೀತ ಗಾಳಿ ಮಳೆಯಿಂದಾಗಿ ವಿದ್ಯುತ್‌ ಲೈನ್‌ ಮೇಲೆ ಮರದ ಕೊಂಬೆಗಳು ಮುರಿದು ಬೀಳುವುದರಿಂದ ಕಂಬ, ತಂತಿಗಳು ತುಂಡಾಗಿ ಸಮಸ್ಯೆಗಳು ಉದ್ಭವಿಸುತ್ತಿದೆ. ಬಹುತೇಕ ಗ್ರಾಮೀಣ ಭಾಗ ಅರಣ್ಯ ಪ್ರದೇಶದಿಂದ ಕೂಡಿರುವುದೇ ಮಳೆಗಾಲದಲ್ಲಿ ಸಮಸ್ಯೆ ಹೆಚ್ಚಾಗಲು ಕಾರಣವಾಗಿದೆ. ರಾತ್ರಿಯಾಗುತ್ತಲೇ ವಿದ್ಯುತ್‌ ಸಮಸ್ಯೆ ಅಧಿಕವಾಗಿದ್ದು, ರಾತ್ರಿ ಇಡೀ ವಿದ್ಯುತ್‌ ಸರಬರಾಜಿರುವುದಿಲ್ಲ. ಕಳೆದ ಎರಡು ದಿನಗಳಿಂದ ವಿದ್ಯುತ್‌ ಸರಬರಾಜಿನಲ್ಲಿ ವಿಪರೀತ ಅಡಚಣೆಯಾಗುತ್ತಿದ್ದು ಒಂದೊಮ್ಮೆ ಬಂದರೂ ಕೇವಲ 5 ನಿಮಿಷ ಮಾತ್ರ ಇದ್ದು ಮತ್ತೆ ಹೋದರೆ ಬರುವುದು ಮರು ದಿನವೇ. ಇಲಾಖೆಯವರಿಗೆ ಫೋನಾಯಿಸಿದರೆ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ. ಎಷ್ಟು ಬಾರಿ ಕರೆ ಮಾಡಿದರೂ ಹೆಚ್ಚಾಗಿ ಕಾರ್ಯನಿರತವಾಗಿರುತ್ತದೆ. ಒಂದೊಮ್ಮೆ ಕರೆ ಸ್ವೀಕರಿಸಿದರೆ 12 ಗಂಟೆಗೆ ಬರುತ್ತದೆ. ಲೈನ್‌ ನಲ್ಲಿ ರಿಪೇರಿ ನಡೆಯುತ್ತಿದೆ. ಟ್ರಿಪ್‌ ಆಗುತ್ತಿದೆ. ಫಾಲ್ಟ್ ಸಿಕ್ಕಿಲ್ಲ ಎನ್ನುವ ಸಮಜಾಯಿಷಿ ನೀಡಿ ಜಾರಿಕೊಳ್ಳುತ್ತಾರೆ. ಶಾಲಾ ಕಾಲೇಜು ಶುರುವಾಗಿದೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ಅಡಚಣೆಯಾಗುತ್ತಿದೆ ಎನ್ನುತ್ತಾರೆ ಸ್ಥಳೀಯರು. ಬಾವಿ ಇಲ್ಲದೆ ಕೆರೆಯ ನೀರನ್ನು ಆಶ್ರಯಿಸಿರುವ ಮನೆಯವರಿಗೆ ಪಂಪ್‌ ಚಾಲನೆ ಮಾಡಲು ವಿದ್ಯುತ್‌ ಇಲ್ಲದೆ ಮಳೆ ನೀರನ್ನೇ ಆಶ್ರಯಿಸುವಂತಾಗಿದೆ. ಇನ್ನಾದರೂ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ಕಾರ್ಯ ಪ್ರಗತಿ

ಗ್ರಾಮೀಣ ಭಾಗದಲ್ಲಿ ಮಳೆಗಾಲದ ಸಂದರ್ಭ ಗಾಳಿ ಬಂದಾಗ ವಿದ್ಯುತ್‌ ತಂತಿಗೆ ರಬ್ಬರ್‌ ಹಾಗೂ ಇನ್ನಿತರ ಮರಗಳ ಗೆಲ್ಲು ತಾಗಿ ವಿದ್ಯುತ್‌ ಟ್ರಿಪ್‌ ಆಗುತ್ತದೆ. ತಾಲೂಕಿನ ವಿವಿಧೆಡೆ ವಿದ್ಯುತ್‌ ಕಂಬಗಳಿಗೂ ಹಾನಿಯಾಗಿದೆ. ಇನ್ನು ಎರಡು ದಿನದಲ್ಲಿ ಸಮಸ್ಯೆ ಪೂರ್ಣ ಬಗೆಹರಿಯಲಿದೆ. ಜೂ. 1 ರಿಂದ ಉಜಿರೆ ಹಾಗೂ ಬೆಳ್ತಂಗಡಿ ಸಬ್‌ ಡಿವಿಜನ್‌ ಗೆ ತಲಾ 10 ಮಂದಿಯ 2 ಬ್ಯಾಚ್‌ ಮಾಡಿ ಟ್ರೀ ಕಟ್ಟಿಂಗ್‌ ಕಾರ್ಯ ನಡೆಸಲಾಗುತ್ತಿದೆ. 
– ಶಿವಶಂಕರ್‌, AE, ಮೆಸ್ಕಾಂ ಬೆಳ್ತಂಗಡಿ

ಕರೆ ಸ್ವೀಕರಿಸಿ
ವಿದ್ಯುತ್‌ ಪೂರೈಕೆ ವ್ಯತ್ಯಯ ಎಂಬುದು ಇಲ್ಲಿ ನಿತ್ಯ ನಿರಂತರ. ಬೇಸಿಗೆಯಲ್ಲಿ ಲೈನ್‌ ಕಟ್ಟಿಂಗ್‌ ಎಂದು ದಿನಗಟ್ಟಲೆ ವಿದ್ಯುತ್‌ ತೆಗೆದು ಮಳೆಗಾಲ ಬಂದ ಕೂಡಲೇ ಮರ ಗಿಡಗಳು ಲೈನ್‌ ಮೇಲೆ ಬೀಳುವುದು ವಿಪರ್ಯಾಸ. ಸ್ಥಳೀಯ ಮುಂಡಾಜೆ ಮೆಸ್ಕಾಂನವರು ಗ್ರಾಹಕರ ಯಾವುದೇ ದೂರವಾಣಿ ಕರೆಗೆ ಸ್ಪಂದಿಸದಿರುವುದು ಶೋಚನೀಯ ವಿಚಾರ. 
– ವಿದ್ಯುತ್‌ ಬಳಕೆದಾರ, ಮುಂಡಾಜೆ

ಟಾಪ್ ನ್ಯೂಸ್

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.